ನವದೆಹಲಿ: ದೇಶದ ಎಲ್ಲೆಡೆ ಅತ್ಯಂತ ಹೆಚ್ಚಿನ ಚರ್ಚೆಗೆ ಒಳಗಾಗಿರುವ ಭಯೋತ್ಪಾದನಾ-ವಿರೋಧಿ ಕಾನೂನಡಿಯಲ್ಲಿ ಬಂಧಿತರಾಗಿದ್ದ ಮೂವರು ವಿದ್ಯಾರ್ಥಿ ಹೋರಾಟಗಾರರಿಗೆ ಜಾಮೀನು ನೀಡಿದ್ದು ಸರಿಯಾಗಿದೆ ಎಂದು ಸುಪ್ರೀಂ ಕೋರ್ಟ್ ವಿದ್ಯಾರ್ಥಿಗಳ ಜಾಮೀನು ರದ್ದತಿಗೆ ‘ಸುಪ್ರೀಂ’ ನಿರಾಕರಿಸಿದೆ.
ಕಳೆದ ವರ್ಷದಿಂದ ಬಂಧನದಲ್ಲಿದ್ದ ವಿದ್ಯಾರ್ಥಿ ಹೋರಾಟಗಾರರಾದ ನತಾಶಾ ನರ್ವಾಲ್, ದೇವಾಂಗನಾ ಹಾಗೂ ಆಸಿಫ್ ಇಕ್ಬಾಲ್ ರಿಗೆ ದೆಹಲಿ ಹೈಕೋರ್ಟ್ ನೀಡಿತ್ತು. ಇದನ್ನು ಪ್ರಶ್ನಿಸಿ ದೆಹಲಿ ಪೊಲೀಸರು ಜಾಮೀನು ಆದೇಶವನ್ನು ತಡೆಹಿಡಿಯಬೇಕೆಂದು ದೆಹಲಿ ಪೊಲೀಸರು ಬುಧವಾರ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದರು.
ಇದನ್ನು ಓದಿ: ದೆಹಲಿ ಗಲಭೆ: ಆಸೀಫ್, ಕಲಿತಾ, ನತಾಶಾ ತಿಹಾರ್ ಜೈಲಿನಿಂದ ಬಿಡುಗಡೆ
ಅರ್ಜಿಯ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ವಿ ರಾಮಸುಬ್ರಮಣಿಯನ್ ಅವರ ರಜಾ ಅವಧಿಯ ಪೀಠವು ಈ ವಿದ್ಯಾರ್ಥಿ ಕಾರ್ಯಕರ್ತರಿಗೆ ನೀಡಲಾದ ಜಾಮೀನುಗಳು ಸದ್ಯಕ್ಕೆ ಪರಿಣಾಮ ಬೀರುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಭವಿಷ್ಯದ ಪ್ರಕರಣಗಳಿಗೆ ಪೂರ್ವನಿದರ್ಶನವಾಗಿ ಬಳಸಲಾಗುವುದಿಲ್ಲ
‘ಭಯೋತ್ಪಾದನಾ-ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪಿತೂರಿ ಆರೋಪ ಹೊರಿಸಿರುವ ಮೂವರು ಕಾರ್ಯಕರ್ತರಿಗೆ ಜಾಮೀನು ನೀಡಿರುವ ದೆಹಲಿ ಹೈಕೋರ್ಟ್ ತೀರ್ಪನ್ನು ಮುಂದಿನ ಪ್ರಕರಣಗಳಿಗೆ ಪೂರ್ವನಿದರ್ಶನವಾಗಿ ಬಳಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಅಂತೆಯೇ ಹೈಕೋರ್ಟ್ ತೀರ್ಪಿನ ಕಾನೂನು ಅಂಶಗಳನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದ್ದು, ಮುಂದಿನ ತಿಂಗಳು ಈ ಪ್ರಕರಣವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ನ್ಯಾಯಾಧೀಶರು ಹೇಳಿದ್ದಾರೆ.
ಇದನ್ನು ಓದಿ: ದೆಹಲಿ ಹೈಕೋರ್ಟ್‌ನಿಂದ ಜಾಮೀನು ಪಡೆದ ಜೆಎನ್‌ಯು, ಜಾಮಿಯಾ ವಿದ್ಯಾರ್ಥಿಗಳು
ಸಾಲಿಸಿಟರ್ ಜನರಲ್ ವಾದವೇನು?
ವಿಚಾರಣೆಯ ಸಂದರ್ಭದಲ್ಲಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ವಿದ್ಯಾರ್ಥಿ ಕಾರ್ಯಕರ್ತರಿಗೆ ಜಾಮೀನು ನೀಡುವಾಗ ಇಡೀ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅನ್ನು ದೆಹಲಿ ಹೈಕೋರ್ಟ್ ತಲೆಕೆಳಗಾಗಿ ಮಾಡಿದೆ ಎಂದು ವಾದಿಸಿದರು.
ಅಲ್ಲದೆ ಈ ವಾದವನ್ನು ಆಲಿಸಿದ ನ್ಯಾಯಪೀಠ, ತೀರ್ಪು 100 ಪುಟಗಳನ್ನು ಹೊಂದಿದ್ದು, ಹೈಕೋರ್ಟ್ ತೀರ್ಪಿನ ಕಾನೂನು ಅಂಶಗಳನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದ್ದು, ಮುಂದಿನ ತಿಂಗಳು ಈ ಪ್ರಕರಣವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ನ್ಯಾಯಾಧೀಶರು ಹೇಳಿದರು.