ಉಚಿತ ಪ್ರವೇಶದ ಹೆಸರಲ್ಲಿ ವಿದ್ಯಾರ್ಥಿಗಳಿಗೆ 18 ಕೋಟಿ ರೂ ವಂಚನೆ – ಆರೋಪಿ ಬಂಧನ

ಬೆಂಗಳೂರು: ಉಚಿತವಾಗಿ ವಿದ್ಯಾರ್ಥಿಗಳಿಗೆ ಶಿಕ್ಷಣ ಕೊಡಿಸುವುದಾಗಿ 18 ಕೋಟಿ ರೂ. ವಂಚಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಆಂಧ್ರಪ್ರದೇಶ ಮೂಲದ ಶ್ರೀನಿವಾಸುಲು ಎಂದು ಗುರುತಿಸಲಾಗಿದೆ. ಆರೋಪಿ ಡಾಟ ಸೈನ್ಸ್ ಕೋರ್ಸ್ ಮಾಡಿಸುವುದಾಗಿ ವಿದ್ಯಾರ್ಥಿಗಳಿಂದ ದಾಖಲೆಗಳನ್ನು ಪಡೆಯುತ್ತಿದ್ದ. ಬಳಿಕ ಅವುಗಳನ್ನು ಬ್ಯಾಂಕ್‍ನಲ್ಲಿಟ್ಟು ಲಕ್ಷಾಂತರ ರೂ. ಸಾಲ ಪಡೆಯುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಇದುವರೆಗೂ ಸುಮಾರು ಎರಡು ಸಾವಿರ ವಿದ್ಯಾರ್ಥಿಗಳಿಗೆ ವಂಚಿಸಿದ್ದಾನೆ. ಈ ಪ್ರಕರಣದಲ್ಲಿ ಬ್ಯಾಂಕ್ ಸಿಬ್ಬಂದಿಯೂ ಭಾಗಿಯಾಗಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿಕೊರಿಯರ್‌ ಉದ್ಯೋಗಿಗೆ ಹೂಡಿಕೆ ಹೆಸರಲ್ಲಿ ಆನ್‌ಲೈನ್‌ ವಂಚನೆ; 11 ಲಕ್ಷ ಪಂಗನಾಮ

ವಂಚನೆ ಮಾಡಿದ್ದು ಹೇಗೆ?:  ಶ್ರೀನಿವಾಸುಲು ಮೊದಲಿಗೆ ಉಚಿತ ಶಿಕ್ಷಣ ಕೊಡಿಸುವ ಹೆಸರಲ್ಲಿ ಅನೇಕ ಯುವಕ ಯುವತಿಯನ್ನು ಆಕರ್ಶಿಸಿ ತನ್ನ ಸಂಸ್ಥೆಗೆ ಸೇರಿಕೊಳ್ಳುವಂತೆ ಮಾಡುತ್ತಿದ್ದ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಹೆಸರಲ್ಲಿ ಲೋನ್ ಪಡೆದುಕೊಂಡು “ನಾವೇ ಸಾಲವನ್ನು ಕಂತು ಕಂತಾಗಿ ತೀರಿಸುತ್ತೇವೆ” ಎಂದು ನಂಬಿಸುತ್ತಿದ್ದ. ನಂತರ ಕೋರ್ಸ್ಗೆ ಬೇಕಾದಂತಹ ಅಗತ್ಯ ದಾಖಲೆಗಳನ್ನು ಬ್ಯಾಂಕ್ ಗಳಿಗೆ ಕೊಡಿಸುತ್ತಿದ್ದ. ಆದರೆ ಹಣವನ್ನು ಮಾತ್ರ ತನ್ನ ಖಾತೆಗೆ ವರ್ಗಾವಣೆ ಆಗುವಂತೆ ಮಾಡುತ್ತಿದ್ದ. ಕಡೆಗೆ ಸಾಲವನ್ನು ತೀರಿಸದೇ ಈತ ಒಟ್ಟು 18 ಕೋಟಿಗೂ ಹೆಚ್ಚು ಹಣವನ್ನು ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಈತ GEEK LEARN ಎಂಬ ಕೋಚಿಂಗ್ ಸಂಸ್ಥೆ ಕಟ್ಟಿ ಡಾಟಾ ಸೈನ್ಸ್ ಕೋರ್ಸ್ ಮಾಡಿಸುವ ನೆಪದಲ್ಲಿ ಮೋಸ ಮಾಡಿದ್ದಾನೆ. ಈತ ಪ್ರಮುಖವಾಗಿ 20 ರಿಂದ 25 ವಯಸ್ಸಿನ ಯುವಕ-ಯುವತಿಯರನ್ನು ಟಾರ್ಗೆಟ್ ಮಾಡಿ ವಂಚಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *