ಬೆಂಗಳೂರು: ಕರ್ನಾಟಕ ಹೈಕೋರ್ಟ್ ಬೈಕ್ ಟ್ಯಾಕ್ಸಿ ರ‍್ಯಾಪಿಡೋ, ಉಬರ್ ಸೇವೆಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸುವಂತೆ ಆದೇಶ ನೀಡಿದ್ದೂ, ಇದೀಗ ರಾಜ್ಯಾದ್ಯಂತ ಈ ಸೇವೆಗಳನ್ನು ಸ್ಥಗಿತಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶ ಹೊರಡಿಸಿದ್ದಾರೆ.
ಈ ಕುರಿತಾಗಿ ಸಾರಿಗೆ ಇಲಾಖೆಯ ಕಾರ್ಯದರ್ಶಿ ಆಯುಕ್ತರಿಗೆ ಪತ್ರ ಬರೆದಿರುವ ಸಚಿವರು, ಕೋರ್ಟ್ನ ಆದೇಶವನ್ನು ಕಾರ್ಯಗತಗೊಳಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಮುಂದಿನ 6 ವಾರಗಳಲ್ಲಿ ರ‍್ಯಾಪಿಡೋ ಸೇರಿದಂತೆ ಇತರ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿ ಹೈಕೋರ್ಟ್ ಕಳೆದ ಏ.2ರಂದು ಮಹತ್ವದ ಆದೇಶ ನೀಡಿತ್ತು.
ಇದನ್ನೂ ಓದಿ: ನೌಕಪಡೆ ಅಧಿಕಾರಿ ವಿನಯ್ ದಂಪತಿಯದ್ದು ಎನ್ನಲಾದ ವಿಡಿಯೋ ನಕಲಿ! ಮಾಧ್ಯಮಗಳ ವಿರುದ್ಧ ಕಿಡಿ
ಸರ್ಕಾರಿ ಮೋಟಾರು ವಾಹನ ಕಾಯ್ದೆ, 1988 ಸೆಕ್ಷನ್ 3ರಡಿ ಮಾರ್ಗಸೂಚಿಗಳನ್ನು ರೂಪಿಸಬೇಕು, ಅಲ್ಲಿಯವರೆಗೆ ಬೈಕ್ ಟ್ಯಾಕ್ಸಿಗಳು ತಮ್ಮ ಕಾರ್ಯನಿರ್ವಹಿಸುವಂತಿಲ್ಲ ಎಂದು ಕೋರ್ಟ್ ಹೇಳಿತ್ತು.
ರಾಜ್ಯದ ಎಲ್ಲಾ ಬೈಕ್ ಟ್ಯಾಕ್ಸಿ ಸೇವೆಗಳನ್ನು ಮುಂದಿನ ಆರು ವಾರಗಳ ಒಳಗೆ ನಿರ್ಬಂಧಿಸಬೇಕು ಎಂದು ಕೋರ್ಟ್ ಹೇಳಿದ್ದು, ರ‍್ಯಾಪಿಡೋ, ಉಬರ್, ಓಲಾ ಸೇರಿದಂತೆ ಇತರೆ ಎಲ್ಲಾ ಬೈಕ್ ಟ್ಯಾಕ್ಸಿಗಳ ಸೇವೆ ನಿಲ್ಲಿಸಲಾಗುತ್ತದೆ. 6 ವಾರಗಳ ಒಳಗಾಗಿ ಮಾರ್ಗಸೂಚಿ ಹೊರಡಿಸಬೇಕು ಎಂದು ಸರ್ಕಾರಕ್ಕೆ ಕೋರ್ಟ್ ಸೂಚನೆ ನೀಡಿತ್ತು.
ಇದನ್ನೂ ನೋಡಿ: ಶಾಂತಿ ಸ್ಥಾಪಿಸುವ ಬದಲು ಪ್ರಚೋದಿಸುತ್ತಿರುವ ಗೋಧಿ ಮೀಡಿಯಾ ಬಗ್ಗೆ ಕಾಶ್ಮೀರಿ ಜನರ ಆಕ್ರೋಶ Janashakthi Media