- ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ, ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಮತ್ತು ಭಾರತ ವಿದ್ಯಾರ್ಥಿ ಫೆಡರೇಷನ್ ಆಯೋಜಿಸಿದ ವೆಬಿನಾರ್
ಬೆಂಗಳೂರು: ಬಿಜೆಪಿ ನಾಯಕತ್ವದ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿ-2020ಯಲ್ಲಿ ಶಾಲಾ ಪೂರ್ವ ಶಿಕ್ಷಣ ಕುರಿತು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ, ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಮತ್ತು ಭಾರತ ವಿದ್ಯಾರ್ಥಿ ಫೆಡರೇಷನ್ ಜಂಟಿಯಾಗಿ ವೆಬಿನಾರ್ ಆಯೋಜಿಸಿದ್ದವು.
ವೆಬಿನಾರ್ ಅನ್ನು ಕರ್ನಾಟಕ ಹೈಕೋರ್ಟ್ ನ ವಿಶ್ರಾಂತ ನ್ಯಾಯಮೂರ್ತಿಗಳಾದ ನ್ಯಾ. ಎಚ್.ಎನ್. ನಾಗಮೋಹನ್‌ದಾಸ್ ಉದ್ಘಾಟಿಸಿದರು. ರಾಷ್ಟ್ರೀಯ ಶಿಕ್ಷಣ ನೀತಿ-2020ಯಲ್ಲಿ ಶಾಲಾ ಶಿಕ್ಷಣದ ಕುರಿತು ಸೆಂಟರ್ ಫಾರ್ ಬಜೆಟ್ ಅಂಡ್ ಪಾಲಿಸಿ ಸ್ಟಡೀಸ್ (ಸಿಬಿಪಿಎಸ್) ನ ನಿರ್ದೇಶಕರಾದ ಜ್ಯೋತ್ಸ್ನಾ ಝಾ, ಶಾಲಾ ಪೂರ್ವ ಶಿಕ್ಷಣದ ಕುರಿತು ಶಿಕ್ಷಣ ತಜ್ಞರಾದ ಕೋಡಿ ರಂಗಪ್ಪ ವಿಷಯ ಮಂಡಿಸಿದರು.
ವೆಬಿನಾರ್‌ನ ಅಧ್ಯಕ್ಷತೆಯನ್ನು ಸಿಐಟಿಯು ರಾಜ್ಗಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ವಹಿಸಿದ್ದರು. ಪ್ರಾಸ್ತಾವಿಕವಾಗಿ ಭಾರತ ವಿದ್ಯಾರ್ಥಿ ಫೆಡರೇಷನ್‌ನ ರಾಜ್ಯ ಕಾರ್ಯದರ್ಶಿ ವಾಸುದೇವರೆಡ್ಡಿ ಮಾತನಾಡಿದರು.
ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಸುನಂದ ಸ್ವಾಗತಿಸಿದರು. ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಲಿನಿ ಮೇಸ್ತ ವೆಬಿನಾರ್ ನಿರ್ವಹಿಸಿದರು.