ಸಂತ ಜೆರೋಸಾ ಶಾಲೆ ವಿವಾದ | ಇಬ್ಬರು ಬಿಜೆಪಿ ಶಾಸಕರು ಸೇರಿದಂತೆ 4 ಇತರರ ವಿರುದ್ಧ ಎಫ್‌ಐಆರ್‌

ಮಂಗಳೂರು: ಸಂತ ಜೆರೋಸಾ ಶಾಲೆಯ ಆಂಗ್ಲ ಶಿಕ್ಷಕಿ ಶ್ರೀ ಪ್ರಭಾ ಅವರು ತರಗತಿಯಲ್ಲಿ ಧಾರ್ಮಿಕ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಶಾಲೆಯ ಮುಂದೆ ಗಲಾಟೆ ಮಾಡಿದ್ದ ಬಿಜೆಪಿ ಶಾಸಕರಾದ ಡಿ. ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ ಹಾಗೂ ಬಿಜೆಪಿ ಬೆಂಬಲಿತ ಸಂಘಟನೆಯಾದ ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ಹಾಗೂ ಇತರ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ವಿವಿಧ ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಕಾನೂನುಬಾಹಿರ ಸಭೆ, ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವುದು, ಕ್ರಿಮಿನಲ್ ಬೆದರಿಕೆ ಮತ್ತು ಇತರ ಆರೋಪಗಳಿಗಾಗಿ ಅವರ ವಿರುದ್ಧ ವಿವಿಧ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅನಿಲ್ ಜೆರಾಲ್ಡ್ ಲೋಬೋ ಅವರು ಮಂಗಳೂರು ದಕ್ಷಿಣ ಪೊಲೀಸರಿಗೆ ನೀಡಿರುವ ದೂರಿನಲ್ಲಿ, “ಬಿಜೆಪಿ ಮತ್ತು ವಿಎಚ್‌ಪಿ ಮುಖಂಡರು ಶಾಲೆ ಎದುರು ಅಕ್ರಮವಾಗಿ ಪ್ರತಿಭಟನೆ ನಡೆಸಿದ್ದು, ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ. ಇಷ್ಟೆ ಅಲ್ಲದೆ, ಕ್ರಿಶ್ಚಿಯನ್ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಶಾಲೆಯ ನಿಯಮಗಳನ್ನು ಉಲ್ಲಂಘಿಸಲು ವಿದ್ಯಾರ್ಥಿಗಳನ್ನು ಪ್ರಚೋದಿಸಿದ್ದು, ಶಾಲೆಯ ಆಡಳಿತವನ್ನು ಬೆದರಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.ಸಂತ ಜೆರೋಸಾ

ಇದನ್ನೂ ಓದಿ: ಕರ್ನಾಟಕ ಬಜೆಟ್ 2024 LIVE: ವಿಪಕ್ಷಗಳ ಗದ್ದಲದ ನಡುವೆ ಬಜೆಟ್‌ ಮಂಡಿಸಿದ ಸಿದ್ದರಾಮಯ್ಯ

ಹಿಂದೂ-ಕ್ರೈಸ್ತರ ನಡುವೆ ಗಲಭೆ ಉಂಟು ಮಾಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಕದಡುವ ಉದ್ದೇಶದಿಂದ ಹೇಳಿಕೆ ನೀಡುತ್ತಿದ್ದಾರೆ ಎಂಬ ಆರೋಪವನ್ನು ಅವರ ಮೇಲೆ ಮಾಡಲಾಗಿದೆ. ಅದಾಗ್ಯೂ, ಬಿಜೆಪಿ ಮತ್ತು ವಿಎಚ್‌ಪಿ ನಾಯಕರು ಪೊಲೀಸರ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದು, ತಕ್ಷಣ ಪ್ರಕರಣಗಳನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ. ಒಂದು ವೇಳೆ ಪ್ರಕರಣ ವಾಪಾಸು ಪಡೆಯದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಬೆದರಿಕೆ ಹಾಕಿದ್ದಾರೆ.

