ಬೆಂಗಳೂರು: ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ. ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಜೂನ್ 15ರಂದು ರಾಜರಾಜೇಶ್ವರಿ ನಗರದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಲೇಖಕಿ
ಅವರು ಹಿರಿಯ ಸಾಹಿತಿ, ಪತ್ರಕರ್ತ ಹಾಗೂ ನಾಟಕಕಾರ ಪಿ. ಲಂಕೇಶ್ ಅವರ ಪತ್ನಿಯಾಗಿದ್ದರು. ಪುತ್ರಿಯರಾದ ಗೌರಿ ಲಂಕೇಶ್, ಕವಿತಾ ಲಂಕೇಶ್ ಹಾಗೂ ಪುತ್ರ ಇಂದ್ರಜಿತ್ ಲಂಕೇಶ್ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಇಂದಿರಾ ಲಂಕೇಶ್ ಅವರು ಲಂಕೇಶ್ ಕುಟುಂಬದ ಹಿರಿಯ ಸದಸ್ಯೆಯಾಗಿ ಸಾಹಿತ್ಯ, ಪತ್ರಿಕೋದ್ಯಮ ಮತ್ತು ಸಾಂಸ್ಕೃತಿಕ ವಲಯದ ಅನೇಕ ಬೆಳವಣಿಗೆಗಳಿಗೆ ಸಾಕ್ಷಿಯಾಗಿದ್ದರು. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಸಾಹಿತ್ಯ, ಪತ್ರಿಕೋದ್ಯಮ ಹಾಗೂ ಪ್ರಗತಿಪರ ವಲಯದ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಲೇಖಕಿ
ಇದನ್ನೂ ಓದಿ: ಅಯೋಧ್ಯೆ ದೇಣಿಗೆ ಹಗರಣ ಆರೋಪ: ಎಸ್ಐಟಿ ತನಿಖೆಗೆ ಯುಪಿ ಸರ್ಕಾರ ಆದೇಶ
ಇಂದಿರಾ ಲಂಕೇಶ್ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಇಂದಿರಾ ಲಂಕೇಶ್ ಅವರ ನಿಧನದ ಸುದ್ದಿ ಕೇಳಿ ದುಃಖವಾಗಿದೆ ಎಂದು ಬರೆದು ಕೊಂಡಿದ್ದಾರೆ. ಸಾಹಿತ್ಯ, ಮಾಧ್ಯಮ ಮತ್ತು ಸಿನೆಮಾ ಕ್ಷೇತ್ರಗಳಲ್ಲಿ ಲಂಕೇಶ್ ಅವರು ಮಾಡಿರುವ ಸಾಧನೆಯಲ್ಲಿ ಅವರಿಗೆ ಬೆಂಬಲವಾಗಿ ನಿಂತಿದ್ದ ಇಂದಿರಾ ಲಂಕೇಶ್ ಅವರ ಬಹುದೊಡ್ಡ ಕೊಡುಗೆ ಇದೆ ಎನ್ನುವುದು ನಿಸ್ಸಂಶಯ. ಪ್ರಾರಂಭದ ುಟುಂಬದ ಸ್ನೇಹವಲಯದಲ್ಲಿದ್ದ ನನಗೆ ಇಂದಿರಾ ಲಂಕೇಶ್ ಮತ್ತು ಅವರ ಮಕ್ಕಳು ಆತ್ಮೀಯರು. ಸ್ವತ: ಬರವಣಿಗೆಯನ್ನೂ ಮಾಡುತ್ತಿದ್ದ ಇಂದಿರಾ ಲಂಕೇಶ್, ಪುಸ್ತಕ ಪ್ರಕಟಣೆಯ ಜವಾಬ್ದಾರಿಯನ್ನೂ ನಿರ್ವಹಿಸುತ್ತಿದ್ದರು. ಕೆಲವು ವರ್ಷಗಳ ಹಿಂದೆಯಷ್ಟೆ ನಡೆದ ಗೌರಿ ಲಂಕೇಶ್ ಹತ್ಯೆಯ ನಂತರ ಆಘಾತಕ್ಕೀಡಾಗಿದ್ದ ಇಂದಿರಾ ಅವರು ಪೂರ್ಣವಾಗಿ ಚೇತರಿಸಿಕೊಂಡಿರಲಿಲ್ಲ. ಇಂದಿರಾ ಲಂಕೇಶ್ ಕುಟುಂಬದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ತಿಳಿಸಿದ್ದಾರೆ.
ಇಂದಿರಾ ಲಂಕೇಶ್ ಅವರ ಅಗಲಿಕೆಯಿಂದ ಕನ್ನಡ ನಾಡು ಮತ್ತೊಬ್ಬ ಹಿರಿಯ ವ್ಯಕ್ತಿತ್ವವನ್ನು ಕಳೆದುಕೊಂಡಂತಾಗಿದೆ. ಕುಟುಂಬದ ಸದಸ್ಯರು, ಸ್ನೇಹಿತರು ಮತ್ತು ಅಭಿಮಾನಿಗಳು ಅವರಿಗೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ.
ಇದನ್ನೂ ನೋಡಿ: ಅನ್ನಭಾಗ್ಯ | ಬಡವರ ಅನ್ನಕ್ಕೆ ಕನ್ನ? ಲೋಕಾಯುಕ್ತ ದಾಳಿಯಲ್ಲಿ ಬಯಲು Janashakthi Media
