‌ಆರ್‌ಎಸ್‌ಎಸ್ ಸ್ಥಳೀಯ ಭಯೋತ್ಪಾದಕರು: ಸಿದ್ದರಾಮಯ್ಯ ಆರೋಪ

  • ಆರ್‌ಎಸ್ಎಸ್‌ ಕಂಡರೆ ಪ್ರತಿಪಕ್ಷದ ನಾಯಕನಿಗೂ ಭಯ
  • ಹಿಂದುಳಿದ ಸಮುದಾಯಗಳು ಸೇರಿದಂತೆ ಅಹಿಂಸೆಯ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಭಾರತೀಯನಿಗೂ ಆರ್‌ಎಸ್‌ಎಸ್‌ ಕಂಡರೆ ಆಗಲ್ಲಾ

ಬೆಂಗಳೂರು: ಆರ್‌ಎಸ್‌ಎಸ್‌ ಕಂಡರೆ ನನಗೆ ಭಯವಿದೆ. ನನಗೆ ಮಾತ್ರವಲ್ಲ, ಜಾತ್ಯತೀತತೆ, ಸೌಹಾರ್ದತೆ ಮತ್ತು ಅಹಿಂಸೆಯ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಭಾರತೀಯನಿಗೂ ಆರ್‌ಎಸ್‌ಎಸ್‌ ಕಂಡರೆ ಭಯ ಇದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಡಿ.ವಿ.ಸದಾನಂದಗೌಡ ಅವರ ಹೇಳಿಕೆಯ ‘ಆರ್‌ಎಸ್‌ಎಸ್‌ ಕಂಡರೆ ಸಿದ್ದರಾಮಯ್ಯಗೆ ಭಯ’ ಎಂಬ ‘ವಿಷಯವನ್ನ  ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಸಿದ್ದರಾಮಯ್ಯ ಸರಣಿ ಟ್ವೀಟ್‌ಗಳ ಮೂಲಕ ಪ್ರತಿಕ್ರಿಯಿಸಿದ್ದು ಆರ್ಯರ ಆರ್‌ಎಸ್ಎಸ್‌ ಎಂಬ ಹ್ಯಾಶ್‌ಟ್ಯಾಗ್‌ನಲ್ಲಿ ಟ್ವೀಟ್‌ ಮಾಡಿದ್ದಾರೆ.ಭಯ ಹುಟ್ಟಿಸುವವರನ್ನು ಸಾಮಾನ್ಯ ಭಾಷೆಯಲ್ಲಿ ಭಯೋತ್ಪಾದಕರು ಎನ್ನಲಾಗುತ್ತಿದೆ. ಡಿ.ವಿ.ಸದಾನಂದಗೌಡ ಅವರು ಯಾಕೆ ತನ್ನ ಮಾತೃ ಸಂಸ್ಥೆಯ ಮೇಲೆ ಈ ರೀತಿಯ ಆರೋಪ ಮಾಡುತ್ತಿದ್ದಾರೆ ಎನ್ನುವುದನ್ನು ಅವರೇ ಉತ್ತರನೀಡಬೇಕು  ಎಂದು ಸಿದ್ದರಾಮಯ್ಯ  ಟೀಕಿಸಿದ್ದಾರೆ.

ಆರ್‌ಎಸ್‌ಎಸ್‌ ಬಗೆಗಿನ ಭಯದ ಕಾರಣದಿಂದಾಗಿಯೇ ಮಹಾತ್ಮ ಗಾಂಧೀಜಿಯವರ ಹತ್ಯೆಯ ನಂತರ ಆರ್‌ಎಸ್‌ಎಸ್‌ ಮೇಲೆ ದೇಶದ ಮೊದಲ ಗೃಹ ಸಚಿವ ವಲ್ಲಭಭಾಯಿ ಪಟೇಲ್‌ ಅವರು ನಿಷೇಧ ಹೇರಿದ್ದು ಎನ್ನುವುದು ನೆನಪಿರಲಿ ಎಂದು ಸಿದ್ದರಾಮಯ್ಯ ಹಿಂದಿನ ನಡೆದು ಹೋದ ಇತಿಹಾಸವನ್ನು ನೆನೆಪಿಸಿದರು.

ಉನ್ನತ ಪದಾಧಿಕಾರದಿಂದ ಈ ದೇಶದ ಬಹುಸಂಖ್ಯಾತ ಹಿಂದೂಗಳಾದ ದಲಿತರು ಮತ್ತು ಹಿಂದುಳಿದ ಜಾತಿಗಳನ್ನು ದೂರ ಇಟ್ಟಿರುವ ಕಾರಣಕ್ಕಾಗಿಯೇ ಹಿಂದುಳಿದ  ಸಮುದಾಯಗಳು ಸೇರಿದಂತೆ ನನಗೂ ಆರ್‌ಎಸ್‌ಎಸ್‌ ಬಗ್ಗೆ ಭಯ ಇದೆ. ಮೀಸಲಾತಿ, ಭೂಸುಧಾರಣೆಯಂತಹ ವಿಷಗಳಲಲಿ ಸಾಮಾಜಿಕ ನ್ಯಾಯದ ಕಾನೂನುಗಳನ್ನೇ ವಿರೋಧಿಸುವ ಆರ್‌ಎಸ್‌ಎಸ್‌ ಬಗ್ಗೆ ಭಯವಲ್ಲದೆ ಪ್ರೀತಿ ಹುಟ್ಟಲು  ಸಾಧ್ಯವೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ತಮ್ಮ ಮಕ್ಕಳಿಗೆ ದೇಶ-ವಿದೇಶದಲ್ಲಿ ಉನ್ನತ ಶಿಕ್ಷಣ ಕೊಡಿಸಿ, ದಲಿತ, ಹಿಂದುಳಿದ ಸಮುದಾಯದ ಬಡವರ ಮಕ್ಕಳನ್ನು ಹಿಂಸಾಚಾರಕ್ಕೆ ಇಳಿಸಿ ಜೈಲಿಗೆ ಅಟ್ಟುವ ಆರ್‌ಎಸ್ಎಸ್‌ ಬಗ್ಗೆ ಭಯ ಹುಟ್ಟುವುದು ಸಹಜ ಅಲ್ಲವೇ ಸದಾನಂದಗೌಡ ಅವರೇ? ಯಾವುದೇ ವ್ಯಕ್ತಿ-ಸಿದ್ಧಾಂತ-ಸಂಸ್ಥೆ ಇತರರಲ್ಲಿ ಗೌರವ ಹುಟ್ಟಿಸಬೇಕೇ ಹೊರತು ಭಯ ಹುಟ್ಟಿಸಬಾರದು. ಆರ್‌ಎಸ್ಎಸ್‌ ಉನ್ನತ ಪದಾಧಿಕಾರ ಯಾಕೆ ಒಂದು ಜಾತಿಗೆ ಸೀಮಿತವಾಗಿದೆ? ಯಾಕೆ ಅಲ್ಲಿ ಹಿಂದುಗಳೇ ಆಗಿರುವ ದಲಿತ ಮತ್ತು ಹಿಂದುಳಿದ ಜಾತಿಗಳಿಲ್ಲ? ಎನ್ನುವ ನನ್ನ ಸರಳ ಪ್ರಶ್ನೆಗೆ ಯಾಕೆ, ಯಾರೂ ಉತ್ತರಿಸುತ್ತಿಲ್ಲ? ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

 

Donate Janashakthi Media

Leave a Reply

Your email address will not be published. Required fields are marked *