ಬೆಂಗಳೂರು : ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ವಿವಿಧ ವೃಂದಗಳ 15,000 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಈ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನ ಕಾರ್ಯದರ್ಶಿ (ಆಡಳಿತ) ಬಿ.ಕೆ. ಮಮತಾ ರಾಣಿ ಆದೇಶ ಹೊರಡಿಸಿದ್ದಾರೆ.
2026-27ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಘೋಷಿಸಿದ್ದಂತೆ, ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುವ ಪ್ರಕ್ರಿಯೆಗೆ ಸರ್ಕಾರ ಈಗ ಅಧಿಕೃತ ಚಾಲನೆ ನೀಡಿದೆ. ಆರ್ಥಿಕ ಇಲಾಖೆಯ ಅನುಮೋದನೆಯೊಂದಿಗೆ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ರಾಜ್ಯದ ಹಲವು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ದೀರ್ಘಕಾಲದಿಂದ ಮುಂದುವರಿದಿದ್ದು, ಬೋಧನೆ ಮತ್ತು ಕಲಿಕೆಯ ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆಯಲ್ಲಿ ಖಾಲಿ ಹುದ್ದೆಗಳ ಭರ್ತಿಯಿಂದ ವಿದ್ಯಾರ್ಥಿಗಳಿಗೆ ಸಮರ್ಪಕ ಬೋಧನೆ ದೊರೆಯುವ ನಿರೀಕ್ಷೆ ವ್ಯಕ್ತವಾಗಿದೆ. ಜೊತೆಗೆ ಸಾವಿರಾರು ಶಿಕ್ಷಕ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವೂ ಸೃಷ್ಟಿಯಾಗಲಿದೆ.
ಇದನ್ನೂ ಓದಿ : ಮತದಾರರ ಪಟ್ಟಿಯಿಂದ ಹೆಸರು ಅಳಿಸಿದವರಿಗೆ ಕಲ್ಯಾಣ ಯೋಜನೆ ನಿರಾಕರಣೆ?: ಚುನಾವಣಾ ಆಯೋಗ, ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
ನೇಮಕಾತಿ ಪ್ರಕ್ರಿಯೆಯಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಆದ್ಯತೆ ನೀಡಲಾಗಿದ್ದು, ಆ ಪ್ರದೇಶದಲ್ಲಿನ ಹೆಚ್ಚಿನ ಖಾಲಿ ಹುದ್ದೆಗಳನ್ನು ಮೊದಲ ಹಂತದಲ್ಲೇ ಭರ್ತಿ ಮಾಡುವ ಉದ್ದೇಶ ಹೊಂದಲಾಗಿದೆ. ಲಭ್ಯ ಮಾಹಿತಿಯಂತೆ, ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿರುವ ಸುಮಾರು ಶೇ.80ರಷ್ಟು ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಒತ್ತು ನೀಡಿದೆ.
ಹುದ್ದೆಗಳ ಜಿಲ್ಲಾವಾರು ಹಂಚಿಕೆ, ಅರ್ಹತೆ, ಮೀಸಲಾತಿ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ನೇಮಕಾತಿ ವೇಳಾಪಟ್ಟಿ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಶೀಘ್ರದಲ್ಲೇ ಅಧಿಕೃತ ಅಧಿಸೂಚನೆ ಮೂಲಕ ಪ್ರಕಟಿಸುವ ಸಾಧ್ಯತೆ ಇದೆ.
ಕಲ್ಯಾಣ ಕರ್ನಾಟಕಕ್ಕೆ ಮೀಸಲಾದ ಶಿಕ್ಷಕರ ಹುದ್ದೆಗಳು

ಕಲ್ಯಾಣ ಕರ್ನಾಟಕ ಹೊರತುಪಡಿಸಿದ ಭಾಗಗಳಿಗೆ ಶಿಕ್ಷಕರ ಹುದ್ದೆಗಳ ಹಂಚಿಕೆ

ಇದನ್ನೂ ನೋಡಿ : “19ನೇ ದಿನಕ್ಕೆ ಸೋನಮ್ ವಾಂಗ್ಚುಕ್ ಉಪವಾಸ – ಕೇಂದ್ರಕ್ಕೆ ಎಚ್ಚರಿಕೆಯ ಗಂಟೆ | ಗುರುರಾಜ ದೇಸಾಯಿ
