ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯ ಬಲವರ್ಧನೆಗೆ ಮುಂದಾಗಿರುವ ಸರ್ಕಾರ, ಮುಂದಿನ 100 ದಿನಗಳ ಒಳಗಾಗಿ ಬರೋಬ್ಬರಿ 15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಮಹತ್ವದ ಅನುಮೋದನೆ ನೀಡಿ ಸಿಹಿ ಸುದ್ದಿ ನೀಡಿದೆ. ಬೆಂಗಳೂರು
ಶಿಕ್ಷಕರ ಕೊರತೆಯನ್ನು ಹಂತ-ಹಂತವಾಗಿ ನೀಗಿಸಲು ಯೋಜಿಸಿರುವ ಸರ್ಕಾರ, ಒಟ್ಟಾರೆ 51,000 ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಯಿಂದ ಹಸಿರು ನಿಶಾನೆ ಪಡೆದುಕೊಂಡಿದೆ. ಈ ಬೃಹತ್ ನೇಮಕಾತಿ ಪ್ರಕ್ರಿಯೆಯ ಮೊದಲ ಹಂತವಾಗಿ, ಸದ್ಯಕ್ಕೆ 15,000 ಶಿಕ್ಷಕರ ಹುದ್ದೆಗಳನ್ನು ತುರ್ತಾಗಿ ಭರ್ತಿ ಮಾಡಲು ಆಡಳಿತಾತ್ಮಕ ಮತ್ತು ಆರ್ಥಿಕ ಅನುಮೋದನೆಯನ್ನು ಅಧಿಕೃತವಾಗಿ ನೀಡಲಾಗಿದೆ.
ಇದನ್ನೂ ಓದಿ: ವಿದ್ಯುತ್ ವ್ಯತ್ಯಯದ ಹಿಂದೆ ‘ಸಾಬೋಟಾಜ್’ ಶಂಕೆ: ನಿರ್ಮಲ್ ಕುಮಾರ್ ಆರೋಪ
ಬಹಳ ದಿನಗಳಿಂದ ಶಿಕ್ಷಕರ ಹುದ್ದೆಗಾಗಿ ಕಾಯುತ್ತಾ, ಟಿಇಟಿ (TET) ಮತ್ತು ಸಿಇಟಿ (CET) ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿದ್ದ ಲಕ್ಷಾಂತರ ನಿರುದ್ಯೋಗಿ ಪದವೀಧರರಿಗೆ ಸರ್ಕಾರದ ಈ ನಿರ್ಧಾರ ಹೊಸ ಭರವಸೆ ಮೂಡಿಸಿದೆ. ಮುಂದಿನ ವಾರ ಅಧಿಸೂಚನೆ ಪ್ರಕಟವಾದ ಬೆನ್ನಲ್ಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಅರ್ಹ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಗಮನಿಸುತ್ತಿರಲು ಕೋರಲಾಗಿದೆ.
ಇದನ್ನೂ ನೋಡಿ: ಇಬ್ಬರು ಬಾಲಕಿಯರ ಬದುಕು ಉಳಿಸಿದ ಹೋರಾಟ | ದೇವದಾಸಿ ಪದ್ಧತಿಗೆ ತಡೆ Janashakthi Media
