ಸಚಿವೆ ಲಕ್ಷ್ಮೀ ಹೆಬ್ಬಳ್ಕರ್ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಪ್ರಕರಣ: ವಾಯ್ಸ್ ಸ್ಯಾಂಪಲ್ ನೀಡಲು ನಿರಾಕರಿಸಿದ ಸಿಟಿ ರವಿ

ಬೆಂಗಳೂರು: ಎಂಎಲ್‌ಸಿ ಸಿಟಿ ರವಿ ಸಚಿವೆ ಲಕ್ಷ್ಮೀ ಹೆಬ್ಬಳ್ಕರ್ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಯ್ಸ್ ಸ್ಯಾಂಪಲ್ ನೀದಲು ನಿರಾಕರಿಸುತ್ತಿದ್ದಾರೆ  ಎಂದು ತಿಳಿದುಬಂದಿದೆ.

ವಿಧಾನ ಪರಿಷತ್ ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಳ್ಕರ್ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದ ಎಂಎಲ್‌ಸಿ ಸಿಟಿ ರವಿ ವಿರುದ್ಧ ಸಿಐಡಿ ಅಧಿಕಾರಿಗಳು ಕೋರ್ಟ್ ಮೆಟ್ಟಿಲೇರಿದ್ದಾರೆ.

ಇದನ್ನೂ ಓದಿ : ಅತ್ಯಾಚಾರ ಪ್ರಕರಣ: ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಅರ್ಜಿ ಇತ್ಯರ್ಥಗಳಿಸಿದ ಹೈಕೋರ್ಟ್

ಸಿ.ಟಿ.ರವಿ ವಾಯ್ಸ್ ಸ್ಯಾಂಪಲ್ ನೀಡಲು ನಿರಾಕರಿಸುತ್ತಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ಸಿ.ಟಿ.ರವಿ ತನಿಖೆಗೆ ಸಹಕರಿಸುತ್ತಿಲ್ಲ ಎಂದು ತಿಳಿಸಿದ್ದಾರೆ.

ಅರ್ಜಿ ವಿಚಾರಣೆ ನಡೆಸಿದ 42ನೇ ಎಸಿಎಂಎಂ ಕೋರ್ಟ್, ಸಿ.ಟಿ.ರವಿಗೆ ನೋಟಿಸ್ ಜಾರಿ ಮಾಡಿದೆ. ಜನವರಿ 17ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಇದನ್ನೂ ನೋಡಿ : ಸದನದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಆಕ್ಷೇಪಾರ್ಹ ಪದಬಳಸಿದ ಸಿಟಿ ರವಿ Janashakthi Media

Donate Janashakthi Media

Leave a Reply

Your email address will not be published. Required fields are marked *