ವಿಷಯ : ಬಾಲಕೀಯರ ವಿದ್ಯಾರ್ಥಿನಿಲಯದ ಸಮಸ್ಯೆಗಳನ್ನು ಬಗೆಹರಿಸಿ, ವ್ಯವಸ್ಥೆಗೆ ಕಾರಣವಾಗಿರುವ ನಿಲಯಪಾಲಕರ ಮೇಲೆ ಕ್ರಮ ಜರುಗಿಸಿ ಎಂದು ಎಸ್ಎಫ್ಐ (SFI) ಸಂಘಟನೆ ಹೋರಾಟ ಮುಂದುವರೆಸಿದೆ.
ಹೊಳೆನರಸೀಪುರ ತಾಲೂಕಿನ ಸಮಾಜಕಲ್ಯಾಣ ಇಲಾಖೆ ಮೇಟ್ರಿಕ್ ನಂತರ ಬಾಲಕೀಯರ ವಿದ್ಯಾರ್ಥಿ ನಿಲಯದಲ್ಲಿ ಅವ್ಯವಸ್ಥೆ ಕೂಪವಾಗಿದೆ, ಶೌಚಾಲಯ, ಕುಡಿಯುವ ನೀರು, ಗ್ರಂಥಾಲಯ ಮತ್ತು ಕೊಠಡಿಗಳು ಸೇರಿದಂತೆ ಯಾವು ಕನಿಷ್ಠ ಮೂಲಭೂತ ಸೌಕರ್ಯಗಳಿಲ್ಲದೆ ಶೈಕ್ಷಣಿಕ ವಾತವರಣವಿಲ್ಲದೆ ಅತ್ಯಂತ ಸಮಸ್ಯೆಗಳನ್ನು ಪ್ರತಿ ನಿತ್ಯ ಎದುರಿಸುತ್ತಿದ್ದಾರೆ.
ಇದನ್ನು ಓದಿ : ಪಿಓಪಿ ಗಣೇಶ ಮಾರಾಟ ಮಾಡಿದರೆ ಕ್ರಿಮಿನಲ್ ಕೇಸ್
ಈ ಸಮಸ್ಯೆಗಳ ಬಗ್ಗೆ ನಿಲಯಪಾಲಕರಾದ ಚಂದ್ರಿಕಾರವರಿಗೆ ಹಲವು ಬಾರಿ ಬಗೆಹರಿಸುವಂತೆ ಒತ್ತಾಯಿಸಿದರು ಯಾವುದೆ ಪ್ರಯೋಜವಾಗಿಲ್ಲ. ಸಮಸ್ಯೆಗಳನ್ನು ಬಗೆಹರಿಸುವ ಬದಲು ಮಕ್ಕಳನ್ನು ಬೆದರಿಸಿ ದೌರ್ಜನ್ಯವೆಸಗುತ್ತಿದ್ದಾರೆ. ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ಖಾಲಿ ಮಾಡಿಕೊಂಡು ಹೋಗಿ ಎಂದು ದಮಕಿ ಹಾಕುತ್ತಲೆ ಇದ್ದಾರೆ. ತಾಲ್ಲೂಕು ಅಧಿಕಾರಿಗಳಿಗೆ ಈ ಬಗ್ಗೆ ಮನವಿ ಮಾಡಿದರು ಯಾವುದೆ ಪ್ರಯೋಜವಾಗುತ್ತಿಲ್ಲ. ಚಂದ್ರಿಕಾರವರಿಗೆ ರಾಜಕೀಯ ಪ್ರಭಾವಿಗಳ ಸಂಪರ್ಕ ಇರುವುದರಿಂದ ಅವರನ್ನು ಏನು ಮಾಡಲು ಸಾದ್ಯವಾಗಿಲ್ಲ. ಹಾಸ್ಟೆಲ್ ನಲ್ಲಿ ತೀರ ಕಳೆಪೆ ಗುಣಮಟ್ಟದ ಆಹಾರವನ್ನು ತಾರಿಸುವುದು ಮತ್ತು ಸ್ವಚ್ಚತೆ ಇಲ್ಲದಿರುವುದರಿಂದ ಈಗಾಗಲೆ ನಾನಾ ರೋಗಗಳು ಹರಡಿ ವಿದ್ಯಾರ್ಥಿನಿಯರು ಆಸ್ಪತ್ರೆ ಸೇರಿತ್ತಿದ್ದಾರೆ ಎಂದು ವಿದ್ಯಾರ್ಥಿನಿಯರು ಆಕ್ರೋಶ ವ್ಯಕ್ತಪಡೆಸಿದ್ದಾರೆ.
ಸಾಮಾಜಿಕವಾಗಿ ಶೋಷಣೆಗೆ ಒಳಗಾದ ಸಮುದಾಯದಿಂದ ದಲಿತ ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿನಿಯರು ಇರುವ ಹಾಸ್ಟೆಲ್ ಇದಾಗಿದ್ದು ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ವಾತಾವರಣ ನಿರ್ಮಿಸಲು ಬೇಕಿರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಕೂಡಲೆ ಕಲ್ಪಿಸಬೇಕೆಂದು ಉತ್ತಮ ಗುಣಮಟ್ಟದ ಆಹಾರ ನೀಡಬೇಕು ಮತ್ತು ಬೇರೆಯ ನಿಲಯಪಾಲಕರನ್ನು ನೀಯೋಜಿಸಬೇಕು ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಸ್ಎಫ್ಐ ಜಿಲ್ಲಾಧ್ಯಕ್ಷ ರಮೇಶ್ ತಿಳಿಸಿದ್ದಾರೆ.
ಇದನ್ನು ನೋಡಿ : ಭವ್ಯಾ ನರಸಿಂಹ ಮೂರ್ತಿ – ಕಾಂಗ್ರೆಸ್ ಯುವ ನಾಯಕರುJanashakthi Media