- ಐ ಮಾನಿಟರಿ ಅಡ್ವೈಸರಿ (ಐಎಂಎ) ಬಹುಕೋಟಿ ಹಗರಣದಲ್ಲಿ ಭಾಗಿಯಾದ ಆರೋಪ
ಬೆಂಗಳೂರು: ಐ ಮಾನಿಟರಿ ಅಡ್ವೈಸರಿ (ಐಎಂಎ) ಬಹುಕೋಟಿ ಹಗರಣದಲ್ಲಿ ಭಾಗಿಯಾದ ಆರೋಪದ ಮೇಲೆ ಬಂಧಿತರಾಗಿರುವ ಮಾಜಿ ಸಚಿವ ಆರ್. ರೋಷನ್ ಬೇಗ್ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.
ಪ್ರತಿ ಎರಡನೇ ಮತ್ತು ನಾಲ್ಕನೇ ಸೋಮವಾರ ಸಿಬಿಐ ಮುಂದೆ ಹಾಜರಾಗಬೇಕು. ಅಲ್ಲದೇ, ನೋಟಿಸ್ ನೀಡಿದಾಗ ಹಾಜರಾಗಿ ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು. ಯಾವುದೇ ಸಾಕ್ಷಿದಾರರಿಗೆ ಬೆದರಿಕೆ ಹಾಕಬಾರದು ಎಂದು ತಿಳಿಸಿದೆ.
ಪಾಸ್‌ಪೋರ್ಟ್ ಸಿಬಿಐ ಅಧಿಕಾರಿಗಳಿಗೆ ಒಪ್ಪಿಸಬೇಕು. ವಿಳಾಸ ಬದಲಿಸುವುದಾದರೆ ಮೊದಲೇ ನ್ಯಾಯಾಲಯಕ್ಕೆ ಮಾಹಿತಿ ನೀಡಬೇಕು. ಇಬ್ಬರ ಶ್ಯೂರಿಟಿ ನೀಡಬೇಕು ಎಂದು ಹೇಳಿದೆ.