ಬೆಂಗಳೂರು: ಎಸ್‌ಪಿ ಪವನ್ ನೆಜ್ಜೂರು ತಮ್ಮ ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬುದಾಗಿ ಹೇಳಲಾಗಿತ್ತು. ಆದರೆ ಇದೀಗ ಅವರ ಸ್ನೇಹಿತ, ಬೆಂಗಳೂರು ಸಿಸಿಬಿ ಡಿಸಿಪಿ ಶ್ರೀಹರಿಬಾಬು ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿ ಸ್ಪಷ್ಟನೆ ನೀಡಿದ್ದಾರೆ.
ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಅವರು ಶಿರಾ ಬಳಿಯ ಫಾರ್ಮ್‌ಹೌಸ್‌ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಪವನ್ ಆತ್ಮಹತ್ಯೆಗೆ ಯತ್ನಿಸಿದ್ದ ವರದಿ ಸುಳ್ಳು ಎಂದಿದ್ದಾರೆ.
ಇದನ್ನೂ ಓದಿ: ಪ್ರವಾಸೋದ್ಯಮ – ಬಂಡವಾಳ ಮತ್ತು ಪ್ರಕೃತಿ
ಬಳ್ಳಾರಿಯಲ್ಲಿ ಬ್ಯಾನರ್ ವಿಚಾರಕ್ಕೆ ಸಂಬಂದಿಸಿದಂತೆ ನಡೆದ ಗಲಾಟೆ ಹಾಗೂ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಪಿ ಪವನ್ ನಜ್ಜುರ್ ಸಸ್ಪೆಂಡ್ ಆಗಿದ್ದರು. ಜ.1 ರಂದು ಅಧಿಕಾರ ಸ್ವೀಕರಿಸಿದ್ದ ಪವನ್ ನೆಜ್ಜೂರ್ ಅವರನ್ನು ಕರ್ತವ್ಯ ಲೋಪದ ಆರೋಪದ ಅಡಿ ಸರ್ಕಾರ ನಿನ್ನೆ (ಜ.2) ರಾತ್ರಿ ಅಮಾನತು ಮಾಡಿ ಆದೇಶ ಪ್ರಕಟಿಸಿತ್ತು.
ರಾತ್ರಿ ಸರ್ಕಾರದ ಆದೇಶ ನೋಡಿ ನೆಜ್ಜೂರ್ ಅವರು ತುಮಕೂರಲ್ಲಿ ಸ್ನೇಹಿತನ ಫಾರ್ಮ್ ಹೌಸ್ ನಲ್ಲಿ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು. ಆದರೆ ಬಳ್ಳಾರಿಯಿಂದ ಮಂಡ್ಯ ಎಸ್‌ಪಿಯಾಗಿ ವರ್ಗಾವಣೆಯಾಗಿರುವ ಶೋಭಾರಾಣಿ ಅವರು ಪವನ್ ನಿಜ್ಜೂರ್ ಆತ್ಮಹತ್ಯೆಗೆ ಯತ್ನಿಸಿಲ್ಲ ಎಂದು ತಿಳಿಸಿದ್ದಾರೆ.
ನಾನು ಅವರ ಜೊತೆ ಮಾತನಾಡಿದ್ದೇನೆ. ಆತ್ಮಹತ್ಯೆ ಯತ್ನ ಎನ್ನುವುದು ಸುಳ್ಳು. ಸದ್ಯ ಅವರು ತಮ್ಮ ಫಾರ್ಮ್ ಹೌಸ್‌ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.
ಇದನ್ನೂ ನೋಡಿ: ಸಾವಿತ್ರಿಬಾಯಿ ಫುಲೆ ಹುಟ್ಟಿದ ದಿನ : ಅವ್ವ ಕವಿತೆ | ಕವಿ : ಆದಿತ್ಯ , ವಾಚನ : ರಾಗಿಣಿ ಮಾಲೂರು Janashakthi Media
