ಕಜಾವಿವಿ ವಿದ್ಯಾರ್ಥಿಗಳ ಸೆಮಿಸ್ಟರ ಫಲಿತಾಂಶ ಬಿಡುಗಡೆ, ಅಂಕಪಟ್ಟಿ ಸೇರಿದಂತೆ ಅನೇಕ ಸಮಸ್ಯೆಗಳ ಪರಿಹಾರಕ್ಕಾಗಿ ಎಸ್ಎಫ್ಐ ಮನವಿ.

ಶಿಗ್ಗಾಂವಿ: ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ(ಕಜಾವಿವಿ)  ಎಲ್ಲಾ ವಿಭಾಗದ ವಿದ್ಯಾರ್ಥಿಗಳ ಪ್ರಥಮ, ದ್ವೀತಿಯ, ತೃತೀಯ ಸೆಮಿಸ್ಟರ್ ಫಲಿತಾಂಶ ಬಿಡುಗಡೆಗಾಗಿ ಹಾಗೂ ಮುದ್ರಿತ ಅಂಕಪಟ್ಟಿ ಸೇರಿದಂತೆ ವಿದ್ಯಾರ್ಥಿಗಳ ಅನೇಕ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ನೇತೃತ್ವದಲ್ಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕುಲಸಚಿವರಾದ ಪ್ರೊ. ಸಿ.ಟಿ.ಗುರುಪ್ರಸಾದ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ದೇಶದ ಪ್ರತಿಷ್ಠಿತ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಸಾವಿರಾರು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಒದಗಿಸುವ ವಿವಿಯು ಅನೇಕ ಸಮಸ್ಯೆಗಳ ಮಧ್ಯೆ ನರಳಾಡುತ್ತಿದ್ದು ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಕೊಡಲಿ ಪೆಟ್ಟು ಬೀಳುತ್ತಿದೆ. ಪ್ರಥಮ, ದ್ವೀತಿಯ, ತೃತೀಯ ಸೆಮಿಸ್ಟರ್ ಫಲಿತಾಂಶ ಹಾಗೂ ಅಂಕಪಟ್ಟಿಯನ್ನು ಬಿಡದಿರುವ ಕಾರಣ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಅವಧಿಯು ಮುಗಿದಿದೆ ಆದ್ದರಿಂದ ತಾವು ಅಂಕಪಟ್ಟಿಯನ್ನು ಬಿಡುಗಡೆಮಾಡಿ ಸ್ಕಾಲರ್ಶಿಪ್ ಅವಧಿಯನ್ನು ಪುನರಾರಂಭಿಸಬೇಕು. ಸೇರಿದಂತೆ ಉನ್ನತ ಶಿಕ್ಷಣಕ್ಕೆ ಪೂರಕವಾಗಿ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಸರ್ಕಾರವು ಅನೇಕ ಸಮಸ್ಯೆಗಳ ಸುಳಿಯಲ್ಲಿ ವಿದ್ಯಾರ್ಥಿಗಳನ್ನು ತಳುತ್ತಿರುವುದು ಸರಿಯಲ್ಲ ಕೂಡಲೇ ಸರ್ಕಾರ ಹಾಗೂ ಮಾನ್ಯ ಕುಲಪತಿಗಳು ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕೆಂದು ಎಸ್ಎಫ್ಐ ಒತ್ತಾಯಿಸುತ್ತದೆ.

ಈ ಸಂದರ್ಭದಲ್ಲಿ ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಮಾತನಾಡಿ, ಕೂಡಲೇ ಕಜಾವಿವಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಫಲಿತಾಂಶ ಹಾಗೂ ಅಂಕಪಟ್ಟಿ ಸಮಸ್ಯೆಗಳನ್ನು ತ್ವರಿತವಾಗಿ ಪರಿಹಾರಕ್ಕೆ ಜಾವಿವಿ ಆಡಳಿತ ಮಂಡಳಿ ಸೂಕ್ತ ಕ್ರಮಕೈಗೊಳಲು ಮುಂದಾಗಬೇಕು. ಯಾವುದೇ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ ವಾಗದೇ ರೀತಿಯಲ್ಲಿ ನೋಡಿಕೊಳ್ಳಬೇಕು. ಯುಸಿಸಿಎಮ್ಎಸ್ ತಾಂತ್ರಿಕ ಸಮಸ್ಯೆ ರಾಜ್ಯಾದ್ಯಂತ ಎಲ್ಲಾ ವಿದ್ಯಾರ್ಥಿಗಳಿಗೆ ಮುಳುವಾಗಿದೆ ಸರ್ಕಾರಗಳು ಎಚ್ಚೆತೆಕೊಂಡು ಕೂಡಲೇ ವಿದ್ಯಾರ್ಥಿ ವಿರೋಧಿ ಈ ತಾಂತ್ರಿಕ ಪೋರ್ಟಲ್ ಅನ್ನು ರದ್ದು ಪಡಿಸಬೇಕು ಎಂದರು.

