ಕರ್ತವ್ಯದ ವೇಳೆ ರೀಲ್ಸ್​ ಮಾಡಿದರೇ ಮುಲಾಜಿಲ್ಲದೆ ಅಮಾನತುಗೊಳಿಸಲಾಗುವುದು – ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು: ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಕೆಎಸ್​ಆರ್​ಟಿಸಿ ಬಸ್​ ಚಾಲಕರ ಮತ್ತು ನಿರ್ವಾಹಕರ ರೀಲ್ಸ್​ ವೈರಲ್​ ಆಗಿದ್ದವು. ಇದರಿಂದ ಜೀವ ಹಾನಿಯಾಗಿತ್ತು. ಹೀಗಾಗಿ ಕರ್ನಾಟಕ ಸಾರಿಗೆ ಇಲಾಖೆಯ ಚಾಲಕ ಮತ್ತು ನಿರ್ವಾಹಕರಿಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್​ ಸೂಚನೆ ನೀಡಿದ್ದಾರೆ. ಕರ್ತವ್ಯದ ವೇಳೆ ರೀಲ್ಸ್​ ಮಾಡಿದರೇ ಅಂತವರನ್ನು ಮುಲಾಜಿಲ್ಲದೆ ಅಮಾನತುಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಕರ್ತವ್ಯದ ವೇಳೆ ಕರ್ನಾಟಕ ಸಾರಿಗೆ ಇಲಾಖೆಯ (KRTC, BMTCCC, NWKRTC, KKRTC) ಚಾಲಕರು ಮತ್ತು ನಿರ್ವಾಹಕರು ರೀಲ್ಸ್​ ಮಾಡಿದರೇ ಅಂತವರನ್ನು ಮುಲಾಜಿಲ್ಲದೆ ಕೆಲಸದಿಂದ ತೆಗೆಯಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಎಚ್ಚರಿಕೆ ನೀಡಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರೀಲ್ಸ್​ ಮಾಡಿದವರು ಕೆಲಸದಲ್ಲಿ ಇರಲು ಲಾಯಕ್ ಇಲ್ಲ ಎಂದರು.

ಕಳೆದ ಮೇ ತಿಂಗಳಲ್ಲಿ ಚಾಲಕ ಛತ್ರಿ ಹಿಡಿದುಕೊಂಡು ಬಸ್​ ಓಡಿಸುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​ ಆಗಿತ್ತು. ಧಾರವಾಡ ಘಟಕದ ಬೇಟಗೇರಿ-ಧಾರವಾಡ ಮಾರ್ಗದಲ್ಲಿ ಸಂಚರಿಸುವ ಬಸ್‌ನಲ್ಲಿ ಚಾಲಕರಾಗಿ ಹನುಮಂತಪ್ಪ ಅ ಕಿಲ್ಲೇದಾರ ಹಾಗೂ ನಿರ್ವಾಹಕರಾಗಿ ಅನಿತಾ ಕರ್ತವ್ಯ ನಿರ್ವಹಿಸುತ್ತಿದ್ದರು. ಸಂಜೆ ಮಳೆ ಬರುತ್ತಿದ್ದಾಗ ಬಸ್ಸಿನಲ್ಲಿ ಪ್ರಯಾಣಿಕರು ಇಲ್ಲದೇ ಇದ್ದಾಗ ಚಾಲಕ ಹನುಮಂತಪ್ಪ ಛತ್ರಿ ಹಿಡಿದು ಬಸ್​ ಚಲಾಯಿಸಿದ್ದರು. ಛತ್ರಿ ಹಿಡಿದು ಚಾಲನೆ ಮಾಡುತ್ತಿದ್ದ ದೃಶ್ಯವನ್ನು ನಿರ್ವಾಹಕಿ ಮೊಬೈಲಿನಲ್ಲಿ ಸೆರೆ ಹಿಡಿದಿದ್ದರು.

ಇದನ್ನೂ ಓದಿ: ಇಡ್ಲಿ, ದೋಸ ಬದಲು ಪಾರ್ಸಲ್ ಪೊಟ್ಟಣದಲ್ಲಿ ಹಣ – ಮಾಲಕರಿಗೆ ಹಿಂದುರಿಗಿಸಿದ ಶಿಕ್ಷಕ

ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಕರ್ನಾಟಕ ಬಿಜೆಪಿ ವ್ಯಂಗ್ಯಚಿತ್ರವನ್ನು ಹಂಚಿಕೊಂಡಿದ್ದು ಕರ್ನಾಟಕದ ಸರ್ಕಾರದಿಂದ ಛತ್ರಿ ಭಾಗ್ಯಕ್ಕೆ ಚಾಲನೆ ಎಂದು ಸರ್ಕಾರವನ್ನು ಟೀಕಿಸಿತ್ತು. ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಎಕ್ಸ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಇದರಿಂದ ಸರ್ಕಾರಕ್ಕೆ ಮುಜುಗುರವಾಗಿತ್ತು. ನಂತರ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ತನಿಖೆ ನಡೆಸಿ, ಇದು ಮನರಂಜನೆಗಾಗಿ ಮಾಡಿದ ವಿಡಿಯೋ ಎಂದು ಸ್ಪಷ್ಟನೆ ನೀಡಿತ್ತು.

ಚಾಲಕನ ರೀಲ್ಸ್​ ಹುಚ್ಚಾಟಕ್ಕೆ ಎತ್ತುಗಳು ಬಲಿ

ಹುಬ್ಬಳ್ಳಿಯಿಂದ ಬಾಗಲಕೋಟೆಗೆ ಹೊರಟಿದ್ದ ವೇಳೆ ಕೆಎಸ್​ಆರ್​ಟಿಸಿ ಬಸ್ ಚಾಲಕ ರೀಲ್ಸ್ ಮಾಡಲು ಆರಂಭಿಸಿದ್ದರು. ಇದೇ ಸಮಯದಲ್ಲಿ ಮುಂದೆ ಹೋಗುತ್ತಿದ್ದ ಚಕ್ಕಡಿಯನ್ನು ಗಮನಿಸಿದೆ ರೀಲ್ಸ್ ಗುಂಗಿನಲ್ಲಿದ್ದ ಚಾಲಕ, ಹಿಂಬದಿಯಿಂದ ಚಕ್ಕಡಿಗೆ ಡಿಕ್ಕಿ ಹೊಡೆದಿದ್ದನು. ಬಸ್ ಡಿಕ್ಕಿಯಾದ ರಭಸಕ್ಕೆ ಎರಡು ಎತ್ತು ಸ್ಥಳದಲ್ಲೆ ಮೃತಪಟ್ಟಿದ್ದವು.  ರೈತ ಮಂಜುನಾಥ್ ರಂಗಪ್ಪ ಹೆಗ್ಗಣ್ಣವರ ಅವರ ಮೆದಳು‌ ನಿಷ್ಕ್ರೀಯಗೊಂಡಿತ್ತು.

ಇದನ್ನೂ ನೋಡಿ: ಭ್ರಷ್ಟಾಚಾರ ಹುಟ್ಟಹಾಕಿದ್ದೆ ಬಿಜೆಪಿ , ಭ್ರಷ್ಟರನ್ನು ಮಟ್ಟಹಾಕಿದ್ದರೆ ಈ ಹಗರಣ ನಡೆಯುತ್ತಿರಲಿಲ್ಲJanashakthi Media

Donate Janashakthi Media

Leave a Reply

Your email address will not be published. Required fields are marked *