ಆಡಿಯೋ ನನ್ನದೇ ಎಂದು ಸಾಬೀತಾದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ : ಮುನಿರತ್ನ

ಬೆಂಗಳೂರು : ಗುತ್ತಿಗೆದಾರ ಚಲುವರಾಜುಗೆ ಶಾಸಕ ಮುನಿರತ್ನ ತ್ಯಾಜ್ಯ ವಿಲೇವಾರಿ ಗುತ್ತಿಗೆ ವಿಚಾರವಾಗಿ ಅವಾಚ್ಯವಾಗಿ ನಿಂದಿಸಿರೋದು ಆಡಿಯೋದಲ್ಲಿ ಬಯಲಾಗಿತ್ತು. ಬೆಂಗಳೂರಿನ ವೈಯಾಲಿಕಾವಲ್ ಠಾಣೆಯಲ್ಲಿ ಶಾಸಕ ಮುನಿರತ್ನ ವಿರುದ್ಧ  2 ಎಫ್​ಐಆರ್​ ಕೂಡ ದಾಖಲಾಗಿದೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ಪ್ರತಿಕ್ರಿಯಿಸಿದ್ದು, ಆಡಿಯೋ ನನ್ನದೇ ಎಂದು ಸಾಬೀತಾದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.

ಈ ವಿಷಯವಾಗಿ ಪತ್ರಿಕಾಹೇಳಿಕೆ ನೀಡಿರುವ ಅವರು, ಆಡಿಯೋ ತಗೊಂಡು ಈಗಲೇ ಸ್ಪೀಕರ್‌ ಕಚೇರಿಗೆ ಚಲುವರಾಜ್ ಬರಲಿ. 2 ಸಮುದಾಯ ಸೇರಿ ನನ್ನನ್ನು ಮುಗಿಸಲು ಷಡ್ಯಂತ್ರ ನಡೆಸುತ್ತಿದ್ದಾರೆ. ಒಂದು ತಿಂಗಳ ಹಿಂದೆ ಇದೇ ಚಲುವರಾಜ್‌ ನನ್ನನ್ನು ಶ್ಲಾಘಿಸಿದ್ದರು. 7-8 ವರ್ಷಗಳಿಂದ ನನ್ನ ಜೊತೆಯಲ್ಲಿದ್ದರು, ಈಗ ನಾನು ಹಣ ಕೇಳ್ತೀನಾ ಎಂದು ಪ್ರಶ್ನಿಸಿದ್ದಾರೆ.

ರಾಜಕೀಯ ಪಿತೂರಿಯಿಂದ ನನ್ನ ವಿರುದ್ಧ ಆರೋಪ ಮಾಡಿದ್ದಾರೆ. ತಿಂಗಳ ಹಿಂದೆ ನನ್ನ ಬಳಿ ಬಂದು ಯಾರೋ ಹಲ್ಲೆ ಮಾಡಿದ್ದರು ಅಂದಿದ್ದರು. ನಾನು ಎಲ್ಲೂ ನಾಪತ್ತೆಯಾಗಿಲ್ಲ. ನನ್ನ ಸ್ನೇಹಿತರ ಮೂಲಕ ಭೇಟಿ ಮಾಡಲು ಚಲುವರಾಜ್‌ ಯತ್ನಿಸಿದ್ದರು ಎಂದಿದ್ದಾರೆ.

ಇದನ್ನು ಓದಿ : ಯುವಕನೊಬ್ಬನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕ ಹಲ್ಲೆ ಮಾಡಿದ ದುಷ್ಕರ್ಮಿಗಳು; ಎಫ್‌ಐಆರ್‌ ದಾಖಲು

ನನ್ನ ಬಾಯಿ ಶುದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್‌ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಸಿಎಂರವರು ಮೊದಲು ತಮ್ಮ ಜೊತೆ ಇರುವವರ ಬಾಯಿ ಮುಚ್ಚಿಸಲಿ. ನಾನು ಕಾನೂನಿನ ಮೊರೆ ಹೋಗುತ್ತೇನೆ ಎಂದು ಹೇಳಿದ್ದಾರೆ.

ನಾನು ಯಾವುದೇ ರೀತಿ ಭ್ರಷ್ಟಾಚಾರ ನಡೆಸಿಲ್ಲ. ಕಾಂಗ್ರೆಸ್‌ನಲ್ಲಿದ್ದಾಗ ನಾನು ತುಂಬಾ ಒಳ್ಳೆಯ ವ್ಯಕ್ತಿಯಾಗಿದ್ದೆ. ಕಾಂಗ್ರೆಸ್‌ಗೆ ರಾಜೀನಾಮೆ ಕೊಟ್ಟಿದ್ದಕ್ಕೆ ನಾನು ಕೆಟ್ಟವನು ಆಗಿಬಿಟ್ಟಿದ್ದೇನೆ ಎಂದಿದ್ದಾರೆ.

ವೈಯಾಲಿಕಾವಲ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾದ ಹಿನ್ನೆಲೆ ಶಾಸಕ ಮುನಿರತ್ನಗೆ ಬಂಧನ ಭೀತಿ ಶುರುವಾಗಿದೆ. ನಾಪತ್ತೆಯಾಗಿರುವ ಶಾಸಕ ಮುನಿರತ್ನಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಮುನಿರತ್ನ ಕುರಿತು ಕೇಂದ್ರ ವಿಭಾಗ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಇದನ್ನು ನೋಡಿ : ಬಿಡಿಎ ಕಾಂಪ್ಲೆಕ್ಸ್ ಖಾಸಗೀಕರಣ ಮಾಡಿದ್ರೆ ನಿಮ್ಮ ಸರ್ಕಾರ ಉಳಿಯಲ್ಲ – ಕಾಂಗ್ರೆಸ್ ಗೆ ಎಚ್ಚರಿಸಿದ ಸಿಪಿಐಎಂ ನಾಯಕ

Donate Janashakthi Media

Leave a Reply

Your email address will not be published. Required fields are marked *