ನವದೆಹಲಿ: ಆರ್‌ಎಸ್‌ಎಸ್-ಬಿಜೆಪಿ ಶಿಕ್ಷಣ ಸಂಸ್ಥೆಗಳನ್ನು ವಶಪಡಿಸಿಕೊಳ್ಳುತ್ತಿವೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ದೇಶದಲ್ಲಿ ಪರೀಕ್ಷಾ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗುತ್ತಿದೆ ಏಕೆಂದರೆ ಸಂಸ್ಥೆಗಳು ಮತ್ತು ಶಿಕ್ಷಣ ವ್ಯವಸ್ಥೆಯನ್ನು ಬಿಜೆಪಿ ಮತ್ತು ಅದರ ಮೂಲ ಸಂಘಟನೆಯಾದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ವಶಪಡಿಸಿಕೊಂಡಿದೆ. ನರೇಂದ್ರ ಮೋದಿ ಅವರಿಂದಾಗಿ ಪ್ರಶ್ನೆಪತ್ರಿಕೆ ಸೋರಿಕೆ ಮುಂದುವರೆಯುತ್ತದೆ ಎಂದಿದ್ದಾರೆ.
ಇದನ್ನುಓದಿ : ಉತ್ತರ ಪ್ರದೇಶ ಸಿಪಾಹಿ ಭಾರತಿ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ: ಪರೀಕ್ಷೆ ನಡೆಸುವ ಕಂಪೆನಿ ಕಪ್ಪುಪಟ್ಟಿಗೆ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗಾಂಧಿ, “ಎಲ್ಲಾ ಉಪಕುಲಪತಿಗಳನ್ನು ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗಿಲ್ಲ.ಜನತಾ ಪಕ್ಷ ಮತ್ತು ಅದರ ಮಾತೃ ಸಂಸ್ಥೆ ಆರ್‌ಎಸ್‌ಎಸ್‌ಗೆ ಸಂಬಂಧಿಸಿರುವವರನ್ನು ಆಯ್ಕೆಮಾಡಲಾಗಿದೆ. ಭಾರತದಲ್ಲಿ ವ್ಯಾಪಂ ಹಗರಣದ ವಿಸ್ತರಣೆಯನ್ನು ನೋಡಿದ್ದೇವೆ. ಮಧ್ಯಪ್ರದೇಶ ಮತ್ತು ಗುಜರಾತ್ ಇದರ ಕೇಂದ್ರವಾಗಿದೆ. ಅಷ್ಟಕ್ಕೆ ಸೀಮಿತವಾಗಿದ್ದ ಪ್ರಶ್ನೆಪತ್ರಿಕೆ ಇದೀಗ ದೇಶಾದ್ಯಂತ ವಿಸ್ತರಣೆಯಾಗುತ್ತಿರುವುದನ್ನು ನಾವೀಗ ಕಾಣುತ್ತಿದ್ದೇವೆ ಎಂದಿದ್ದಾರೆ.
ಇದನ್ನು ನೋಡಿ : ಮೋದಿ 3.O ಸರ್ಕಾರ ತನ್ನ ಹಿಂದಿನ ಸರ್ವಾಧಿಕಾರಿ ನೀತಿ ಮುಂದುವರೆಸುತ್ತದೆಯೇ? Janashakthi Media