ಬೆಂಗಳೂರು | ಖ್ಯಾತ ಕಾದಂಬರಿಕಾರ ಎಸ್‌.ಎಲ್‌ ಭೈರಪ್ಪ ಬುಧವಾರ ನಿಧನ

ಬೆಂಗಳೂರು: ಮೈಸೂರಿನಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದ ಎಸ್‌.ಎಲ್‌ ಭೈರಪ್ಪ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಬುಧವಾರ ಮಧ್ಯಾಹ್ನ ನಿಧನರಾದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಕಲಬುರಗಿಯಲ್ಲಿ ನಿರಂತರ ಮಳೆ: 400ಕ್ಕೂ ಹೆಚ್ಚು ಜನರ ಸ್ಥಳಾಂತರ

ಮೈಸೂರಿನಲ್ಲಿ ನಿವೃತ್ತಿ ಜೀವನನ್ನು ನಡೆಸುತ್ತಿದ್ದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು.

ವಂಶವೃಕ್ಷ, ದಾಟು, ತಂತು, ಪರ್ವ, ಗೃಹಭಂಗ, ಸಾರ್ಥ, ಮಂದ್ರ ಸೇರಿದಂತೆ ಹಲವಾರ ಕಾದಂಬರಿಗಳನ್ನು ರಚಿಸಿದ್ದಾರೆ.

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ,  ಸರಸ್ವತಿ ಸಮ್ಮಾನ್‌, ಪದ್ಮಭೂಷಣ, ಪದ್ಮಶ್ರೀ ಹಾಗೂ ನಾಡೋಜ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

ಇದನ್ನೂ ನೋಡಿ : ಧರ್ಮಸ್ಥಳ ಪ್ರಕರಣ | ಅಸಹಜ ಸಾವುಗಳಿಗೂ, ಭೂ ಕಬಳಿಕೆ, ಮೈಕ್ರೋಫೈನಾನ್ಸ್‌ಗೂ ಲಿಂಕ್‌ ಇದೆಯಾ?

 

Donate Janashakthi Media

Leave a Reply

Your email address will not be published. Required fields are marked *