ವಸತಿ ಶಾಲೆ ಕೋಮುಲ್ ನಿಂದ ಒತ್ತುವರಿ: ಎಸ್.ಎನ್.ನಾರಾಯಣಸ್ವಾಮಿ ಆರೋಪ

ಬಂಗಾರಪೇಟೆ: ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಅಂಬೇಡ್ಕರ್ ವಸತಿ ಶಾಲೆ ನಿರ್ಮಾಣಕ್ಕೆ ಮೀಸಲಿಟ್ಟಿದ್ದ ಜಮೀನನ್ನು ಕೋಮುಲ್ ಕಾನೂನು ಬಾಹಿರವಾಗಿ ಒತ್ತುವರಿ ಮಾಡಿಕೊಂಡು ಸೋಲಾರ್ ಘಟಕ ನಿರ್ಮಿಸುತ್ತಿದೆ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಆರೋಪಿಸಿದ್ದು, ಒತ್ತುವರಿಯನ್ನು ಕೂಡಲೇ ತೆರವುಗೊಳಿಸಬೇಕೆಂದು ಆಗಸ್ಟ್‌ 28ರಂದು ಉಪ ವಿಭಾಗಾಧಿಕಾರಿಗೆ ಪತ್ರ ಬರೆದಿದ್ದಾರೆ.

ಕೋಲಾರ ತಾಲ್ಲೂಕಿನ ಹುತ್ತೂರು ಗ್ರಾಮದ ಸ.ನಂ 103 ರಲ್ಲಿ 153 ಎಕರೆ ಜಾಗವನ್ನು ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಮೀಸಲಿಡಲಾಗಿತು. ಆದರೆ ಕೋಮುಲ್ ಈ ಜಾಗದಲ್ಲಿ ಮೇವು ಉತ್ಪಾದನೆ ಸಲುವಾಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯೆ ಪ್ರದೇಶವನ್ನೂ ಒಳಗೊಂಡಂತೆ ಯಾವುದೇ ದುರಸ್ತಿ, ‌ಟಿಪ್ಪಣಿ ಸರ್ವೆ, ಭೂ ಪರಿವರ್ತನೆ ಆದೇಶ ಹಾಗೂ ಸರ್ಕಾರದ ಪೂರ್ವಾನುಮತಿ ಪಡೆಯದೆ ಸೋಲಾರ್ ಘಟಕ ನಿರ್ಮಾಣ ಕಾಮಗಾರಿ ನಡೆಸುತ್ತಿದೆ ಎಂದು ದೂರಿದ್ದಾರೆ.

ಈ ಕುರಿತು ಅಧಿವೇಶದಲ್ಲಿ ಧ್ವನಿ ಎತ್ತಿ ಕೋಮುಲ್ ಕೈಗೊಂಡಿರುವ ಕಾನೂನು ಬಾಹಿರ ಕಾಮಗಾರಿಯನ್ನು ಕೂಡಲೇ ಸ್ಥಗಿತಗೊಳಿಸಬೇಕೆಂದು ಕಂದಾಯ ಸಚಿವರ ಗಮನ ಸೆಳೆಯಲಾಗಿತು. ಕಂದಾಯ ಸಚಿವ ಕೃಷ್ಣಬೈರೇಗೌಡ ಸಹ ಕೋಮುಲ್ ಇತರೇ ಕಾರ್ಯಗಳಿಗೆ ಮೀಸಲಿಟ್ಟಿದ್ದ ಜಾಗದಲ್ಲಿ ಸೋಲಾರ್ ಪ್ಯಾನಲ್ ಅಳವಡಿಸಿರುವುದು ಸರಿ ಇಲ್ಲವೆಂದು ಮತ್ತು ಇಲಾಖೆಯಿಂದ ಯಾವುದೇ ಅನುಮತಿ ಸಹ ಪಡೆದಿದಿಲ್ಲ ಎಂದು ಉತ್ತರಿಸಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕೇರಳ “ನಮಗೆ ಬೆದರಿಕೆ ಹಾಕಲು ಪ್ರಯತ್ನಿಸಬೇಡಿ ಬಿಜೆಪಿ ನಾಯಕರಿಗೆ ಮುಖ್ಯಮಂತ್ರಿ ಪಿಣರಾಯಿ ಎಚ್ಚರಿಕೆ

‘ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಗೋಪಾಲಮೂರ್ತಿ ವಿರುದ್ಧ ಪ್ರಕರಣ ದಾಖಲಿಸಿ ಮಕ್ಕಳ ಭವಿಷ್ಯಕ್ಕಾಗಿ ಸರ್ಕಾರದ ಸದುದ್ದೇಶವನ್ನು ಗೌರವಿಸಬೇಕೆಂದು ಹಾಗೂ ವಸತಿ ಶಾಲೆಯ ಜಮೀನು ಉಳಿಸುವಂತೆ ಮೂರು ತಿಂಗಳ ಹಿಂದೆಯೇ ಒತ್ತಾಯಿಸಿದ್ದೆ. ಆದರೆ ತಾವು ಯಾವುದೇ ಕ್ರಮ ತೆಗೆದುಕೊಳ್ಳದೆ ನಿರ್ಲಕ್ಷ್ಯ ಧೋರಣೆ ಮೂಲಕ ಬಡ ರೈತರ ದಲಿತ ಮಕ್ಕಳ ವಿದ್ಯಾಭ್ಯಾಸಕ್ಕೆತಾತ್ಸರ ಮಾಡುತ್ತಿರುವುದು ಗೋಚರಿಸುತ್ತದೆ.

ಇದು ನಿಮ್ಮ ಬೇಜವಾಬ್ದಾರಿ ಎಂದು ಏಕೆ ಪರಿಗಣಿಸಬಾರದು?’ ಎಂದು ಪತ್ರದಲ್ಲಿ ಉಪ ವಿಭಾಗಾಧಿಕಾರಿಯನ್ನು ಪ್ರಶ್ನಿಸಿದ್ದಾರೆ. ಈಗ ಅಂಬೇಡ್ಕರ್ ವಸತಿ ಶಾಲೆ ಮಂಜೂರಾಗಿದೆ. ಕೂಡಲೇ ಕ್ರಮ ವಹಿಸಬೇಕು. ಆರೋಪಿಗಳ ರಕ್ಷಿಸುತ್ತಿರುವ ಹಾಗೂ ಬಡವರ ದಲಿತರ ಮಕ್ಕಳ ವಿದ್ಯಾರ್ಥಿಗಳಿಗೆ ಮಂಜೂರಾಗಿದ್ದ ಭೂಮಿ ಕಬಳಿಸಿರುವವರ ಪರವಾಗಿರುವ ತಮ್ಮನ್ನು ದೋಷಾರೋಪಿಯಾಗಿ ಮಾಡಿ ತಮ್ಮ ಮೇಲೆ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗುವುದು ಎಂದು’ ಪತ್ರದ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ನೋಡಿ: ‘ಷಡ್ಯಂತ್ರ’ ಯಾರದ್ದು??ದೂರುದಾರನನ್ನು ಬಂಧಿಸಿದ್ದು‌‌ಯಾಕೆ??? Janashakthi Media

Donate Janashakthi Media

Leave a Reply

Your email address will not be published. Required fields are marked *