ರಾಮನಗರ: ಮೊರಾರ್ಜಿ ವಸತಿ ಶಾಲೆ ಗೋಡೆ ಕುಸಿದು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಗುರುವಾರ ರಾಮನಗರದ ಹೊಸೂರು ಗೊಲ್ಲಳ್ಳಿಯಲ್ಲಿ ನಡೆದಿದೆ. ಮೊರಾರ್ಜಿ
ಬೆಳಿಗ್ಗೆ 8.30ರ ಸುಮಾರಿಗೆ ತೊಟ್ಟಿ ಬಳಿ ಕೌಶಿಕ್ ಸೇರಿದಂತೆ ಇಬ್ಬರು ವಿದ್ಯಾರ್ಥಿಗಳು ಮುಖ ತೊಳೆಯುತ್ತಿದ್ದರು. ಆಗ, ಐದು ಅಡಿ ಎತ್ತರವಿರುವ ತೊಟ್ಟಿಯ ಶಿಥಿಲಗೊಂಡ ಗೋಡೆ ವಿದ್ಯಾರ್ಥಿಗಳ ಮೇಲೆ ಉರುಳಿದೆ. ಗೋಡೆಯ ಅವಶೇಷಗಳಡಿ ಸಿಲುಕಿದ್ದ, ತೀವ್ರವಾಗಿ ಗಾಯಗೊಂಡಿದ್ದ ಕೌಶಿಕ್, ದಯಾನಂದ ಸಾಗರ್ ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿದ್ದಾನೆ.ಘಟನೆಯಲ್ಲಿ ಇನ್ನೊಬ್ಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾನೆ.
ಇದನ್ನೂ ಓದಿ:ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಹರಿಸಲು ಸುಪ್ರೀಂಕೋರ್ಟ್ ಆದೇಶ
ಮೃತ ವಿದ್ಯಾರ್ಥಿಯ ಶವವನ್ನ ದಯಾನಂದ ಆಸ್ಪತ್ರೆ ಶವಗಾರಕ್ಕೆ ರವಾನೆ ಮಾಡಲಾಗಿದೆ. ಮತ್ತೊಬ್ಬ ವಿದ್ಯಾರ್ಥಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬಿಡದಿ ಠಾಣೆ ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಮತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಿಡಿಯೋ ನೋಡಿ:“ಒಂದು ದೇಶ ಒಂದು ಚುನಾವಣೆ” ಒಕ್ಕೂಟ ವ್ಯವಸ್ಥೆಯನ್ನು ಒಡೆಯುವ ಕೆಲಸ – ಆರ್, ಸುನಂದಮ್ಮ, ನಿವೃತ್ತ ಕುಲಸಚಿವರು