ಧಾರವಾಡ | ಪೀಠಿಕೆ ಪಠಣ ಸಾಕಾಗದು, ಸಂವಿಧಾನ ಪಾಲನೆಯೇ ಆಡಳಿತದ ಕರ್ತವ್ಯ

ಧಾರವಾಡ: ಸಂವಿಧಾನದ ಆಶಯ ಮತ್ತು ತತ್ವಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು’ ದೇಶದ ಪ್ರತಿಯೊಬ್ಬ ಪ್ರಜೆಯು ಇಡೀ ಸಂವಿಧಾನವನ್ನು ಅಧ್ಯಯನ ಮಾಡಬೇಕೆ ಹೊರತು ಅದರ ಪೀಠಿಕೆ ಓದುವಿಕೆಗಷ್ಟೇ ಸೀಮಿತವಾಗಬಾರದು ಎಂದು ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎ.ಎಂ.ಖಾನ್ ಹೇಳಿದರು. ಧಾರವಾಡ

ಇಲ್ಲಿನ ಕರ್ನಾಟಕ ವಿಶ್ವವಿದ್ಯಾಲಯದ ಆವರಣದ ಗಾಂಧಿ ಭವನದಲ್ಲಿ  ‘ಪ್ರಜಾವಾಣಿ’, ‘ಡೆಕ್ಕನ್‌ ಹೆರಾಲ್ಡ್‌’ ಪತ್ರಿಕಾ ಬಳಗವು ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ‘ಸಂವಿಧಾನವೇ ಬೆಳಕು’ ಅಭಿಯಾನದಡಿ ಹಮ್ಮಿಕೊಂಡಿದ್ದ ವಿಚಾರ ಸಂಕಿರಣ ಹಾಗೂ ‘ಹೆಜ್ಜೆಯಿಡು ಹುಬ್ಬಳ್ಳಿ ಮತ್ತು ಧಾರವಾಡ ಸಂವಿಧಾನಕ್ಕಾಗಿ ನಡಿಗೆ (ವಾಕಥಾನ್‌) ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು. ಧಾರವಾಡ

ಇದನ್ನೂ ಓದಿ : ದ್ವೇಷ ಭಾಷಣ: ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ರಾಜ್ಯ ನಿರ್ದೇಶಕ ತತ್ವಗಳು ಸೇರಿ ದೇಶದ ನಾಗರಿಕನ ಮೂಲಭೂತ ಹಕ್ಕು, ಕರ್ತವ್ಯಗಳು ಸೇರಿ ಹಲವು ಅಂಶಗಳನ್ನು ಸಂವಿಧಾನವು ತಿಳಿಪಡಿಸುತ್ತದೆ. ಸಂವಿಧಾನದ ಪೀಠಿಕೆಯು ದೇಶದ ಸಾರ್ವಭೌಮ, ಸಮಾಜವಾದಿ, ಜಾತ್ಯತೀತ, ಪ್ರಜಾಸತ್ತಾತ್ಮಕ, ಗಣರಾಜ್ಯ ಅಂಶಗಳನ್ನು ತಿಳಿಪಡಿಸುತ್ತದೆ  ಎಂದರು.

ಕರ್ನಾಟಕ ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಪ್ರೊ. ಎನ್.ವೈ.ಮಟ್ಟಿಹಾಳ ಮಾತನಾಡಿ, ‘ಸಂವಿಧಾನ ಜಾರಿಯಾಗಿ 77 ವರ್ಷಗಳಾದರೂ ಇಂದಿಗೂ ದೇಶದಲ್ಲಿ ಸಮಾನತೆಗಾಗಿ ನಿತ್ಯ ಹೋರಾಟ ನಡೆಯುತ್ತಲೇ ಇದೆ’ ಎಂದು ಕಳವಳ ವ್ಯಕ್ತಪಡಿಸಿದರು.

ಧಾರವಾಡ | ಪೀಠಿಕೆ ಪಠಣ ಸಾಕಾಗದು, ಸಂವಿಧಾನ ಪಾಲನೆಯೇ ಆಡಳಿತದ ಕರ್ತವ್ಯ

ಗಾಂಧಿ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ. ಶಿವಾನಂದ ಶೆಟ್ಟರ್ ಅವರು, ‘ಮಹಿಳೆಯರು, ಮಕ್ಕಳು, ದಲಿತರು ಮತ್ತು ಅಲ್ಪಸಂಖ್ಯಾತರ ಮೇಲೆ ನಡೆಯುವ ದೌರ್ಜನ್ಯಗಳು ತಡೆಯಲು ಸಂವಿಧಾನದ ಆಶಯಗಳನ್ನು ಪಾಲಿಸಬೇಕು’ ಎಂದರು.

ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ.ಶುಭಾ ಮಾತನಾಡಿ, ‘ಸಂವಿಧಾನದಿಂದ ನಾವು ಏನು ಪಡೆದಿದ್ದೇವೆ. ನಮ್ಮ ಹೊಣೆಗಾರಿಕೆ ಏನು ಎಂಬುದನ್ನು ಪ್ರತಿಯೊಬ್ಬ ವಿದ್ಯಾರ್ಥಿಯು ಅರಿತುಕೊಳ್ಳಬೇಕು’ ಎಂದರು.

‘ಪ್ರಜಾವಾಣಿ’ ಹುಬ್ಬಳ್ಳಿ ಬ್ಯುರೊ ಮುಖ್ಯಸ್ಥ ರಾಹುಲ ಬೆಳಗಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಡೆಕ್ಕನ್‌ಹೆರಾಲ್ಡ್‌ ಬ್ಯುರೊ ಮುಖ್ಯಸ್ಥ ವೆಂಕಟರಾಜ್, ಟಿಪಿಎಂಎಲ್‌ ಸಂಸ್ಥೆಯ ಜಾಹೀರಾತು ವಿಭಾಗದ ಉಪ ಪ್ರಧಾನ ವ್ಯವಸ್ಥಾಪಕ ದಿವಾಕರ್‌ ಭಟ್‌ ಹಾಗೂ ಹಿರಿಯ ವಕೀಲರಾದ ಕೆ ಎಚ್‌ ಪಾಟೀಲ ಮತ್ತು ವಿಶ್ವವಿದ್ಯಾಲಯದ ಬೋಧಕ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇದನ್ನೂ ನೋಡಿ : ಬೀದಿ ನಾಟಕ | ಒಂದನ್ನಾದರೂ ಒತ್ತಿ ಎರಡನ್ನಾದರೂ ಒತ್ತಿ’ Janashakthi Media

Donate Janashakthi Media

Leave a Reply

Your email address will not be published. Required fields are marked *