ಜನಮತ 2023 : ವಿಧಾನಸಭೆ ಚುನಾವಣೆಗೆ ಒಟ್ಟು 5,102 ನಾಮಪತ್ರ ಸಲ್ಲಿಕೆ

Please follow and like us:

ಬೆಂಗಳೂರು : ಕರ್ನಾಟಕ ರಾಜ್ಯ ವಿಧಾನ ಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ನಿನ್ನೆಗೆ ಅಂತ್ಯಗೊಂಡಿದ್ದು, ಒಟ್ಟು 5,102 ನಾಮಪತ್ರಗಳು ಸಲ್ಲಿಕೆಯಾಗಿವೆ.

ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಒಟ್ಟು 3,632 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ.ಈ ಪೈಕಿ 3,327 ಪುರುಷ ಅಭ್ಯರ್ಥಿಗಳಿಂದ 4,710 ನಾಮಪತ್ರ ಸಲ್ಲಿಕೆಯಾಗಿದೆ. ಇನ್ನು 304 ಮಹಿಳಾ ಅಭ್ಯರ್ಥಿಗಳಿಂದ 391 ನಾಮಪತ್ರ ಸಲ್ಲಿಕೆ ಮಾಡಲಾಗಿದೆ. ಇತರೆಯಿಂದ ಒಂದು ನಾಮಪತ್ರ ಸಲ್ಲಿಸಲಾಗಿದೆ.

ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯ 8 ದಿನಗಳ ಅವಧಿಯಲ್ಲಿ ಬಿಜೆಪಿ ಅಭ್ಯರ್ಥಿಗಳಿಂದ ಒಟ್ಟು 707, ಕಾಂಗ್ರೆಸ್ ಅಭ್ಯರ್ಥಿಗಳಿಂದ 651, ಜೆಡಿಎಸ್ ಅಭ್ಯರ್ಥಿಗಳಿಂದ 455, ಎಎಪಿ ಅಭ್ಯರ್ಥಿಗಳಿಂದ 373, ಬಿಎಸ್​ಪಿ ಅಭ್ಯರ್ಥಿಗಳಿಂದ 179, ಸಿಪಿಐಎಂ ಅಭ್ಯರ್ಥಿಯಿಂದ 5, ಎನ್​ಪಿಪಿ ಅಭ್ಯರ್ಥಿಗಳಿಂದ 5 ನಾಮಪತ್ರ ಸಲ್ಲಿಕೆ ಮಾಡಲಾಗಿದೆ. ನೋಂದಾಯಿತ ಗುರುತಿಸದ ಪಕ್ಷಗಳ ಅಭ್ಯರ್ಥಿಗಳಿಂದ 1007 ಹಾಗೂ ಪಕ್ಷೇತರ ಅಭ್ಯರ್ಥಿಗಳಿಂದ ಒಟ್ಟು 1,720 ನಾಮಪತ್ರಗಳು ಸಲ್ಲಿಕೆಯಾಗಿವೆ.

ಇದನ್ನೂ ಓದಿ : ಜನಮತ 2023 : ಹಲವು ಪಕ್ಷಗಳ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಇಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಏ.24ರ ವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿರುತ್ತದೆ. ಈವರೆಗೆ ನಾಮಪತ್ರ ಸಲ್ಲಿಕೆಯಲ್ಲಿ ಬ್ಯುಸಿಯಾಗಿದ್ದ ಅಭ್ಯರ್ಥಿಗಳು ಶುಕ್ರವಾರದಿಂದ ಪೂರ್ಣ ಪ್ರಮಾಣದಲ್ಲಿ ತಮ್ಮ ಕ್ಷೇತ್ರಗಳಲ್ಲಿ ಪ್ರಚಾರದ ಕಾರ್ಯ ಪ್ರಾರಂಭಿಸಲಿದ್ದಾರೆ. ಏ. 24 ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದೆ. ನಂತರ ಕಣದಲ್ಲಿ ಉಳಿಯುವ ಅಭ್ಯರ್ಥಿಗಳ ಸ್ಪಷ್ಟ ಚಿತ್ರಣ ಸಿಗಲಿದೆ.

Please follow and like us:
Donate Janashakthi Media

Leave a Reply

Your email address will not be published. Required fields are marked *