ಬೆಂಗಳೂರು: ಕರ್ನಾಟಕ ಸಚಿವ ಸಂಪುಟವು ‘ಬ್ರಾಂಡ್ ಬೆಂಗಳೂರು’ ಯೋಜನೆಯಡಿ ಬಿಬಿಎಂಪಿ ನಿರ್ವಹಿಸುತ್ತಿರುವ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು 413. 71 ಕೋಟಿ ರೂ.ಗಳ ಯೋಜನೆಗೆ ಅನುಮೋದನೆ ನೀಡಿದೆ. ಕರ್ನಾಟಕ
ಈ ವಿಷಯ ತಿಳಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್. ಕೆ. ಪಾಟೀಲ್, ಈ ಯೋಜನೆಯಡಿ, ಶಿಥಿಲಗೊಂಡ ಕಟ್ಟಡಗಳನ್ನು ಹೊಸ ಕಟ್ಟಡಗಳೊಂದಿಗೆ ಬದಲಾಯಿಸಲಾಗುವುದು ಎಂದು ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಡೆಸುತ್ತಿರುವ ಎಲ್ಲಾ ಆಸ್ಪತ್ರೆಗಳನ್ನು 413. 71 ಕೋಟಿ ರೂಪಾಯಿ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ: ಸಿ.ಟಿ.ರವಿ ಅವಾಚ್ಯ ಪದ : ‘CID’ ಗೆ ವಿಡಿಯೋ ಲಭ್ಯ!
13 ಬಿಬಿಎಂಪಿ ಆಸ್ಪತ್ರೆಗಳನ್ನು 30 ಹಾಸಿಗೆಗಳಿಗೆ , ಐದನ್ನು 50 ಹಾಸಿಗೆಗಳ ಆಸ್ಪತ್ರೆಗಳಾಗಿ ಮೇಲ್ದರ್ಜೆಗೇರಿಸಲಾಗುವುದು. 22 ದಂತ ಆಸ್ಪತ್ರೆಗಳು ಮತ್ತು ಏಳು ಫಿಸಿಯೋಥೆರಪಿ ಆಸ್ಪತ್ರೆಗಳನ್ನು ಸಹ ಸ್ಥಾಪಿಸಲಾಗುವುದು ಎಂದು ತಿಳಿಸಿದರು.
ಬಿಬಿಎಂಪಿ ನಡೆಸುವ ಎಲ್ಲಾ ಸರ್ಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಸಚಿವರು ತಿಳಿಸಿದರು.
ಇದನ್ನೂ ನೋಡಿ: ಕಂದಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯ : ತಡೆಗಟ್ಟುವಲ್ಲಿ ಸಮಾಜವೂ ವಿಫಲ, ಸರ್ಕಾರವೂ ವಿಫಲ Janashakthi Media