ಅತ್ಯಾಚಾರವೆಸಗಿ ಬ್ಲ್ಯಾಕ್‌ಮೇಲ್: ಚಿತ್ರ ನಿರ್ಮಾಪಕ ವೀರೇಂದ್ರ ಬಾಬು ಬಂಧನ

ಅತ್ಯಾಚಾರ

ಬೆಂಗಳೂರು: ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿದ ಮತ್ತು ಅಪರಾಧದ ವಿಡಿಯೋವನ್ನು ಸೋರಿಕೆ ಮಾಡುವುದಾಗಿ ಬೆದರಿಸಿ ಸಂತ್ರಸ್ತೆಯಿಂದ ಸುಲಿಗೆ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ಚಿತ್ರ ನಿರ್ಮಾಪಕ, ನಟ ವೀರೇಂದ್ರ ಬಾಬು ಅವರನ್ನು ರಾಜ್ಯ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಘಟನೆ 2021ರಲ್ಲಿ ನಡೆದಿದ್ದು ಆರೋಪಿ ವೀರೇಂದ್ರ ಬಾಬು ಸಂತ್ರಸ್ತೆಯಿಂದ 15 ಲಕ್ಷ ರೂಪಾಯಿಗೆ ಬೇಡಿಕೆಯಿಟ್ಟಿದ್ದಾರೆ. ಹಣ ನೀಡದಿದ್ದರೆ ವೀಡಿಯೊವನ್ನು ಸೋರಿಕೆ ಮಾಡುವುದಾಗಿ ಬೆದರಿಕೆ ಹಾಕಿದ್ದಾಗಿ ದೂರಲಾಗಿದೆ ಎಂದು ಪೊಲೀಸರ ಹೇಳಿದ್ದಾರೆ.

ಇದನ್ನೂ ಓದಿ: ‘ಹೆಡ್ಡಾಫೀಸು ಬಿಜೆಪಿ ಕಚೇರಿಯೇ?’ | ಸುವರ್ಣ ನ್ಯೂಸ್‌ ವಿರುದ್ಧ ಕಾಂಗ್ರೆಸ್ ಆಕ್ರೋಶ

ಆರೋಪಿಗೆ ಹಣ ಕೊಡಲು ಚಿನ್ನಾಭರಣ ಮಾರಾಟ ಮಾಡಬೇಕಾಯಿತು ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ. ಆದರೆ ಜುಲೈ 30 ರಂದು ಆರೋಪಿ ಮತ್ತೆ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ. ಮಹಿಳೆಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ಬಂದೂಕು ತೋರಿಸಿ ಬೆದರಿಸಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

ಅತ್ಯಾಚಾರ ಹಾಗೂ ಜೀವ ಬೆದರಿಕೆ ಹಾಕಿರುವ ಬಗ್ಗೆ ದೂರು ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಸ್ನೇಹಿತರ ವಿರುದ್ಧವೂ ಕೊಡಿಗೇಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ವರದಿಯಾಗಿದೆ.

ವಿಡಿಯೊ ನೋಡಿ: ಬಾಕಿ ಬಿಲ್‌ ಪಾವತಿಗೆ ವಿಳಂಬ : “ಬೆಂಗಳೂರಿನ ಎಲ್ಲಾ ಕಾಮಗಾರಿಗಳು ಬಂದ್”– ಸರ್ಕಾರಕ್ಕೆ ಖಡಕ್‌ ಎಚ್ಚರಿಕೆ

Donate Janashakthi Media

Leave a Reply

Your email address will not be published. Required fields are marked *