ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಿ, ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇನ್ನಿತರರ ವಿರುದ್ಧ ದೋಷಾರೋಪ ಪಟ್ಟಿಯನ್ನು 24ನೇ ಎಸಿಸಿಎಂ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಾಗಿದೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ ಹೇಳಿದರು. ರೇಣುಕಸ್ವಾಮಿ
ತಾಂತ್ರಿಕ ಸಾಕ್ಷ್ಯ, ಸಾಂದರ್ಭಿಕ, ತಾಂತ್ರಿಕ, ವೈಜ್ಞಾನಿಕ ಹಾಗೂ ಇತರೆ ಸಾಕ್ಷ್ಯಾಧಾರ ಸಹಿತ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ಹೇಳಿದರು. ಬೆಂಗಳೂರು ಹಾಗೂ ಹೈದರಾಬಾದ್‌ನ ಎಫ್‌ಎಸ್‌ಎಲ್‌ನಿಂದ ಎಲ್ಲ ವರದಿಗಳು ಬಂದಿವೆ. ಸಿಎಫ್‌ಎಲ್‌ನ ಕೆಲವು ವರದಿಗಳು ಬರಬೇಕಿದೆ. ನಂತರ ಆ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಪೊಲೀಸರು ಹೇಳಿದರು.
ಇದನ್ನು ಓದಿ : ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಇಕ್ವಾಲಿಟಿ; ಕನ್ನಡ ಚಲನಚಿತ್ರೋದ್ಯಮದಲ್ಲಿ ಜರುಗುತ್ತಿರುವ ಲೈಂಗಿಕ ದೌರ್ಜನ್ಯ ತನಿಖೆಗೆ ಆಗ್ರಹ
ರಟ್ಟಿನ ಬಾಕ್ಸ್‌ನಲ್ಲಿ ಮುದ್ರಿತ ಪ್ರತಿಗಳನ್ನು ತಂದ ತನಿಖಾ ತಂಡ ನ್ಯಾಯಾಲಯಕ್ಕೆ ಸಲ್ಲಿಸಿದೆ. 3,991 ಪುಟಗಳ ಪ್ರಾಥಮಿಕ ದೋಷಾರೋಪ ಪಟ್ಟಿಯನ್ನು ಸಲ್ಲಿಸಲಾಗಿದೆ. ಒಟ್ಟು 20 ಪ್ರತಿಗಳನ್ನು ಸಲ್ಲಿಸಲಾಗಿದೆ ಎಂದು ಮೂಲಗಳು ಹೇಳಿವೆ. ಮೂವರು ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ, ಎಂಟು ವರದಿಗಳು, 231ಕ್ಕೂ ಹೆಚ್ಚು ಸಾಕ್ಷ್ಯಾದಾರರ ಹೇಳಿಕೆ ಸಹಿತ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.
ದರ್ಶನ್ ಎರಡನೇ ಆರೋಪಿ ಎಫ್‌ಐಆರ್‌ನಲ್ಲಿ ಇರುವಂತೆಯೇ ನಟ ದರ್ಶನ್ ಅವರನ್ನು ಎರಡನೇ ಆರೋಪಿ ಮಾಡಲಾಗಿದೆ. ಪವಿತ್ರಾಗೌಡ ಮೊದಲ ಆರೋಪಿ ಆಗಿದ್ದಾರೆ. ಉಳಿದ ಹದಿನೈದು ಆರೋಪಿಗಳ ಪಾತ್ರವನ್ನು ಉಲ್ಲೇಖಿಸಲಾಗಿದೆ ಎಂದು ಮೂಲಗಳು ಹೇಳಿವೆ. ಎಫ್‌ಎಸ್ಎಲ್ ವರದಿ, ಡಿಎನ್ಎ ವರದಿ, ಮರಣೋತ್ತರ ಪರೀಕ್ಷಾ ವರದಿ, ಸ್ಥಳ ಮಹಜರು, ಮೊಬೈಲ್ ದತ್ತಾಂಶದ ಮರು ಸಂಗ್ರಹ ಪ್ರಕ್ರಿಯೆಯಲ್ಲಿ ದೊರೆತ ಮಾಹಿತಿ ಎಲ್ಲವನ್ನೂ ಉಲ್ಲೇಖಿಸಲಾಗಿದೆ. ಸಾಕ್ಷಿದಾರರ ಹೇಳಿಕೆಗಳನ್ನು ದಾಖಲಿಸಲಾಗಿದೆ.
ಇದನ್ನು ನೋಡಿ : ಬಾಕಿ ವೇತನ ಕೇಳಿದ ಹಾಸ್ಟೆಲ್ ನೌಕರರ ಬಂಧನ Janashakthi Media