ಬೆಂಗಳೂರು: ಕಳೆದ ವರ್ಷ ಚಲನಚಿತ್ರೋತ್ಸವಕ್ಕೆ ಆಹ್ವಾನಿಸಲು ಹೋದಾಗ, ನನ್ನ ಮನೆ ಇರೋದು ಹೈದರಾಬಾದ್‌ನಲ್ಲಿ, ಕರ್ನಾಟಕ ಎಲ್ಲಿದೆ ಅಂತ ಗೊತ್ತಿಲ್ಲ ಅಂದಿದ್ರು ಎಂದು ಶಾಸಕ ಗಣಿಗ ರವಿಕುಮಾರ್ ಕಿಡಿಕಾರಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಿನಿಮಾದವರು ಬಾಯಿಮುಚ್ಚಿಕೊಂಡು ಇರಬೇಕು. ರಶ್ಮಿಕಾ ಮಂದಣ್ಣ ಕಿರಿಕ್ ಪಾರ್ಟಿ ಸಿನಿಮಾದಿಂದ ಬೆಳೆದವರು. ಅವರನ್ನು ಕಳೆದ ವರ್ಷ ಚಲನಚಿತ್ರೋತ್ಸವಕ್ಕೆ ಆಹ್ವಾನ ಮಾಡಿದ್ವಿ. ಆದರೆ ನಾನು ಹೈದರಾಬಾದ್‌ನಲ್ಲಿ ಇರೋದು, ನನಗೆ ಕರ್ನಾಟಕ ಎಲ್ಲಿದೆ ಅಂತಾ ಗೊತ್ತಿಲ್ಲ, ಟೈಂ ಇಲ್ಲ, ಬರಲ್ಲ ಎಂದು ಹೇಳಿದ್ದರು. ಇವರಿಗೆ ಬುದ್ದಿ ಕಲಿಸಬೇಕಲ್ವಾ? ಎಂದು ಕೆಂಡಕಾರಿದರು.
ಇದನ್ನು ಓದಿ:ಬಿಜೆಪಿಗಿಂತ ಕಾಂಗ್ರೆಸ್ ಅವಧಿಯಲ್ಲಿ ಅತಿ ಹೆಚ್ಚು ಕಮಿಷನ್: ಗುತ್ತಿಗೆದಾರರ ಸಂಘ
ನಾನು ಸಿಎಂ- ಡಿಸಿಎಂಗೆ ಪತ್ರ ಬರೆಯುತ್ತೇನೆ. ಸಿನಿಮಾ ಸಬ್ಸಿಡಿಗಳನ್ನು ನಿಲ್ಲಿಸುವ ಬಗ್ಗೆ ಯೋಚಿಸಬೇಕು. ಆಂಧ್ರದ ನರಸಿಂಹಲು ಡಿಕೆಶಿ ವಿರುದ್ಧ ಮಾತನಾಡುತ್ತಾನೆ. ಆಂಧ್ರಪ್ರದೇಶದಿಂದ ಬಂದು ದುಡ್ಡು ದೋಚಿಕೊಂಡು ಹೋಗಿ, ನಮ್ಮ ಬಗ್ಗೆ ಮಾತನಾಡುತ್ತಾನೆ. ಮೊನ್ನೆ ಸಿಸಿಎಲ್ ಮ್ಯಾಚ್ ನಡೀತು ಅಲ್ವಾ, ಆಗ ನಿಲ್ಲಿಸಬೇಕಿತ್ತು. ಇದು ಲಾಸ್ಟ್ ವಾರ್ನಿಂಗ್. ಚಲನಚಿತ್ರ ಮಂಡಳಿಯವರು ಬಾಯಿ ಮುಚ್ಚಿಕೊಂಡು ಇರಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.ಇದನ್ನು ಓದಿ:ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಕೆ; ಸದಸ್ಯೆ ರೇಷ್ಮಾ ಶ್ರೀಧರ ಸದಸ್ಯತ್ವ ರದ್ದು
ಡಿಕೆಶಿ ಸಿಎಂ ಆಗುವುದನ್ನು ಯಾರಿಂದಲೂ ತಪ್ಪಿಸಲು ಆಗಲ್ಲ ಎಂಬ ಮೊಯ್ಲಿ ಹೇಳಿಕೆ ವಿಚಾರವಾಗಿ ಮಾತನಾಡಿ, ನಾನು ಇನ್ನೂ ಪೇಪರ್ ಓದಿಲ್ಲ, ಓದ್ಕೊಂಡು ಬಂದು ನಂತರ ಮಾತಾಡುವೆ ಎಂದು ಹೇಳಿದರು.