ಮುಂಬೈ: ಅನಾರೋಗ್ಯ ಕಾರಣದಿಂದ ಮುಂಬೈ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಉದ್ಯಮಿ ರತನ್ ಟಾಟಾ ಬುಧವಾರ ರಾತ್ರಿ ನಿಧನರಾಗಿದ್ದಾರೆ . ಖ್ಯಾತ
ತೀವ್ರ ಅನಾರೋಗ್ಯಕ್ಕೀಡಾಗಿದ್ದ ಅವರನ್ನು ಎರಡು ದಿನಗಳ ಹಿಂದೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ.
ವಯೋ ಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಅಕ್ಟೋಬರ್ 09ರ ಸಂಜೆ ಅವರ ಆರೋಗ್ಯ ಗಂಭೀರವಾಗಿದ್ದು ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತು.
ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ ED
ಇನ್ನು ರತನ್ ಟಾಟಾ ಅವರ ನಿಧನಕ್ಕೆ ದುಃಖ ವ್ಯಕ್ತಪಡಿಸಿರುವ ಆರ್ಪಿಜಿ ಎಂಟರ್ಪ್ರೈಸಸ್ನ ಅಧ್ಯಕ್ಷ ಹರ್ಷ್ ಗೋಯೆಂಕಾ ಅವರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ‘ಗಡಿಯಾರ ತನ್ನ ನಿಲ್ಲಿಸಿದೆ. ಟೈಟನ್ ಇನ್ನಿಲ್ಲ RIP ಎಂದು ಟ್ವೀಟ್ ಮಾಡಿದ್ದಾರೆ.