ರಾಜ್ಯದ ನೂತನ ಲೋಕಾಯುಕ್ತರನ್ನಾಗಿ ಬಿಎಸ್ ಪಾಟೀಲ್ ನೇಮಕ

ಬೆಂಗಳೂರು: ರಾಜ್ಯ ಸರ್ಕಾರದಿಂದ ಲೋಕಾಯುಕ್ತ ನ್ಯಾಯಮೂರ್ತಿಯನ್ನಾಗಿ, ನಿವೃತ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್ ರನ್ನು ಮುಖ್ಯಮಂತ್ರಿಗಳು, ಕರ್ನಾಟಕ ವಿಧಾನಸಭೆ ಹಾಗು ವಿಧಾನಪರಿಷತ್ ಸಭಾಧ್ಯಕ್ಷರು, ಉಭಯ ಸದನಗಳ ವಿಪಕ್ಷ ನಾಯಕರು ಹಾಗು ಕರ್ನಾಟಕ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿಗಳ ಅನುಮೋದನೆ ಮೇರೆಗೆ ನೇಮಿಸಲಾಗಿದೆ,ಎಂದು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಬಿಎಸ್ ಪಾಟೀಲ್‌ ಅವರನ್ನು ಲೋಕಾಯುಕ್ತರನ್ನಾಗಿ ನೇಮಕ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಡಿದ್ದ ಶಿಫಾರಸಿಗೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಇಂದು ಅಂಕಿತ ಹಾಕಿದ್ದಾರೆ. ಬಿಎಸ್ ಪಾಟೀಲ್‌ ಅವರು ನಾಳೆ ಬೆಳಗ್ಗೆ ರಾಜಭವನದಲ್ಲಿ ನೂತನ ಲೋಕಾಯುಕ್ತರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಈ ಹಿಂದೆ ಲೋಕಾಯುಕ್ತರಾಗಿದ್ದ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಅವರು 2022ರ ಜನವರಿ 27ರಂದು ನಿವೃತ್ತಿ ಪಡೆದರು. ಅಂದಿನಿಂದ ಈ ಹುದ್ದೆ ಖಾಲಿ ಇತ್ತು. ಖಾಲಿಯಿದ್ದ ಹುದ್ದೆಗೆ ಈಗ ಬಿ.ಎಸ್‌. ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ.  ಬಿಎಸ್ ಪಾಟೀಲ್ ಅವರು 2019ರ ನವೆಂಬರ್‌ನಿಂದ ಉಪ ಲೋಕಾಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

 

 

Donate Janashakthi Media

Leave a Reply

Your email address will not be published. Required fields are marked *