ಬೆಂಗಳೂರು: ಜಾರಿ ನಿರ್ದೇಶನಾಲಯ (ಇ.ಡಿ.)ಯು ಕರ್ನಾಟಕ ಬೋವಿ ಅಭಿವೃದ್ಧಿ ನಿಗಮ (ಕೆಬಿಡಿಸಿ)ದಿಂದ ಹಣ ದುರುಪಯೋಗ ಪಡಿಸಿಕೊಂಡ ಪ್ರಕರಣದಲ್ಲಿ ನಿಗಮದ ಪ್ರಧಾನ ವ್ಯವಸ್ಥಾಪಕರಾಗಿದ್ದ ಬಿ.ಕೆ.ನಾಗರಾಜಪ್ಪ, ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಲೀಲಾವತಿ ಹಾಗೂ ಇತರ ಆರೋಪಿಗಳಿಗೆ ಸೇರಿದ 26.27 ಕೋಟಿ. ರೂ. ಮೌಲ್ಯದ ಸ್ಥಿರಾಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ. ಕೆಬಿಡಿಸಿ
ಕರ್ನಾಟಕ ರಾಜ್ಯ ಬೋವಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ದುರ್ಬಳಕೆ ಆರೋಪ ಸಂಬಂಧ ಅಕ್ರಮ ಹಣ ವರ್ಗಾವಣೆ ಕಾಯ್ದೆ (ಪಿಎಂಎಲ್‌ಎ) ಅಡಿ ಇ.ಡಿ. ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: ನಾಜಿ ಸೋಲಿನ ಬಗ್ಗೆ ಸತ್ಯವನ್ನು ಅಳಿಸಿ ಹಾಕುವ ಪಾಶ್ಚಿಮಾತ್ಯ ಪ್ರಯತ್ನ ತಾರಕಕ್ಕೆ ಏರಿದೆ
ನಿಗಮದಲ್ಲಿ ಹಿಂದೆ ಕಾರ್ಯ ನಿರ್ವಹಿಸುತ್ತಿದ್ದ ಬಿ.ಕೆ.ನಾಗರಾಜಪ್ಪ ಹಾಗೂ ಆರ್.ಲೀಲಾವತಿ ಅವರ ವ್ಯವಹಾರದ ಬಗ್ಗೆ ಇ.ಡಿ. ಜಾಲಾಡಿತ್ತು.
ಆ ವೇಳೆ ಆರೋಪಿಗಳು ಅಕ್ರಮವಾಗಿ ಗಳಿಸಿದ್ದಾರೆ ಎನ್ನಲಾದ ಸುಮಾರು 26.27 ಕೋ. ರೂ. ಮೌಲ್ಯದ ಸ್ಥಿರಾಸ್ತಿ ಪತ್ತೆಯಾಗಿತ್ತು. ಈಗ ಆ ಆಸ್ತಿಯನ್ನು ಜಪ್ತಿ ಮಾಡಿಕೊಂಡಿದ್ದಾರೆ.
ಇದನ್ನೂ ನೋಡಿ: ಪಿಚ್ಚರ್ ಪಯಣ 159 | ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮೂರು ಸಿನಿಮಾಗಳತ್ತ ಒಂದು ನೋಟ