ಬೆಂಗಳೂರು : 35 ಸಾವಿರ ಅತಿಥಿ ಶಿಕ್ಷಕರನ್ನು ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ನೇಮಕ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ. ಶೀಘ್ರದಲ್ಲಿಯೇ ಈ ಕುರಿತಾದ ಅಧಿಸೂಚನೆ ಹೊರ ಬೀಳಲಿದೆ.
ಶಾಲಾ ಶಿಕ್ಷಣ ಇಲಾಖೆ ಈ ಕುರಿತು ಜೂನ್ 3ರಂದು ಪ್ರಕಟಣೆ ಹೊರಡಿಸಿದೆ. 2024-25ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಅನೇಕ ಬೋಧಕ ಹುದ್ದೆಗಳು ಖಾಲಿ ಇವೆ.
ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ, ಖಾಯಂ ಶಿಕ್ಷಕರ ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ-ಇದರಲ್ಲಿ ಯಾವುದು ಮೊದಲೊ ಅಲ್ಲಿಯವರೆಗೆ ಶಿಕ್ಷಕರ ಕೊರತೆಯನ್ನು ನೀಗಿಸುವ ದೃಷ್ಟಿಯಿಂದ ಒಟ್ಟು 35 ಸಾವಿರ ಅತಿಥಿ ಶಿಕ್ಷಕರನ್ನು ತಾತ್ಕಾಲಿಕ ನೇಮಕಾತಿ ಮಾಡಿಕೊಳ್ಳಲು ಸರ್ಕಾರದ ಪತ್ರದಲ್ಲಿ ಅನುಮತಿ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಇದನ್ನು ಓದಿ : ಕೋಲಾರದ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು ಭರ್ಜರಿ ಗೆಲುವು
ಅತಿಥಿ ಶಿಕ್ಷಕರ ಹಾಜರಾತಿಯನ್ನು ಪ್ರತ್ಯೇಕವಾಗಿ ನಿರ್ವಹಿಸಲಾಗುವುದು, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನ 10 ಸಾವಿರ ರೂ. ನಿಗದಿಪಡಿಸಲಾಗಿದೆ ಎಂದು ತಿಳಿಸಲಾಗಿದೆ. ಅಲ್ಲದೆ, ಅತಿಥಿ ಶಿಕ್ಷಕರು ನೇಮಕಗೊಂಡ ಸ್ಥಳಕ್ಕೆ ಮುಂದೆ ಖಾಯಂ ಶಿಕ್ಷಕರು ನಿಯುಕ್ತಿಗೊಂಡರೆ ಅತಿಥಿ ಶಿಕ್ಷಕರನ್ನು ಕರ್ತವ್ಯದಿಂದ ಕೈ ಬಿಟ್ಟು, ತಾಲೂಕಿನಲ್ಲಿ ಖಾಲಿ ಇರುವ ಇತರ ಕಡೆಗೆ ನೇಮಕ ಮಾಡಲಾಗುವುದು ಎಂದು ಹೇಳಲಾಗಿದೆ.
ಪ್ರಸ್ತುತ ಖಾಲಿ ಇರುವ 33,863 ಹುದ್ದೆಗಳಿಗೆ ಮೊದಲ ಹಂತದಲ್ಲಿ ಜಿಲ್ಲಾವಾರು ಮತ್ತು ತಾಲೂಕುವಾರು ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.
ಇದನ್ನು ನೋಡಿ : ಮಹಾರಾಷ್ಟ್ರದಲ್ಲಿ ಬಿಜೆಪಿಯ ತಂತ್ರ ಬ್ಯೂಮರಾಂಗ್ ಆಗುತ್ತಾ? ಹೌದು ಎನ್ನುತ್ತಿವೆ ಲೆಕ್ಕಾಚಾರಗಳು!?