ಇದನ್ನೂ ಓದಿ : ಬಿಪಿಎಲ್ ಕುಟುಂಬಗಳಿಗೆ ಉಚಿತ ಎಂಆರ್​ಐ ಸ್ಕ್ಯಾನಿಂಗ್​: ಸಚಿವ ಸಂಪುಟ ಸಭೆ

ವಿದ್ಯಾರ್ಥಿಗಳು ನಿರಂತರವಾಗಿ ಮನವಿ ಪತ್ರ ನೀಡಿದರು ಯಾವುದೇ ರೀತಿಯ ಸ್ಪಂದನೆ ಸಿಗುತ್ತಿಲ್ಲ ಕೂಡಲೇ ವಿದ್ಯಾರ್ಥಿಗಳ ಸಮಸ್ಯೆಗಳ ಪರಿಹಾರಕ್ಕಾಗಿ ಮುಂದಾಗಬೇಕು. ಎರಡು ವರ್ಷಕ್ಕೆ ಮುಗಿಯಬೇಕಾದ ಸ್ನಾತಕೋತ್ತರ ಪದವಿ ಮೂರು ವರ್ಷಗಳ ಕಳೆದರು ಮುಗಿಯುತ್ತಿಲ್ಲ ಮುಂದಿನ ಉನ್ನತ ಶಿಕ್ಷಣಕ್ಕೆ ತೊಂದರೆ ಆಗುತ್ತಿದೆ. ಈಗಾಗಲೇ ಪರೀಕ್ಷೆ ಬರೆದ ಪ್ರಥಮ, ದ್ವೀತಿಯ, ತೃತೀಯ ಸೆಮಿಸ್ಟರ್ ಫಲಿತಾಂಶ ಬಿಟ್ಟರೆ ಮಾತ್ರ ಮುಂದಿನ ಸೆಮಿಸ್ಟರ್ ಪರೀಕ್ಷೆ ಹಾಜರಾಗುತ್ತೇವೆ ಇಲ್ಲವಾದರೆ ಪರೀಕ್ಷೆಯನ್ನು ಬಹಿಷ್ಕಾರಿಸುತ್ತೇವೆ. 27.01.2025 ಒಳಗೆ ಫಲಿತಾಂಶ ಬಿಡುಗಡೆಗಾಗಿ ಕುಲಪತಿಗಳು ಭರವಸೆ ನೀಡಿದ್ದಾರೆ ಒಂದು ವೇಳೆ ಭರವಸೆ ಹುಸಿಯಾದರೆ ವಿವಿ ಎದರು ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಜಾವಿವಿ ಎಸ್ಎಫ್ಐ ಘಟಕ ಅಧ್ಯಕ್ಷ ಅರುಣ್ ಪಾಂಡೆ, ಕಾರ್ಯದರ್ಶಿ ಸೌಭಾಗ್ಯ ಕೋಳಿವಾಡ ಆಕ್ರೋಶ ವ್ಯಕ್ತಪಡಿಸಿದರು.

ಮನವಿ ಪತ್ರ ಸ್ವೀಕರಿಸಿ ಜಾವಿವಿ ಕುಲಸಚಿವರಾದ ಪ್ರೊ. ಸಿ.ಟಿ. ಗುರುಪ್ರಶಾದ್ ಮಾತನಾಡಿ, ತಾಂತ್ರಿಕ ಸಮಸ್ಯೆ ಉಂಟಾಗಿ ಫಲಿತಾಂಶ ಬಿಡುಗಡೆಗೆ ತೊಡಕಾಗಿದೆ. ಆಡಳಿತ ಮಂಡಳಿ ಗಂಭೀರವಾಗಿ ಪರಿಗಣಿಸಿದೆ ಕೂಡಲೇ ಸಮಸ್ಯೆಗಳನ್ನು ಸರಿಪಡಿಸಿ ಶೀಘ್ರವಾಗಿ ಫಲಿತಾಂಶ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು. ಕಜಾವಿವಿ 

ಈ ಸಂದರ್ಭದಲ್ಲಿ ಎಸ್ಎಫ್ಐ ಘಟಕ ಉಪಾಧ್ಯಕ್ಷರಾದ ಕಾವ್ಯ ಎಮ್ ಕೆ, ಪ್ರತಿಭಾ ಪಿ ಬಿ, ಬಸವರಾಜ ಬಡಿಗೇರ್, ಚನ್ನಪ್ಪ, ಸಹ ಕಾರ್ಯದರ್ಶಿ ಗೀತಾ ಕೆ, ಶಿಲ್ಪಾ ಎಸ್, ವಿನೋದಕುಮಾರ್ ಡಿ, ಉಮೇಶ್ ಟಿ, ಪ್ರಶಾಂತ, ಸಂಜಯ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಕಜಾವಿವಿ  

ಇದನ್ನೂ ನೋಡಿ : ಬಳ್ಳಾರಿ ವಿಶ್ವವಿದ್ಯಾಲಯ : ಕಿರುಕುಳಕ್ಕೆ ಹಂಗಾಮಿ ನೌಕರ ಆತ್ಮಹತ್ಯೆ – ಎಸ್ಎಫ್ಐ ಆರೋಪ Janashakthi Media

Donate Janashakthi Media

Leave a Reply

Your email address will not be published. Required fields are marked *