ಚಿಕ್ಕೋಡಿ: ಪಟ್ಟಣದ ವಿವಿಧ ಭಾಗಗಳ ಅಭಿವೃದ್ಧಿಗಾಗಿ ವಿಧಾನ ಪರಿಷತ್ ಸದಸ್ಯ ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ಹಾಗೂ ಶಾಸಕ ಗಣೇಶ ಹುಕ್ಕೇರಿ ಅವರ ಪ್ರಯತ್ನದಿಂದ ರೂ. 8.30 ಕೋಟಿ ಅನುದಾನ ಮಂಜೂರಾಗಿದ್ದು, ಇಂದು ಪಟ್ಟಣದ ಜಾರಿ ಗಲ್ಲಿ, ಮೆಹಬೂಬ ನಗರ ಹಾಗೂ ಬೇಪಾರಿ ಗಲ್ಲಿಯಲ್ಲಿ ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಯಡಿ ಮಂಜೂರಾದ 1.50 ಕೋಟಿ ರೂಪಾಯಿ ರಸ್ತೆ ನಿರ್ಮಾಣ ಕಾಮಗಾರಿಗೆ ಪ್ರಕಾಶ ಹುಕ್ಕೇರಿ ಅವರು ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಇದನ್ನು ಓದಿ:ಕರ್ನಾಟಕ | ಸೊರಗುತ್ತಿರುವ ಸಾರ್ವಜನಿಕ ಆರೋಗ್ಯ
ಈ ವೇಳೆ ಮಾತನಾಡಿದ ಅವರು ಚಿಕ್ಕೋಡಿ ಅಭಿವೃದ್ಧಿಗಾಗಿ ನಾವು ನಿರಂತರ ಪ್ರಯತ್ನದಲ್ಲಿದ್ದು, ಇನ್ನೂ ಹೆಚ್ಚಿನ ಅನುದಾನವನ್ನು ತರಿಸಿ ಪಟ್ಟಣವನ್ನು ಮಾದರಿಯಾಗಿಸೋ ಸಂಕಲ್ಪವಿದೆ. ಕಾಮಗಾರಿಗಳ ಗುಣಮಟ್ಟದ ಕುರಿತು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯರು, ಸ್ಥಳೀಯ ಮುಖಂಡರು, ಕಾರ್ಯಕರ್ತರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು