ನೆಲಮಂಗಲ: ನೆಲಮಂಗಲ ಬಳಿಯ ಹುಸ್ಕೂರು ಗ್ರಾಮದಲ್ಲಿ ಕತ್ತಿನಲ್ಲಿದ್ದಮಾಂಗಲ್ಯ ಸರ ಕಳವು ಮಾಡುವಾಗ ಸರಗಳ್ಳರು ಮಹಿಳೆಯ ಮುಖಕ್ಕೆ ಸ್ಪ್ರೇ ಸಿಂಪಡಿಸಿದ ಪರಿಣಾಮ ಆಕೆ ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಜ್ಯೋತಿ (45) ಎಂಬವರು ಮೃತಪಟ್ಟಿದ್ದಾರೆ.
ಇದನ್ನೂ ಓದಿ : 2ನೇ ತರಗತಿಯ ವಿದ್ಯಾರ್ಥಿಗೆ 150 ಛಡಿಯೇಟು ನೀಡಿದ ಶಿಕ್ಷಕ; ಪ್ರಕರಣ ದಾಖಲು
ಮಹಿಳೆಯ ಮುಖಕ್ಕೆ ಕೆಮಿಕಲ್ ಸ್ಪ್ರೇ ಮಾಡಿದ್ದಾರೆ. ಈ ವೇಳೆ ಆಕೆ ಕುಸಿದು ಬಿದ್ದಿದ್ದಾರೆ. ಬೆಳಗ್ಗೆ ಮನೆ ಮುಂದೆ ಕಸ ಗುಡಿಸುವಾಗ ಬೈಕ್ನಲ್ಲಿ ಬಂದ ಸರಗಳ್ಳರು ಬಂದಿದ್ದರು ಕಳ್ಳರು ಮಹಿಳೆಯ ಕೊರಳಲ್ಲಿದ್ದ 70 ಗ್ರಾಂ ತೂಕದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಕೂಡಲೇ ಮಹಿಳೆಯನ್ನು ನೆಲಮಂಗಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಪರೀಕ್ಷೆಯ ಬಳಿಕ ಸಾವನ್ನಪ್ಪಿರುವ ಬಗ್ಗೆ ವೈದ್ಯರು ದೃಢಪಡಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳ ಪತ್ತೆಗೆ ತನಿಖೆ ಚುರುಕುಗೊಳಿಸಿದ್ದಾರೆ.
https://www.youtube.com/watch?v=LnLIwghJXBo
