ರಾಜ್ಯಸಭಾ ಚುನಾವಣೆ | ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್‌ಗೆ ಬಿಜೆಪಿ ಟಿಕೆಟ್ ನಿರಾಕರಣೆ

ನವದೆಹಲಿ: ಫೆಬ್ರವರಿ 27 ರಂದು ಕರ್ನಾಟಕದಿಂದ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿಯ ಹಾಲಿ ರಾಜ್ಯಸಭಾ ಸಂಸದ, ಸಚಿವ ರಾಜೀವ್ ಚಂದ್ರಶೇಖರ್ ಅವರಿಗೆ ಪಕ್ಷವು ಟಿಕೆಟ್ ನಿರಾಕರಿಸಿದ್ದು, ಅವರ ಬದಲಿಗೆ ನಾರಾಯಣ ಕೃಷ್ಣಾಸ ಭಾಂಡಗೆ ಟಿಕೆಟ್ ನೀಡಿದೆ. ರಾಜೀವ್ ಅವರನ್ನು 2018 ರ ಏಪ್ರಿಲ್‌ನಲ್ಲಿ ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದ್ದು, ಅವರ ಆರು ವರ್ಷಗಳ ಅವಧಿಯು 2024 ರಲ್ಲಿ ಕೊನೆಗೊಳ್ಳಲಿದೆ.

ಇತರೆ ಹಿಂದುಳಿದ ವರ್ಗದ ಭಾಂಡಗೆ ಅವರು ಬಾಗಲಕೋಟೆ ಜಿಲ್ಲೆಯ ಎಬಿವಿಪಿ ನಾಯಕರಲ್ಲಿ ಒಬ್ಬರಾಗಿದ್ದು, ಬಾಬರಿ ಮಸೀದಿ ದ್ವಂಸ ಮಾಡಿ ರಾಮಮಂದಿರ ಕಟ್ಟುವ ಪ್ರಕ್ರಿಯೆಯಲ್ಲಿ ಸಕ್ರಿಯರಾಗಿದ್ದರು ಎನ್ನಲಾಗಿದೆ. ಫೆಬ್ರವರಿ 12 ರಂದು ಬಿಜೆಪಿ ರಾಜ್ಯಸಭಾ ಚುನಾವಣೆಗೆ 14 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಈ ಪಟ್ಟಿಯಲ್ಲಿ ರಾಜೀವ್ ಹೆಸರು ಕಾಣೆಯಾಗಿದೆ.

ಇದನ್ನೂ ಓದಿ: ಪ್ರತಿಭಟನೆಗೆ ತೆರಳುತ್ತಿದ್ದ ಕರ್ನಾಟಕದ ರೈತರನ್ನು ಬಂಧಿಸಿದ ಮಧ್ಯಪ್ರದೇಶದ ಬಿಜೆಪಿ ಸರ್ಕಾರ!

ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಇರುವ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ ಸೇರಿದಂತೆ 12 ಕ್ಕೂ ಹೆಚ್ಚು ಸಂಸದರು ರಾಜ್ಯಸಭೆ ಮೂಲಕ ಸಚಿವ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ. ಕರ್ನಾಟಕದಿಂದ ಸಚಿವ ರಾಜೀವ್ ಚಂದ್ರಶೇಖರ್ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆಯ್ಕೆಯಾಗಿದ್ದರು.

ಫೆಬ್ರವರಿ 12 ರಂದು ಬಿಜೆಪಿ ರಾಜ್ಯಸಭಾ ಚುನಾವಣೆಗೆ 14 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಅದು ಕೆಳಗಿನಂತಿದೆ. ಬಿಹಾರದಿಂದ ಧರ್ಮಶೀಲಾ ಗುಪ್ತಾ ಮತ್ತು ಭೀಮ್ ಸಿಂಗ್, ಛತ್ತೀಸ್‌ಗಢಕ್ಕೆ ರಾಜಾ ದೇವೇಂದ್ರ ಪ್ರತಾಪ್ ಸಿಂಗ್, ಹರಿಯಾಣಕ್ಕೆ ಸುಭಾಷ್ ಬರಾಲಾ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ

ಆರ್‌ಪಿಎನ್ ಸಿಂಗ್, ಸುಧಾಂಶು ತ್ರಿವೇದಿ, ಚೌಧರಿ ತೇಜ್ವೀರ್ ಸಿಂಗ್, ಸಾಧನಾ ಸಿಂಗ್, ಅಮರಪಾಲ್ ಮೌರ್ಯ, ಸಂಗೀತಾ ಬಲ್ವಂತ್ ಮತ್ತು ನವೀನ್ ಜೈನ್ ಅವರನ್ನು  ಉತ್ತರ ಪ್ರದೇಶಕ್ಕೆ ಆಯ್ಕೆ ಮಾಡಲಾಗಿದ್ದು, ಉತ್ತರಾಖಂಡಕ್ಕೆ ಮಹೇಂದ್ರ ಭಟ್, ಪಶ್ಚಿಮ ಬಂಗಾಳಕ್ಕೆ ಸಾಮಿಕ್ ಭಟ್ಟಾಚಾರ್ಯ ಅವರನ್ನು ಬಿಜೆಪಿ ಆಯ್ಕೆ ಮಾಡಿದೆ.

ವಿಡಿಯೊ ನೋಡಿ: ಗ್ರಂಥಾಲಯ ಸಮ್ಮೇಳನ : ಗ್ರಂಥಾಲಯಗಳು ಶ್ರೀಸಾಮಾನ್ಯರ ವಿಶ್ವವಿದ್ಯಾಲಯಗಳು Janashakthi Media

Donate Janashakthi Media

Leave a Reply

Your email address will not be published. Required fields are marked *