ನಿರೀಕ್ಷಣಾ ಜಾಮೀನು ಅರ್ಜಿ ವಾಪಸ್‌ ಪಡೆದ ರೇವಣ್ಣ

ಬೆಂಗಳೂರು: ಶಾಸಕ ಎಚ್‌.ಡಿ.ರೇವಣ್ಣ ವಿರುದ್ದ ಲೈಂಗಿಕ ಕಿರುಕುಳದ ಆರೋಪದ ಮೇಲೆ ದಾಖಲಾಗಿದ್ದ ಎಫ್‌ಐಆರ್‌ ಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ನಿರೀಕ್ಷಿಣಾ ಜಾಮೀನು ಅರ್ಜಿಯನ್ನು ವಾಪಸ್‌ ಪಡೆದಿದ್ದಾರೆ.

ರೇವಣ್ಣ ಈ ಪ್ರಕರಣದಲ್ಲಿ ಜಾಮೀನು ರಹಿತ ಯಾವುದೇ ಆರೋಪಗಳನ್ನು ಮಾಡದಿರುವ ಕಾರಣ ಈ ನಿರ್ಧಾರ ಕೈಗೊಂಡಿದ್ದಾರೆನ್ನಲಾಗಿದೆ. ಹಾಸನದಲ್ಲಿ  ಮಹಿಳೆಯೊಬ್ಬರು ಸಲ್ಲಿಸಿದ್ದ ದೂರಿನ ಆಧಾರದ ಮೇರೆಗೆ ರೇವಣ್ಣ ವಿರುದ್ದ ಎಫ್‌ಐಆರ್‌ ದಾಖಲಾಗಿತ್ತು.  ಈ ಬಗ್ಗೆ ರೇವಣ್ಣ ಸಲ್ಲಿಸಿದ್ದ ನಿರೀಕ್ಷಿಣಾ ಜಾಮೀನು ಅರ್ಜಿ ಇಂದು ವಿಚಾರಣೆ ನಡೆಯಬೇಕಾಗಿತ್ತು.

ಇದನ್ನೂ ಓದಿ: ಪೆನ್‍ಡ್ರೈವ್ ಪ್ರಕರಣದಲ್ಲಿ ಎಸ್‍ಐಟಿ ತನಿಖೆಗೆ ಬಿಜೆಪಿ ಸಂಪೂರ್ಣ ಸಹಕಾರ: ಅಣ್ಣಾಮಲೈ

ಎಫ್‌ಐಆರ್‌ ನಲ್ಲಿ ದಾಖಲಾಗಿರುವ ಪ್ರತಿಯೊಂದು ಐಪಿಸಿ ಸೆಕ್ಷನ್‌ಗಳೂ ಸಹ ಜಾಮೀನು ನೀಡಬಹುದಾದ, ಗಂಭೀರ ಸ್ವರೂಪವಲ್ಲದ ಪ್ರಕರಣಗಳಾಗಿವೆ. ಹೀಗಾಗಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸುವುದರಲ್ಲಿ ಅರ್ಥವಿಲ್ಲ ಎಂದು ಕಾನೂನು ತಜ್ಞರು ರೇವಣ್ಣನವರಿಗೆ ಸಲಹೆ ನೀಡಿದ್ದಾರೆನ್ನಲಾಗಿದೆ.

ಇದನ್ನೂ ನೋಡಿ: ರಾಯಚೂರು ಲೋಕಸಭೆ : ಬಿಜೆಪಿಯೊಳಗೆ ಬಂಡಾಯ, ಕಾಂಗ್ರೆಸ್‌ನೊಳಗೆ ಬೇಗುದಿ Janashakthi Media

Donate Janashakthi Media

Leave a Reply

Your email address will not be published. Required fields are marked *