ಮದ್ದೂರು: ಪಟ್ಟಣದಲ್ಲಿ ಸೆಪ್ಟೆಂಬರ್. 8ರ ರಾತ್ರಿ ನಡೆದ ಗಣೇಶೋತ್ಸವ ವಿಸರ್ಜನೆ ವೇಳೆ ಗಲಭೆ ನಡೆದಿದ್ದೂ, ಸ್ಥಿತಿ ಉದ್ವಿಗ್ನವಾಗಿದೆ. ಸೆಪ್ಟೆಂಬರ್. 9ರಂದು ಸಹ ಅದೇ ಉದ್ವಿಗ್ನತೆ ಮುಂದುವರಿದಿದ್ದು, ಅನೇಕ ಹಿಂದುಪರ ಸಂಘಟನೆಗಳು ಗಲಭೆಗೆ ಕಾರಣರಾದ ತಪ್ಪಿತಸ್ಥರನ್ನು ಬಂಧಿಸುವಂತೆ ಉಗ್ರ ಸ್ವರೂಪದ ಪ್ರತಿಭಟನೆ ಮಾಡಿದರು.
ಈ ಸಮಯದಲ್ಲಿ ಭದ್ರತೆಗಾಗಿ ನಿಂತಿದ್ದ ಪೊಲೀಸರ ಜೊತೆಯಲ್ಲಿ ಪ್ರತಿಭಟನಾಕಾರರು ಮಾತಿನ ಚಕಮಕಿ ನಡೆಸದಿರು. ಆದರೆ, ನೋಡ ನೋಡುತ್ತಿದ್ದಂತೆ ಪ್ರತಿಭಟನಾಕಾರರ ಸಂಖ್ಯೆ ಹೆಚ್ಚುತ್ತಲೇ ಹೋಯಿತು. ಗಣೇಶ ವಿಸರ್ಜನೆಯ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿರುವ ವ್ಯಕ್ತಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಉದ್ರಿಕ್ತರು ಕಲ್ಲು ತೂರಾಟ ನಡೆಸದಿರು. ಇದಕ್ಕೆ ಪ್ರತಿಯಾಗಿ, ಪೊಲೀಸರು ಅವರನ್ನು ನಿಯಂತ್ರಿಸಲು ಲಾಠಿ ಪ್ರಹಾರ ನಡೆಸಿದರು.
ಏನಿದು ಗಲಭೆ?
ಮದ್ದೂರಿನ ಚನ್ನೇಗೌಡ ಬಡಾವಣೆ ಹಾಗೂ ರಾಮ್ ರಹೀಂ ನಗರದ ಯುವಕರು ಸೇರಿ ಗಣೇಶನನ್ನು ಪ್ರತಿಷ್ಠಾಪಿಸಿದ್ದರು. ಸೆ. 8ರ ರಾತ್ರಿ ಗಣೇಶ ವಿಸರ್ಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷ ರಮೇಶ್ ಬಾಬು ಸೇರಿ ನಾಲ್ವರು ಎಂಎಲ್ಸಿಯಾಗಿ ನಾಮ ನಿರ್ದೇಶನ
ವಿಸರ್ಜನಾ ಮೆರವಣಿಗೆಯು ಮದ್ದೂರು ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮಸೀದಿಯ ಮುಂದಿನಿಂದ ಸಾಗುವಾಗ ಯಾರೋ ಕಿಡಿಗೇಡಿಗಳು ಮೆರವಣಿಯಲ್ಲಿದ್ದವರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆಂದು ಆರೋಪಿಸಲಾಗಿದೆ. ಅದಕ್ಕೆ ಪ್ರತಿಯಾಗಿ ಮೆರವಣಿಗೆಯಲ್ಲಿದ್ದವರೂ ಸಹ ಮಸೀದಿಯ ಕಡೆಗೆ ಕಲ್ಲು ತೂರಾಟ ನಡೆಸಿದ್ದಾರೆ. ಇದೇ ಘಟನೆಗೆ ಮೂಲ ಕಾರಣ.
ಈ ಸಂದರ್ಭದಲ್ಲಿ ಮೆರವಣಿಗೆಯಲ್ಲಿ ಭದ್ರತೆಗಾಗಿ ನಿಯೋಜಿಸಲಾಗಿದ್ದ ಪೊಲೀಸರು ಮಧ್ಯೆ ಪ್ರವೇಶಿಸಿ, ಎಲ್ಲರನ್ನೂ ಸಮಾಧಾನಗೊಳಿಸಿ ಮೆರವಣಿಗೆ ಮುಂದುವರಿಯಲು ಅವಕಾಶ ಕಲ್ಪಿಸಿದರು. ಮರುದಿನ ಬೆಳಗ್ಗೆ, ಅಂದರೆ ಸೆ. 8ರಂದು ಹಿಂದುತ್ವ ಸಂಘಟನೆಗಳು ಮದ್ದೂರಿನಲ್ಲಿ ಪ್ರತಿಭಟನೆ ನಡೆಸಿದವು.
ಬಿಗಿ ಬಂದೋಬಸ್ತ್
ಬೂದಿ ಮುಚ್ಚಿದ ಕೆಂಡಂದಂದಿರುವ ಮದ್ದೂರಿನಲ್ಲಿ ಹೆಚ್ಚುವರಿ ಪೊಲೀಸ್ ತುಕಡಿಗಳ ನಿಯೋಜನೆಯನ್ನು ಮಾಡಲಾಗಿದೆ. ಸ್ಥಳಕ್ಕೆ ಕರ್ನಾಟಕದ ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಮದ್ದೂರಿನಲ್ಲೇ ವಾಸ್ತವ್ಯ ಹೂಡಿ ಪರಿಸ್ಥಿಯನ್ನು ಅವಲೋಕಿಸುತ್ತಿದ್ದಾರೆ.
ಕಳೆದ ವರ್ಷದ ಘಟನೆ
ಕಳೆದ ವರ್ಷ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆಯೂ ಇದೇ ರೀತಿ ಗಲಭೆ ನಡೆದಿತ್ತು. ಗಣೇಶ ವಿಸರ್ಜನೆಯ ಮೆರವಣಿಗೆ ಮಸೀದಿಯ ಮುಂದಿನಿಂದ ಸಾಗುವಾಗ ಗಲಭೆ ಉಂಟಾಗಿತ್ತು. ಆ ಘಟನೆಯಲ್ಲಿ ಹತ್ತಾರು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿತ್ತು. ಅಪಾರ ಪ್ರಮಾಣದ ಆಸ್ತಿಪಾಸ್ತಿಗಳಿಗೆ ಹಾನಿಯಾಗಿತ್ತು.
ಇದನ್ನೂ ನೋಡಿ: ಪರಿಷ್ಕೃತ ಜಿಎಸ್ ಟಿ : ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ? Janashakthi Media
