ಮುಂದಿನ 5 ದಿನಗಳ ಕಾಲ ಭಾರಿ ಮಳೆ; ಉಡುಪಿ ಜಿಲ್ಲೆಗೆ ರೆಡ್‌ ಅಲರ್ಟ್‌

ಬೆಂಗಳೂರು: ರಾಜ್ಯಾದ್ಯಂತ ಮುಂದಿನ ಐದು ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಮುದ್ರ ಮೈಲ್ಮೈನಲ್ಲಿ ವಾಯುಭಾರ ಕುಸಿತವಾಗಿದೆ ಎಂದು ದೃಢಪಡಿಸಿದ್ದು, ಇದರ ಪರಿಣಾಮ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ ಎಂದು ಹೇಳಿದೆ. ಕಾಲ

ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವ‌ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಜೊತೆಗೆ, ಎಚ್ಚರಿಕೆಯಿಂದ ಇರುವಂತೆ ಸಾರ್ವಜನಿಕರಲ್ಲೂ ಮನವಿ ಮಾಡಿದ್ದಾರೆ. ಕಾಲ

ಇದನ್ನೂ ಓದಿ: ಭಾರತ ಟೆಸ್ಟ್ ತಂಡದ ನಾಯಕರಾಗಿ ಶುಭಮನ್ ಗಿಲ್ ಆಯ್ಕೆ

ಜಿಲ್ಲೆಯಾದ್ಯಂತ ಬಿಟ್ಟುಬಿಡದೆ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಮುಂದಿನ ಮೂರು ದಿನ ಕೂಡ ಬಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಪ್ರವಾಸಿ ತಾಣಗಳಲ್ಲಿ, ನದಿ – ಸಮುದ್ರ ಪಾತ್ರಗಳಲ್ಲಿ ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕು. ಅಪಾಯಕಾರಿ ಸ್ಥಳಗಳಲ್ಲಿ ಪ್ರವಾಸಿಗರಿಗೆ ನಿಷೇಧ ಹೇರಬೇಕು ಎಂದು ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ತಿಳಿಸಿದ್ದಾರೆ. ‌

ಸಮುದ್ರ ಹಾಗೂ ನದಿ ತಟದಲ್ಲಿ ವಾಸಿಸುತ್ತಿರುವ ಜನರನ್ನು ಅಗತ್ಯಬಿದ್ದರೆ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳಾಂತರಿಸಬೇಕು. ಜನರ ಅನುಕೂಲಕ್ಕಾಗಿ ಕಾಳಜಿ ಕೇಂದ್ರಗಳನ್ನು ತೆಗೆಯಬೇಕು, ಏಳು ತಾಲೂಕು ಜನರ ಅನುಕೂಲಕ್ಕಾಗಿ ದಿನ 24 ಗಂಟೆ ಸಹಾಯವಾಣಿ ಕಾರ್ಯನಿರ್ವಹಿಸಬೇಕು ಎಂದು ಸಚಿವೆ ಹೆಬ್ಬಾಳಕರ್ ತಿಳಿಸಿದ್ದಾರೆ. ಸಾರ್ವಜನಿಕರು ಸಹ ಎಚ್ಚರಿಕೆ ವಹಿಸಬೇಕು, ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.

ಚುನಾವಣೆ ಪೂರ್ವ ರಾಜ್ಯದ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಶಕ್ತಿ ಕೊಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಮಹಿಳೆಯರು ಹಾಗೂ‌ ಬಡವರ ಮೇಲೆ ಕಾಳಜಿ ಹೊಂದಿರುವ ಪಕ್ಷ ಕಾಂಗ್ರೆಸ್. ಕೊರೋನಾ ಬಂದು ಹೋದ ಮೇಲೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿತು, ರೈತರು ಉಪಯೋಗಿಸುವ ರಸಗೊಬ್ಬರ, ಸಿಲಿಂಡರ್, ದಿನ ಬಳಕೆ ವಸ್ತುಗಳನ್ನು ಕೊಂಡುಕೊಳ್ಳುವುದೇ ದುಸ್ತರವಾಗಿತ್ತು.‌ ಗೃಹಲಕ್ಷ್ಮಿ ಯೋಜನೆಯ ಮೂಲಕ ನೀಡುವ ಎರಡು ಸಾವಿರ ರೂಪಾಯಿ ಎಷ್ಟೋ ಕುಟುಂಬಗಳಿಗೆ ಅನುಕೂಲವಾಗಿದೆ ಎಂದು ಹೇಳಿದರು.

ಇದನ್ನೂ ನೋಡಿ: ಪಹಲ್ಗಾಮ ಹತ್ಯೆ ಮತ್ತು ಸೇನಾ ಸಂಘರ್ಷ‌, ಯುದ್ಧೋನ್ಮಾದ ಮತ್ತು ಉನ್ಮಾದ ರಾಷ್ಟ್ರೀಯತೆ…Janashakthi Media

Donate Janashakthi Media

Leave a Reply

Your email address will not be published. Required fields are marked *