ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್‌.ಜಯಣ್ಣ ನಿಧನ

ಕೊಳ್ಳೇಗಾಲ: ಮಂಗಳವಾರ ಮಧ್ಯಾಹ್ನ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್‌.ಜಯಣ್ಣ ನಿಧನರಾಗಿದ್ದಾರೆ.

ತೀವ್ರ ಎದೆನೋವಿನಿಂದ ಬಳಲುತ್ತಿದ್ದ ಅವರನ್ನು ಸಮೀಪದ ಜನನಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆತರಲಾಯಿತಾದರೂ ಮಾರ್ಗ ಮಧ್ಯೆ ಅಸುನೀಗಿದ್ದಾರೆ. ಹೃದಯಾಘಾತದಿಂದ ಜಯಣ್ಣ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ : ಮಾಜಿ ಮುಖ್ಯಮಂತ್ರಿ ಎಸ್‌. ಎಂ. ಕೃಷ್ಣ ಅವರ ನಿಧನ: ವಿಧಾನಸಭೆಯಲ್ಲಿ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ

ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿದ್ದ ಜಯಣ್ಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಪ್ತವಲಯದಲ್ಲಿ ಗುರುತಿಸಿಕೊಂಡಿದ್ದರು. ಅವಿವಾಹಿತರಾಗಿದ್ದ ಜಯಣ್ಣ ಈ ಭಾಗದ ಪ್ರಭಾವಿ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದರು.

ಬುಧವಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಜಯಣ್ಣ ಅವರ ಮನೆಯ ಗೃಹಪ್ರವೇಶಕ್ಕೆ ಬಂದಿದ್ದರು.

ಇದನ್ನೂ ನೋಡಿ : ಸಾರ್ವಜನಿಕ ಆರೋಗ್ಯ ವ್ಯವಸ್ಥೆಗೆ ಕೇರಳ ಮಾದರಿ ಜಾರಿಯಾಗಲಿ – ಡಾ. ಅನೀಲ್ Janashakthi Media

Donate Janashakthi Media

Leave a Reply

Your email address will not be published. Required fields are marked *