ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಕಾವು ಜೋರಾಗಿದೆ. ಎಲ್ಲಾ ಪಕ್ಷಗಳು ಅಬ್ಬರದ ಪ್ರಚಾರದಲ್ಲಿ ತೊಡಗಿವೆ. ಮೇ10 ರಂದು ಚುನಾವಣೆಗೆ ಮತದಾನ ನಡೆಯಲಿದೆ. ಎರಡು ದಿನಗಳ ಬಳಿಕ ಅಂದರೆ ಮೇ 13 ಕ್ಕೆ ಫಲಿತಾಂಶ ಹೊರಬೀಳಲಿದೆ. 2023ನೇ ಸಾಲಿನ ಸಾರ್ವತ್ರಿಕ ಚುನಾವಣೆಗೆ ಮತದಾನ ಇಂದಿನಿಂದ ಆರಂಭವಾಗಲಿದೆ.
ಏಪ್ರಿಲ್ 29 ರಿಂದ ಮೇ 6 ರವರೆಗೆ ಬ್ಯಾಲೆಟ್ ಮತದಾನಕ್ಕೆ ಅವಕಾಶವಿದೆ. ರಾಜ್ಯ ಸೇರಿದಂತೆ ರಾಜಧಾನಿ ಬೆಂಗಳೂರಿನಲ್ಲೂ ಬ್ಯಾಲೆಟ್ ಪೇಪರ್ ವೋಟಿಂಗ್ ಇದೆ. 80 ವರ್ಷ ಮೇಲ್ಪಟ್ಟ ವೃದ್ಧರು, ವಿಕಲ ಚೇತನರಿಗೆ ಹಾಗೂ ಚುನಾವಣೆಯಲ್ಲಿ ಭಾಗವಹಿಸುವ ಪೊಲೀಸ್, ಚುನಾವಣೆ ಸಿಬ್ಬಂದಿಗೆ ಮತದಾನಕ್ಕೆ ಅವಕಾಶ ಸಿಕ್ಕಿದೆ. ಇನ್ನು 80 ವರ್ಷ ಮೇಲ್ಪಟ್ಟ ವೃದ್ಧರಿಗೆ ಹಾಗೂ ಅಂಗವಿಕಲರಿಗೆ ಮನೆ ಬಳಿಯೇ ಮತ ಚಲಾಯಿಸುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.80 ವರ್ಷ ಮೇಲ್ಪಟ್ಟ ವೃದ್ಧರಿಗೆ ಚುನಾವಣಾ ಅಯೋಗದ ಸಿಬ್ಬಂದಿಗಳು ಅವರ ಮನೆ ಬಾಗಿಲಿನಲ್ಲಿಯೇ ಬ್ಯಾಲೆಟ್ ಪೇಪರ್ ನೀಡುತ್ತಾರೆ. ಈ ಮೂಲಕ ಹಿರಿಯ ನಾಗರೀಕರು ಮತ್ತು ವಿಕಲಚೇತನರಿಗೆ ಗೌಪ್ಯವಾಗಿ ಮತ ಚಲಾವಣೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ಗೌಪ್ಯ ಮತ ಚಲಾಯಿಸುವಾಗ ಚುನಾವಣೆ ಸಿಬ್ಬಂದಿ ಸೇರಿದಂತೆ ಸ್ಥಳೀಯ ಪೊಲೀಸರು ಹಾಜರಾಗಲಿದ್ದಾರೆ. ಮನೆಯಲ್ಲೇ ಮತದಾನ ಮಾಡುವಾಗ ವಿಡಿಯೋ ರೆಕಾರ್ಡಿಂಗ್ ಮಾಡಲಿದ್ದು, ಮತದಾನದ ನಂತರ ಸ್ಟ್ರಾಂಗ್ ರೂಮ್ ಗೆ ಮತ ಪೆಟ್ಟಿಗೆ ಶಿಪ್ಟ್ ಆಗಲಿದೆ.
99,529 ಮತದಾರರು : ಮನೆಯಿಂದಲೇ ಮತ ಚಲಾಯಿಸಲು ನೋಂದಾಯಿಸಿಕೊಂಡಿದ್ದಾರೆ. ಹೀಗಾಗಿ ಮತದಾನ ಪಡೆದುಕೊಳ್ಳಲು ಚುನಾವಣಾ ಸಿಬ್ಬಂದಿ ಮನೆಗೆ ಬರಲಿದ್ದಾರೆ. ಚುನಾವಣಾ ಸಿಬ್ಬಂದಿ ಮನೆಗೆ ಬಂದಾಗ ಮತದಾರರು ಮನೆಯಲ್ಲಿ ಇಲ್ಲದಿದ್ದರೆ ಎರಡನೇ ಅವಕಾಶ ನೀಡಲಾಗುತ್ತದೆ. ಎರಡನೇ ಬಾರಿಗೂ ಮನೆಯಲ್ಲಿ ಇಲ್ಲದಿದ್ದರೆ ಮೂರನೇ ಬಾರಿ ಅವಕಾಶ ನೀಡಲಾಗುವುದಿಲ್ಲ.
ಇದನ್ನೂ ಓದಿ : ಜನಮತ 2023 : ಏ.29 ರಿಂದ ಮೇ. 6 ರವರೆಗೆ 80 ವರ್ಷ ಮೇಲ್ಪಟ್ಟವರು ಹಾಗೂ ಅಂಗವಿಕಲರು ಮನೆಯಿಂದಲೇ ಮತದಾನ ಮಾಡಲು ಅವಕಾಶ
ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಹಾಗೂ ಪೊಲೀಸರಿಗೆ ಬ್ಯಾಲೆಟ್ ಮತದಾನದ ವ್ಯವಸ್ಥೆಯಿದ್ದು, ಇವರು ಕೂಡ ನಾಳೆಯಿಂದ ಬ್ಯಾಲೇಟ್ ಪೇಪರ್ ಮೂಲಕ ಮತದಾನ ಮಾಡಬಹುದು. ಈ ಎಲ್ಲಾ ಮತಗಳನ್ನೂ ಮೇ 13 ರಂದು ಮತ ಏಣಿಕೆ ದಿನ ಓಪನ್ ಮಾಡಲಾಗುತ್ತದೆ.