ರಾಮನಗರ | ‘ವೃಕ್ಷಮಾತೆ’ ಶತಾಯುಷಿ ಸಾಲುಮರದ ತಿಮ್ಮಕ್ಕ ನಿಧನ

ರಾಮನಗರ: ಬೆಂಗಳೂರಿನ ಜಯನಗರದಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ  ವೃಕ್ಷಮಾತೆ’ ಶತಾಯುಷಿ ಸಾಲುಮರದ ತಿಮ್ಮಕ್ಕ (114) ಅವರು ವಯೋಸಹಜ ಕಾಯಿಲೆಯಿಂದಾಗಿ ನಿಧನರಾಗಿದ್ದಾರೆ.

ಇದನ್ನೂ ಓದಿ : ಉದ್ಯೋಗಸ್ಥ ಮಹಿಳೆಯರಿಗೆ ವರ್ಷಕ್ಕೆ 12 ಮುಟ್ಟಿನ ರಜೆ: ಕಾರ್ಮಿಕ ಇಲಾಖೆ

ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲ್ಲೂಕಿನ ಹುಲಿಕಲ್ ಗ್ರಾಮದವರಾಗಿರುವ ತಿಮ್ಮಕ್ಕ ಅವರಿಗೆ ಪುತ್ರ ಪರಿಸರವಾದಿ ಉಮೇಶ್ ಬಳ್ಳೂರು (ಸಾಕಮಗ) ಇದ್ದಾರೆ. ಸದ್ಯ ಬೆಂಗಳೂರಿನಲ್ಲಿ ಪುತ್ರನೊಂದಿಗೆ ನೆಲೆಸಿದ್ದ ತಿಮ್ಮಕ್ಕ ಅವರ ಆರೋಗ್ಯದಲ್ಲಿ ಆಗಾಗ ಏರುಪೇರಾಗುತ್ತಿತ್ತು.

ಅದರಂತೆ, ಅವರನ್ನು ಎರಡು ದಿನಗಳ ಹಿಂದೆ ಉಸಿರಾಟದ ತೀವ್ರ ಸಮಸ್ಯೆಯಿಂದಾಗಿ ಅವರನ್ನು ಅಪೋಲೊ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ತಿಮ್ಮಕ್ಕ ಮತ್ತು ಚಿಕ್ಕಯ್ಯ ದಂಪತಿಗೆ ಮಕ್ಕಳಿರಲಿಲ್ಲ. ಆ ಕೊರಗು ಮರೆಯಲು ತಿಮ್ಮಕ್ಕ ಅವರು ತಮ್ಮೂರಿನ ರಸ್ತೆ ಬದಿ ಗಿಡಗಳನ್ನು ನೆಟ್ಟರು. ಅವುಗಳನ್ನೇ ತಮ್ಮ ಮಕ್ಕಳೆಂದು ನಿತ್ಯ ನೀರು ಹಾಕಿ, ದನಕರುಗಳು ತಿನ್ನದಂತೆ ನೋಡಿಕೊಂಡು ಪೋಷಿಸಿದರು. ಆ ಗಿಡಗಳೀಗ ದೊಡ್ಡ ಮರಗಳಾಗಿ ಬೆಳೆದು ನಿಂತಿವೆ.

ಗಿಡಗಳನ್ನು ಮಕ್ಕಳಂತೆ ಕಂಡು ಪೋಷಿಸಿ ಬೆಳೆಸಿದ್ದ ತಿಮ್ಮಕ್ಕ ಅವರ ಸಾಧನೆಗೆ 2019ರಲ್ಲಿ ಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿಗಳಲ್ಲಿ ಒಂದಾದ ‘ಪದ್ಮಶ್ರೀ’ ಪ್ರಶಸ್ತಿ ಸೇರಿದಂತೆ ಅಂತರರಾಷ್ಟ್ರೀಯ, ರಾಷ್ಟ್ರೀಯ ಹಾಗೂ ರಾಜ್ಯಮಟ್ಟದ ಹಲವು ಪ್ರಶಸ್ತಿಗಳು, ಪುರಸ್ಕಾರಗಳು ಹಾಗೂ ಬಿರುದುಗಳು ಸಂದಿವೆ.

ಇದನ್ನೂ ನೋಡಿ : ಧರ್ಮಸ್ಥಳದ ನಿಗೂಢಗಳು |ಮಹಿಳಾ ಆಯೋಗ ಮತ್ತೆ ಎಂಟ್ರಿಎಸ್‌ಐಟಿ ವಿರುದ್ಧಅಸಮಾಧಾನ | ಗುರುರಾಜ ದೇಸಾಯಿ Janashakthi Media

Donate Janashakthi Media

Leave a Reply

Your email address will not be published. Required fields are marked *