ಮುಂಬೈ: ಉದ್ಧವ್ ಠಾಕ್ರೆ ಬಣದ ಶಿವಸೇನಾ ಪಕ್ಷದ ಸಂಸದ ಹಾಗೂ ಪಕ್ಷದ ವಕ್ತಾರ ಸಂಜಯ್ ರಾವತ್ ಏಕನಾಥ್ ಶಿಂದೆ ಬಣದ ಬಗ್ಗೆ ಗಂಭೀರ ಆರೋಪ ಮಾಡಿದ್ದು, ಶಿವಸೇನಾ ಪಕ್ಷದ ಹೆಸರು ಮತ್ತು ಬಿಲ್ಲು-ಬಾಣದ ಚಿಹ್ನೆಗಾಗಿ ₹2,000 ಕೋಟಿಗೂ ಅಧಿಕ ಹಣಕಾಸು ಅವ್ಯವಹಾರ ನಡೆದಿದೆ ಎಂದು ಆರೋಪ ಮಾಡಿದ್ದಾರೆ.
ಮುಂಬೈನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ‘‘ನನಗೆ ಖಚಿತ ಮಾಹಿತಿ ಸಿಕ್ಕಿದೆ, ನನಗೆ ವಿಶ್ವಾಸವಿದೆ, ಇದು ಕೇವಲ ಪ್ರಾಥಮಿಕ ಅಂಕಿ ಅಂಶ ಮಾತ್ರವೇ ಅಲ್ಲ. ಬದಲಿಗೆ ಇದು ಶೇ. 100ರಷ್ಟು ದೃಢ ಮಾಹಿತಿʼʼ ಎಂದು ಹೇಳಿದ್ದಾರೆ.
ಇದನ್ನು ಓದಿ: ಮಹಾರಾಷ್ಟ್ರ ಸಿಎಂ ಆಗಿ ಏಕನಾಥ್ ಶಿಂಧೆ, ಡಿಸಿಎಂ ಆಗಿ ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ ಸ್ವೀಕಾರ
ದೇಶದ ಇತಿಹಾಸದಲ್ಲೇ ಹಿಂದೆಂದೂ ಕಂಡುಕೇಳರಿಯದ ಸಂಗತಿ. ಇನ್ನೂ ಕೆಲವು ವಿಷಯಗಳನ್ನು ಶೀಘ್ರದಲ್ಲೇ ಬಹಿರಂಗಪಡಿಸಲಾಗುವುದು ಎಂದು ಸಂಜಯ್ ರಾವುತ್ ಸೂಚಿಸಿದ್ದಾರೆ.
ಆಯೋಗದ ನಿರ್ಧಾರಕ್ಕೆ ಅಸಮಾಧಾನ ಹೊರ ಹಾಕಿರುವ ಉದ್ಧವ್ ಠಾಕ್ರೆ ಬಣ ಸುಪ್ರೀಂಕೋರ್ಟ್‌ನಲ್ಲಿ ಕಾನೂನು ಹೋರಾಟ ಮುಂದುವರಿಸುವುದಾಗಿ ಪ್ರಕಟಿಸಿದೆ.
ಇದನ್ನು ಓದಿ: ಏಕನಾಥ ಶಿಂಧೆ ಮಹಾರಾಷ್ಟ್ರದ ಹೊಸ ಮುಖ್ಯಮಂತ್ರಿ : ಇಂದು ಸಂಜೆ ಪ್ರಮಾಣ ವಚನ
ಕಳೆದ ಎಂಟು ತಿಂಗಳ ಹಿಂದೆ ಆರಂಭವಾದ ಶಿವಸೇನೆ ಪಕ್ಷದ ಎರಡು ಬಣ ರಾಜಕೀಯದಿಂದ ಪಕ್ಷದ ಶಾಸಕರು ಇಬ್ಬಾಗವಾದರು. ಬಿಜೆಪಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣಕ್ಕೆ ಚುನಾವಣಾ ಆಯೋಗ ಏಕನಾಥ್ ಶಿಂದೆ ಬಣವೇ ಅಧಿಕೃತ ‘ಶಿವಸೇನಾ’ ಎಂದು ಪರಿಗಣಿಸಿದೆ.
ಶಿವೇನೆ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ಅವರ ಪುತ್ರ ಉದ್ಧವ್ ಠಾಕ್ರೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಶಾಸಕರ ಬಂಡಾಯದಿಂದ ಅಧಿಕಾರ ಕಳೆದುಕೊಂಡರು. ಪಕ್ಷವು ಎರಡು ಬಣ ರಾಜಕೀಯಕ್ಕೆ ಮರಳಿತು. ತಂದೆಯು ಸ್ಥಾಪಿಸಿದ ಪಕ್ಷದ ಮೂಲ ಚಿಹ್ನೆ ಉಳಿಸಿಕೊಳ್ಳಲು ಉದ್ಧವ್ ಠಾಕ್ರೆಗೆ ಆಗಿಲ್ಲ. ಶಿವಸೇನೆ ಪಕ್ಷದ ಹೆಸರು ಹಾಗೂ ಚಿಹ್ನೆಯಾದ ಬಿಲ್ಲು-ಬಾಣವು ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣಕ್ಕೆ ಸೇರಿದ್ದು ಎಂದು ಚುನಾವಣಾ ಆಯೋಗ ಹೇಳಿದೆ.
ಇಲ್ಲಿ ಕ್ಲಿಕ್ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್ ಗುಂಪು ಸೇರಲು ಈ ಲಿಂಕ್ ಕ್ಲಿಕ್ ಮಾಡಿ