ದಕ್ಷಿಣ ಭಾರತದ ಖ್ಯಾತ ನಟಿ ಸಾಯಿ ಪಲ್ಲವಿ ಸದ್ಯ ಬಹುನಿರೀಕ್ಷಿತ ವಿರಾಟ ಪರ್ವಂ ಸಿನಿಮಾದ ಸರಣಿ ಪ್ರಚಾರದ ಸಂದರ್ಭದಲ್ಲಿ ಸಂದರ್ಶನವೊಂದರಲ್ಲಿ ಸಾಯಿ ಪಲ್ಲವಿ ಅವರಿಗೆ ರಾಜಕೀಯ ವಿಚಾರಗಳ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿ, ‘ನಾನು ರಾಜಕೀಯ ವಿಚಾರದಲ್ಲಿ ತಟಸ್ಥೆ. ನಮ್ಮ ಮನೆಯವರು ಹಾಗೆ. ಹಾಗಾಗಿ ನಾನು ತಟಸ್ಥೆ. ಎಡ- ಬಲ ಎನ್ನುವುದು ನನಗೆ ಗೊತ್ತಿಲ್ಲ’ ಎಂದಿದ್ದಾರೆ.
‘ನಾನು ರಾಜಕೀಯ ವಿಚಾರದಲ್ಲಿ ತಟಸ್ಥೆ. ನಾನು ಬೆಳೆದ ವಾತಾವರಣ ಹಾಗೇ ಇತ್ತು. ಆದರೆ ನಾನು ಯಾವುದು ಸರಿ ಯಾವುದು ತಪ್ಪು ಎಂದು ಹೇಳಲ್ಲ. ಇತ್ತೀಚಿಗೆ ಬಂದ ಕಾಶ್ಮೀರ್ ಫೈಲ್ಸ್ ಸಿನಿಮಾ ಕಾಶ್ಮೀರಿ ಪಂಡಿತರನ್ನು ಹೇಗೆ ಸಾಯಿಸಲಾಯಿತು ಎಂದು ತೋರಿಸಲಾಗಿದೆ. ಹಾಗೆ ಇತ್ತೀಚಿಗಷ್ಟೆ ಹಸು ಕಳ್ಳಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿ ಮುಸ್ಲಿಂ ಎಂದು ಆತನನ್ನು ಹತ್ಯೆ ಮಾಡಲಾಗಿದೆ. ಆ ವ್ಯಕ್ತಿಯನ್ನು ಹತ್ಯೆ ಮಾಡಿ ಜೈ ಶ್ರೀರಾಮ್ ಎಂದು ಘೋಷಣೆ ಹಾಕಿದ್ದಾರೆ. ಕಾಶ್ಮೀರ ಘಟನೆಗೂ ಈ ಘಟನೆಗೂ ವ್ಯತ್ಯಾಸ ಏನಿದೆ?’ ಎಂದು ಕೇಳಿದರು.
ನಮ್ಮ ಕುಟುಂಬ ನನಗೆ ಉತ್ತಮ ವ್ಯಕ್ತಿಯಾಗಿರಬೇಕೆಂದು ಹೇಳಿಕೊಟ್ಟಿದೆ. ತುಳಿತಕ್ಕೆ ಒಳಗಾದವರನ್ನು ರಕ್ಷಿಸಬೇಕು. ನಿಲುವು ಮುಖ್ಯವಲ್ಲ, ನೀವು ಉತ್ತಮ ವ್ಯಕ್ತಿಯಾಗಬೇಕು’ ಎಂದು ಸಾಯಿ ಪಲ್ಲವಿ ಹೇಳಿದ್ದಾರೆ.
ಸಾಯಿ ಪಲ್ಲವಿ ನೀಡಿರುವ ಹೇಳಿಕೆಯ ಕುರಿತು ಸಾಮಾಜಿಕ ಜಾಲಾತಣದಲ್ಲಿ ಈಗ ಚರ್ಚೆ ಆರಂಭವಾಗಿದೆ. ಕೆಲವರು ನಾನಾ ರೀತಿಯಲ್ಲಿ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಕೆಲವರು ಸಾಯಿ ಪಲ್ಲವಿ ಈ ರೀತಿ ಹೇಳುವುದಕ್ಕೂ ಧೈರ್ಯ ಬೇಕು ಎಂದು ಹೇಳಿದ್ದಾರೆ. ಇನ್ನು ಕೆಲವರು ಕಳ್ಳಸಾಗಾಣಿಕೆ ಹತ್ಯೆ ಮತ್ತು ಕಾಶ್ಮೀರ ನರವೇಧಕ್ಕೂ ಹೋಲಿಕೆ ಮಾಡಬೇಡಿ ಎಂದು ಹೇಳಿದ್ದಾರೆ.
ಯಾವುದೇ ರೀತಿಯ ಅಭಿಪ್ರಾಯ-ಭಿನ್ನಾಭಿಪ್ರಾಯಗಳಿಗೆ ತಲೆ ಕೆಡಿಸಿಕೊಳ್ಳದ ನಟಿ ಸಾಯಿ ಪಲ್ಲವಿ ಅಮೋಘ ನಟನೆ ನೋಡಿದ ಅಪಾರ ಅಭಿಮಾನಿಗಳು ಸಾಯಿ ಪಲ್ಲವಿಯನ್ನು ಇಷ್ಟಪಡುತ್ತಾರೆ. ಅವರ ಸಿನಿಮಾಗಾಗಿ ಕಾಯುತ್ತಾರೆ. ಸದ್ಯ `ವಿರಾಟ್ ಪರ್ವಂ’ ಚಿತ್ರದಲ್ಲಿ ನಕ್ಸಲ್ ಪಾತ್ರಕ್ಕೆ ಜೀವ ತುಂಬಿದ್ದಾರೆ. ಈ ಪಾತ್ರಕ್ಕಾಗಿ ಹಗಲು ರಾತ್ರಿ ಊಟ ಮಾಡದೇ 2 ದಿನಗಳ ಕಾಲ ಉಪವಾಸವಿದ್ದು ನಟಿಸಿರೋದು ಇದೀಗ ಮೆಚ್ಚುಗೆಗೆ ಪಾತ್ರವಾಗಿದೆ. ಈ ಚಿತ್ರದಲ್ಲಿ ಅವರು ವಿಭಿನ್ನ ಪಾತ್ರದಲ್ಲಿ ನಟಿಸಿದ್ದು, ತೆಲುಗು ನಟ ರಾಣಾ ದಗ್ಗುಬಾಟಿಯೊಂದಿಗೆ ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದಾರೆ. ವಿರಾಟಪರ್ವಂ ಚಿತ್ರ ಜೂನ್ 17 ರಂದು ಬಿಡಿಗಡೆಯಾಗುತ್ತಿದೆ.