ಬೆಂಗಳೂರು: ಬೆಳ್ಳಂ ಬೆಳಗ್ಗೆಯೇ ಸದಾಶಿವನಗರದ ಗೃಹ ಸಚಿವ ಪರಮೇಶ್ವರ್ ನಿವಾಸಕ್ಕೆ ಸಚಿವ ಹೆಚ್.ಸಿ.ಮಹಾದೇವಪ್ಪ ಆಗಮಿಸಿದ್ದಾರೆ. ಎಸ್.ಸಿ, ಎಸ್.ಟಿ, ಸಚಿವರು ಮತ್ತು ಶಾಸಕರ ಸಭೆಗೆ ಹೈಕಮಾಂಡ್ ಬ್ರೇಕ್ ಹಾಕಿದ ಹಿನ್ನೆಲೆ ಈ ಬೆಳವಣಿಗೆ ಕುತೂಹಲಕ್ಕೆ ಕಾರಣವಾಗಿದೆ. ಹೈಕಮಾಂಡ್
ಹೀಗಾಗಿ ಮುಂದಿನ ಕಾರ್ಯತಂತ್ರ ಏನು? ಹೇಗೆ ಎಂಬುದರ ಬಗ್ಗೆ ಗೃಹ ಸಚಿವ ಪರಮೇಶ್ವರ್ ಜೊತೆಗೆ ಮಹಾದೇವಪ್ಪ ಸಮಾಲೋಚನೆ ನಡೆಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ : ಸಿ.ಟಿ.ರವಿ ಅವಾಚ್ಯ ಪದ : ‘CID’ ಗೆ ವಿಡಿಯೋ ಲಭ್ಯ!
ಕಳೆದ ವಾರ ರಾಜ್ಯಕ್ಕೆ ಆಗಮಿಸಿದ್ದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೀವಾಲಾ ಸಚಿವರ ಸಭೆಗೆ ಅನುಮತಿ ನೀಡಲು ನಿರಾಕರಿಸಿದ್ದರು. ಇದು ದಲಿತ ಸಮುದಾಯದ ಸಚಿವರು ಮತ್ತು ಶಾಸಕರ ಅಸಮಾಧಾನಕ್ಕೆ ಕಾರಣವಾಗಿತ್ತು.
ಇಂದು ಮತ್ತೆ ರಾಜ್ಯಕ್ಕೆ ಸುರ್ಜೀವಾಲಾ ಆಗಮಿಸಿದ್ದು, ಸಚಿವರು, ಶಾಸಕರ ಸಭೆಗೆ ಅನುಮತಿ ಪಡೆಯುವ ಬಗ್ಗೆ ಸಚಿವರು ಸಮಾಲೋಚನೆ ನಡೆಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಆದ್ರೆ ಈ ವಿಚಾರದಲ್ಲಿ ಹೈ ಕಮಾಂಡ್ ನಡೆ ವಿರುದ್ಧ ಸ್ವತಃ ಸಚಿವರೇ ಅಸಮಾಧಾನಗೊಂಡಿರುವುದು ಅಚ್ಚರಿಗೆ ಕಾರಣವಾಗಿದೆ. ಈ ಬೆಳವಣಿಗೆ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಭಿನ್ನಮತ ಸ್ಫೋಟಗೊಳ್ಳುವಂತೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಇದನ್ನೂ ನೋಡಿ : ಕಲಬುರಗಿ | ಬಹುತ್ವ ಸಂಸ್ಕತಿ ಭಾರತೋತ್ಸವ-2025 Janashakthi Media