ಬೆಂಗಳೂರು: ಬಿ ಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ರಾಜ್ಯಪಾಲರು ಹಾಲಿ ಸಚಿವ ಸಂಪುಟವನ್ನು ವಿಸರ್ಜನೆ ಮಾಡಿದ್ದಾರೆ. ಯಡಿಯೂರಪ್ಪನವರು ಇಂದು ಮಧ್ಯಾಹ್ನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ತಮ್ಮ ರಾಜಿನಾಮೆ ಪತ್ರ ಸಲ್ಲಿಕೆ ಮಾಡಿದರು.
ಯಡಿಯೂರಪ್ಪ ಅವರನ್ನು ರಾಜ್ಯಪಾಲರು ಮುಂದಿನ ಮುಖ್ಯಮಂತ್ರಿ ಆಯ್ಕೆಯಾಗುವವರೆಗೂ ಹಂಗಾಮಿ ಸಿಎಂ ಆಗಿ ಮುಂದುವರೆಯುವಂತೆ ಸೂಚನೆ ನೀಡಿದ್ದಾರೆ. ಹಾಲಿ ಸಚಿವ ಸಂಪುಟವನ್ನು ವಿಸರ್ಜನೆ ಮಾಡಿದರು.
ಇದನ್ನು ಓದಿ: ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಯಡಿಯೂರಪ್ಪ
ಬಿ ಎಸ್ ಯಡಿಯೂರಪ್ಪ ಅವರು ತಮ್ಮ ರಾಜಿನಾಮೆ ವಿಚಾರವನ್ನು ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ ಎಂದು ಎಂದು ತಿಳಿದುಬಂದಿದೆ.
ಗುರುವಾರ ಹೊಸ ಸಿಎಂ ಪದಗ್ರಹಣ ಸಾಧ್ಯತೆ
ಜುಲೈ 29ರಂದು ಮುಂದಿನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಸಾಧ್ಯತೆ ಇದ್ದು, ಈಗಾಗಲೇ ಈ ಸಂಬಂಧ ಸಿದ್ಧತೆಗಳು ಆರಂಭಗೊಂಡಿವೆ. ಹೊಸಮುಖದ ಹುಡುಕಾಟದಲ್ಲಿರುವ ಬಿಜೆಪಿ ಹೈಕಮಾಂಡ್ ಒಲವು ಯಾರ ಮೇಲಿದೆ ಎಂಬುದು ನಾಳೆ ಅಧಿಕೃತವಾಗಿ ತಿಳಿಯಲಿದೆ. ಮಹಾರಾಷ್ಟ್ರ, ಗೋವಾ ಮಾದರಿಯಲ್ಲಿ ಹೊಸಬರ ಆಯ್ಕೆ ಆಗುವ ಸಾಧ್ಯತೆಯೂ ಇದೆ.