ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಡಿಕೆಶಿ ನಾಮಪತ್ರವನ್ನು ರಾಜ್ಯ ಚುನಾವಣಾ ಆಯೋಗ ಅಂಗೀಕಾರಮಾಡಿದೆ.
ನಾಮಪತ್ರ ತಿರಸ್ಕೃತವಾಗುವ ಆತಂಕದಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ಶುಕ್ರವಾರ ತಮ್ಮ ಸಹೋದರ ಡಿ.ಕೆ. ಸುರೇಶ್ ಅವರಿಂದ ನಾಮಪತ್ರ ಹಾಕಿಸಿದ್ದರು.
ಇದೀಗ ನಾಮಪತ್ರದಲ್ಲಿ ಯಾವುದೇ ಲೋಪದೋಷಗಳಿಲ್ಲ. ಎಲ್ಲವೂ ಕ್ರಮಬದ್ಧವಾಗಿದೆ. ಹೀಗಾಗಿ ಡಿ.ಕೆ ಶಿವಕುಮಾರ್ ಅವರ ನಾಮಪತ್ರವನ್ನು ಚುನಾವಣಾಧಿಕಾರಿ ಮಾನ್ಯ ಮಾಡಿದ್ದಾರೆ.
ಐಟಿ, ಇಡಿ ಸೇರಿದಂತೆ ಯಾವುದೇ ದಾಳಿ ಭಯ ಡಿಕೆಶಿಗೆ ಇಲ್ಲ. ನಿರ್ಭಯವಾಗಿ ನಿರ್ಭೀತಿಯಿಂದ ಚುನಾವಣಾ ಕಾರ್ಯಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕನಕಪುರದಲ್ಲಿ ಡಿ.ಕೆ ಶಿವಕುಮಾರ್ ವಿರುದ್ಧ ಬಿಜೆಪಿಯಿಂದ ಕಂದಾಯ ಸಚಿವ ಆರ್ ಅಶೋಕ್ ಕಣಕ್ಕಿಳಿದಿದ್ದಾರೆ.