ರಾಯಚೂರು: ಮುಸ್ಲಿಂ ಮಹಿಳೆಯರ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ ಆರೋಪದ ಮೇಲೆ ಪೊಲೀಸರು ಆರ್‌ಎಸ್‌ಎಸ್ ಕಾರ್ಯಕರ್ತನನ್ನು ಬಂಧಿಸಿದ್ದಾರೆ.
ಬಂಧಿತ ಆರ್‌ಎಸ್‌ಎಸ್ ಕಾರ್ಯಕರ್ತನನ್ನು ರಾಜು ತಂಬಾಕ್ ಎಂದು ಗುರುತಿಸಲಾಗಿದೆ. ಆರೋಪಿಯು ಮುಸ್ಲಿಂ ಮಹಿಳೆಯರನ್ನು “ಮಕ್ಕಳನ್ನು ಉತ್ಪಾದಿಸುವ ಯಂತ್ರಗಳು” ಎಂದು ಬಿಂಬಿಸುವ ಪೋಸ್ಟ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪೋಸ್ಟ್ ವೈರಲ್ ಆದ ನಂತರ ಮುಸ್ಲಿಂ ಸಮುದಾಯದವರು ಗುರುವಾರ ಪ್ರತಿಭಟನೆ ನಡೆಸಿ ಅವರನ್ನು ಬಂಧಿಸುವಂತೆ ಒತ್ತಾಯಿಸಿದರು. ಪ್ರತಿಭಟನಾಕಾರರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಆರೋಪಿಗಳ ಬಂಧನಕ್ಕೆ 24 ಗಂಟೆಗಳ ಗಡುವು ನೀಡಿದ ನಂತರ ಬಂಧಿಸಲಾಗಿದೆ.
ಇದನ್ನೂ ಓದಿ : ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ: ಸೋಮೇಶ್ವರ ಬೀಚ್ನಲ್ಲಿ 6 ವಿದ್ಯಾರ್ಥಿಗಳ ಮೇಲೆ ಹಲ್ಲೆ
ಮೂವರು ಮುಸ್ಲಿಂ ಮಹಿಳೆಯರು ಮಕ್ಕಳನ್ನು ಹೆರುತ್ತಿರುವಂತೆ ಮತ್ತು ಒಬ್ಬ ಪುರುಷ ಆ ಯಂತ್ರವನ್ನು ಆಪರೇಟ್ ಮಾಡುತ್ತಿರುವಂತೆ ಒಂದು ಪೋಟೋವನ್ನು ಪೋಸ್ಟ್ ಮಾಡಿ, ಇಸ್ಲಾಮಿಕ್ ಬೇಬಿ ಫ್ಯಾಕ್ಟರಿ ಎಂದು ಬರೆದುಕೊಂಡಿದ್ದರು. ಅವರ ಸ್ಟೇಟಸ್ ವೈರಲ್ ಆಗುತ್ತಿದ್ದಂತೆ ಅವರ ಮುಸ್ಲಿಂ ಸಮುದಾಯದ ಜನ ತಮ್ಮ ಧಾರ್ಮಿಕ ಭಾವನೆಗೆ ದಕ್ಕೆಯಂಟಾಗಿದೆ ಎಂದು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದರು. ಲಿಂಗಸೂರಿನಲ್ಲಿ ಪ್ರಸ್ತುತ ಉದ್ವಿಗ್ನ ವಾತಾವರಣ ಸೃಷ್ಠಿಯಾಗಿದ್ದು ಪೊಲೀಸ್ ಬಿಗಿ ಬಂದೋಬಸ್ತ್‌ನ್ನು ಒದಗಿಸಲಾಗಿದೆ.