ಬೆಂಗಳೂರು : ವಿಧಾನಸಭೆ ಉಪಸಭಾಧ್ಯಕ್ಷರಾಗಿ ಶಾಸಕ ರುದ್ರಪ್ಪ ಲಮಾಣಿ ಆಯ್ಕೆ ಆಗಿದ್ದಾರೆ. ಇಂದು ವಿಧಾನಸಭೆಯ ಕಲಾಪದ ಸಮಯದಲ್ಲಿ ಸರ್ವಾನುಮತದಿಂದ ಅವರನ್ನು ಆಯ್ಕೆ ಮಾಡಲಾಯಿತು.
ರುದ್ರಪ್ಪ ಲಮಾಣಿ ಹಾವೇರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದು, ಉಪಸಭಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ವಿಪಕ್ಷ ಸದಸ್ಯರಿಗೆ ಹಸ್ತಲಾಘವ ನೀಡಿದರು. ನಮ್ಮ ಜಿಲ್ಲೆಯವರು ನಮ್ಮ ಮಾತೇ ಕೇಳಬೇಕು ಎಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ವಿಧಾನಸಭೆ ಉಪಸಭಾಧ್ಯಕ್ಷರಾಗಿ ಆಯ್ಕೆಯಾದ ರುದ್ರಪ್ಪ ಲಮಾಣಿ ಅವರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅಭಿನಂದನೆ ಸಲ್ಲಿಸಿದರು.
ಸಚಿವ ಸಂಪುಟ ವಿಸ್ತರಣೆ ವೇಳೆ ಬಂಜಾರ ಸಮುದಾಯದ ಏಕೈಕ ಶಾಸಕರಾಗಿದ್ದ ರುದ್ರಪ್ಪ ಲಮಾಣಿ ಅವರಿಗೆ ಅವಕಾಶ ದೊರೆತಿರಲಿಲ್ಲ. ಈ ವೇಳೆ ಹಾವೇರಿ ಜಿಲ್ಲೆಯಲ್ಲಿ ಐದು ಮಂದಿ ಶಾಸಕರಾಗಿದ್ದರೂ ಒಬ್ಬರಿಗೂ ಸಚಿವ ಸ್ಥಾನ ನೀಡಿಲ್ಲ ಎಂದು ಆಕ್ಷೇಪಿಸಿ ರುದ್ರಪ್ಪ ಲಮಾಣಿ, ಬಸವರಾಜ ಶಿವಣ್ಣನವರ್, ಪ್ರಕಾಶ್ ಕೋಳಿವಾಡ, ಯುಬಿ ಬಣಕಾರ್, ಶ್ರೀನಿವಾಸ ಮಾನೆ ಎಲ್ಲರೂ ಪ್ರಮಾಣವಚನ ಸ್ವೀಕಾರಕ್ಕೆ ಬಹಿಷ್ಕಾರ ಹಾಕಿ ದೂರ ಉಳಿದಿದ್ದರು.