ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆರ್‌ಎಸ್‌ಎಸ್‌ ಕಾರ್ಯಕರ್ತನ ಬಂಧನ

ಕೋಝಿಕ್ಕೋಡ್: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಕಾರ್ಯಕರ್ತನನ್ನು 9 ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮುಕ್ಕಂ ಪೊಲೀಸರು ಫೆಬ್ರವರಿ 5ರಂದು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಯನ್ನು ಕೋಝಿಕ್ಕೋಡ್ ನ ಮುಕ್ಕಂ ತೇಚಿಯಾಡ್ ಮುರಿಯನ್ ಕಂಡಲ್ಲಿ ನಿವಾಸಿ ಬಾಬುರಾಜನ್ (50) ಎಂದು ಗುರುತಿಸಲಾಗಿದೆ. ಲೈಂಗಿಕ 

ಆತನ ವಿರುದ್ಧ ಪೊಕ್ಸೊ ಕಾಯ್ದೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಆರೋಪ: ತಪ್ಪು ಗ್ರಹಿಕೆಯಿಂದ ಕೂಡಿದೆ – ಸೋನಿಯಾ ಗಾಂಧಿ

ಶಾಲೆಯಲ್ಲಿ ನಡೆದ ಕೌನ್ಸೆಲಿಂಗ್ ಅವಧಿಯಲ್ಲಿ ಬಾಲಕಿ ತನ್ನ ಮೇಲೆ ನಡೆದ ದೌರ್ಜನ್ಯವನ್ನು ಬಹಿರಂಗಪಡಿಸಿದ್ದರಿಂದ ಘಟನೆ ಬೆಳಕಿಗೆ ಬಂದಿದೆ. ಶಿಕ್ಷಕರು ಬಾಲಕಿಯ ನಡವಳಿಕೆಯಲ್ಲಿ ಕಂಡ ಬದಲಾವಣೆಯನ್ನು ಗಮನಿಸಿದ ಹಿನ್ನೆಲೆ ಕೌನ್ಸೆಲಿಂಗ್ ನಡೆಸಲಾಗಿತ್ತು. ಆ ವೇಳೆ ಆಘಾತಕಾರಿ ಮಾಹಿತಿ ಹೊರಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತನಿಖೆಯ ವೇಳೆ ಬಾಲಕಿ ಈ ಹಿಂದೆ ಹಲವು ಬಾರಿ ದೌರ್ಜನ್ಯಕ್ಕೆ ಒಳಗಾಗಿದ್ದಾಳೆ ಎಂಬುದು ತಿಳಿದುಬಂದಿದೆ. ಆರೋಪಿ ಬಾಬುರಾಜನ್ ವಿದ್ಯಾರ್ಥಿನಿಯ ಕುಟುಂಬಕ್ಕೆ ಆಪ್ತನಾಗಿದ್ದು, ಅದನ್ನು ದುರುಪಯೋಗಪಡಿಸಿಕೊಂಡು ದೌರ್ಜನ್ಯ ಎಸಗಿದ್ದಾನೆ ಎಂದು FIR ನಲ್ಲಿ ಉಲ್ಲೇಖಿಸಲಾಗಿದೆ.

ಬಾಬುರಾಜನ್ ಈ ಪ್ರದೇಶದಲ್ಲಿ ಸಕ್ರಿಯ ಬಿಜೆಪಿ ಹಾಗೂ RSS ಕಾರ್ಯಕರ್ತನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಕ್ಕಂ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿದೆ ಎಂದು ತಿಳಿದು ಬಂದಿದೆ.

ಇದನ್ನೂ ನೋಡಿ: ಮುಚ್ಚುವ ಅಂಚಿನಿಂದ.. ನೂರರ ಸಂಭ್ರಮದವರೆಗೆ – ಸರಕಾರಿ ಶಾಲೆಯ ಕಥೆ Janashakthi Media

Donate Janashakthi Media

Leave a Reply

Your email address will not be published. Required fields are marked *