ತಮ್ಮ ಶಾಸಕರ ಕೃತ್ಯವನ್ನು ಬೆಂಬಲಿಸಿರುವ ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು, “ಕೆಲವು ವರ್ಷಗಳ ಹಿಂದೆ ಮೂಲ್ಕಿ ಸುಂದರಂ ಶೆಟ್ಟಿ ರಸ್ತೆಯ ಮರುನಾಮಕರಣ ವಿರೋಧಿಸಿ ಸೇಂಟ್ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುವಂತೆ ಕಾಂಗ್ರೆಸ್ ಪಕ್ಷವು ಮಾಡಿತ್ತು. ಈ ವೇಳೆ ಕಾಂಗ್ರೆಸ್ ಶಾಸಕರೊಬ್ಬರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಆದರೆ ಅವರ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ. ಇದೀಗ ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್‌ ದಾಖಲಿಸುವ ಮೂಲಕ ಕಾಂಗ್ರೆಸ್‌ ಸರಕಾರ ಓಲೈಕೆ ರಾಜಕಾರಣ ಮಾಡುತ್ತಿದೆ” ಎಂದು ಆರೋಪಿಸಿದ್ರುದಾರೆ.

ಇಷ್ಟೆ ಅಲ್ಲದೆ, ರಾಮನ ವಿರುದ್ಧ ಮಾತನಾಡಿರುವವರ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಅವರು ಹೇಳಿದ್ದು, ಡಿಡಿಪಿಐ ದಯಾನಂದ ಆರ್.ನಾಯಕ್ ಅವರ ವರ್ಗಾವಣೆಯನ್ನು ಹಿಂಪಡೆಯಬೇಕು ಎಂದು ನಳಿನ್ ಕುಮಾರ್ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಉಪ್ಪು ಹುಳಿ ಖಾರ ಇಲ್ಲದ ಜನ ವಿರೋಧಿ ಬಜೆಟ್: ಸಿಎಂ ನಿಲುವು ಖಂಡಿಸಿ ಬಿಜೆಪಿ ಸಭಾತ್ಯಾಗ

ಪ್ರಕರಣವನ್ನು ಹಿಂಪಡೆಯುವಂತೆ ಒತ್ತಾಯಿಸಿ ಫೆಬ್ರವರಿ 19 ರಂದು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣೆಗಳ ಎದುರು ಜೈ ಶ್ರೀರಾಮ್ ಘೋಷಣೆ ಕೂಗಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಪರ ಸಂಘಟನೆ ವಿಎಚ್‌ಪಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಶಿವಾನಂದ್ ಮೆಂಡನ್ ತಿಳಿಸಿದ್ದಾರೆ. ಶಾಲಾ ಆವರಣದ ಹೊರಗೆ ‘ಜೈ ಶ್ರೀರಾಮ್’ ಘೋಷಣೆಗಳನ್ನು ಕೂಗುವುದು ದೇಶ ವಿರೋಧಿ ಚಟುವಟಿಕೆಯಲ್ಲ ಎಂದು ಹೇಳಿದ ಅವರು, “ಪೋಷಕರು ಶಿಕ್ಷಕರನ್ನು ಸಂಪರ್ಕಿಸಿದರೂ ಪೊಲೀಸರು ಶಿಕ್ಷಕರ ವಿರುದ್ಧ ಪ್ರಕರಣ ದಾಖಲಿಸಲು ಏಕೆ ನಿರಾಕರಿಸಿದರು” ಎಂದು ಕೇಳಿದ್ದಾರೆ.

ಡಿಡಿಪಿಐ ವರ್ಗಾವಣೆ

ಈ ನಡುವೆ ಮಂಗಳೂರು ಡಿಡಿಪಿಐ ವರ್ಗಾವಣೆಗೂ ಸೇಂಟ್ ಜೆರೋಸಾ ವಿಚಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಘಟನೆ ನಡೆದಾಗ ವರ್ಗಾವಣೆಗೆ ಪ್ರಸ್ತಾವನೆ ಬಂದಿತ್ತು ಎಂದು ಸಮರ್ಥಿಸಿಕೊಂಡಿದ್ದಾರೆ.

ವಿಡಿಯೊ ನೋಡಿ: ಕರ್ನಾಟಕದ 2024-25 ಬಜೆಟ್ ನ ಆಳ ಅಗಲವೇನು? Janashakthi Media

Donate Janashakthi Media

Leave a Reply

Your email address will not be published. Required fields are marked *