ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣದ ಸತ್ಯಾಸತ್ಯತೆಯನ್ನು ಬಯಲುಗೊಳಿಸಿ- ಎಸ್ಎಫ್ಐ

ಮಂಗಳೂರು ಹೊರವಲಯ ಫರಂಗಿಪೇಟೆ ಮೂಲದ ವಿದ್ಯಾರ್ಥಿ ದಿಗಂತ್ ಫೆ 25ರಂದು ಸಂಶಯಾಸ್ಪದ ರೀತಿಯಲ್ಲಿ ನಾಪತ್ತೆಗೊಂಡು 12ದಿನಗಳು ಕಳೆದ ನಂತರ ಪತ್ತೆಯಾಗಿರುವುದಕ್ಕೆ ಭಾರತ ವಿದ್ಯಾರ್ಥಿ ಫೆಡರೇಶನ್ ಎಸ್ಎಫ್ಐ ಹರ್ಷ ವ್ಯಕ್ತಪಡಿಸಿದೆ. ಹಲವು ಊಹಾಪೋಹಗಳಿಗೆ ಕಾರಣವಾಗಿದ್ದ ಪ್ರಕರಣವನ್ನು ಭೇದಿಸಿದ ಪೊಲೀಸ್ ಇಲಾಖೆಗೆ ಅಭಿನಂದನೆಯನ್ನು ಸಲ್ಲಿಸಿದೆ.

ಇದನ್ನು ಓದಿ :-ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನ, ಪೈಲಟ್ ಪಾರು!

ವಿದ್ಯಾರ್ಥಿ ದಿಗಂತ್ ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣದಿಂದ ಜಿಲ್ಲೆಯ ವಿದ್ಯಾರ್ಥಿ ವಲಯಗಳಲ್ಲಿ ಆತಂಕ ಮನೆಮಾಡಿತ್ತು. ಪ್ರಕರಣದಿಂದ ಭೀತಿಗೊಂಡಿರುವ ಸಾರ್ವಜನಿಕರು ಹಾಗೂ ವಿದ್ಯಾರ್ಥಿ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಪೊಲೀಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪತ್ತೆ ಹಚ್ಚುವ ಕ್ರಮಕ್ಕೆ ಮುಂದಾದ್ದರಿಂದ ವಿದ್ಯಾರ್ಥಿಗಳು, ನಾಗರಿಕರು ನಿಟ್ಟುಸಿರು ಬಿಡುವಂತಾಯಿತು. ಈ ನಡುವೆ ನಾಪತ್ತೆ ವಿದ್ಯಾರ್ಥಿ ದಿಗಂತ್ ಪ್ರಕರಣವನ್ನು ದಿಕ್ಕು ತಪ್ಪಿಸುವ,ಮತೀಯ ರಾಜಕಾರಣಕ್ಕೆ ಬಳಸಿಕೊಳ್ಳುವ ,ವಿದ್ಯಾರ್ಥಿಗಳ ನಡುವೆ ಸಾಮರಸ್ಯಗಳನ್ನು ಕಡದಿ ಪರಸ್ಪರ ಅಪನಂಬಿಕೆ ಸೃಷ್ಟಿಸುವಂತಹ ಪ್ರಯತ್ನಗಳನ್ನು ನಡೆಸಿದ ಶಕ್ತಿಗಳ ಕುರಿತು ಎಸ್ಎಫ್ಐ ಆಕ್ರೋಶವನ್ನು ವ್ಯಕ್ತಪಡಿಸಿದೆ. ವಿನಾಕಾರಣ ಪ್ರಕರಣವನ್ನು ಧಿಕ್ಕು ತಪ್ಪಿಸಲು ಪ್ರಯತ್ನಿಸಿದ ಕೋಮುವಾದಿಗಳ ವಿರುದ್ಧ ಪೊಲೀಸ್ ಇಲಾಖೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ ಆಗ್ರಹಿಸುತ್ತದೆ.

ಹಲವು ರೀತಿಯ ಅನುಮಾನಗಳಿಗೆ ಎಡೆಮಾಡಿದ್ದ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣದ ಹಿಂದಿರುವ ಸತ್ಯಾಸತ್ಯತೆಯನ್ನು ಪೊಲೀಸ್ ಇಲಾಖೆ ಬಯಲುಗೊಳಿಸಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಶನ್ ಎಸ್ಎಫ್ಐ ದ.ಕ ಜಿಲ್ಲಾ ಸಮಿತಿ ಕಾರ್ಯದರ್ಶಿ ವಿನುಶ ರಮಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Donate Janashakthi Media

Leave a Reply

Your email address will not be published. Required fields are marked *