ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕು ಸಂಪೂರ್ಣ ನಿಯಂತ್ರಣಕ್ಕೆ ಬರುವವರೆಗೆ ಸರ್ಕಾರ ಮತ್ತು ಶಿಕ್ಷಣ ಇಲಾಖೆ ಯಾವ ಕಾರಣಕ್ಕೂ ಶಾಲೆಗಳನ್ನು ತೆರೆಯುವ ನಿರ್ಧಾರ ತೆಗೆದುಕೊಳ್ಳಬಾರದು. ಮಕ್ಕಳಿಗೆ ಆನ್‌ಲೈನ್ ಶಿಕ್ಷಣಕ್ಕೆ ಬೇಕಾದ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ, ಆ ಮೂಲಕವೇ ಶಿಕ್ಷಣ ನೀಡಬೇಕು ಹಾಗೂ ಪ್ರಸಕ್ತ ವರ್ಷ ಎಲ್ಲಾ ವಿದ್ಯಾರ್ಥಿಗಳಿಗೆ ಮುಂದಿನ ತರಗತಿಗೆ ಬಡ್ತಿ ನೀಡಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ತಪ್ಪು ನಿರ್ಧಾರವನ್ನು ಸರ್ಕಾರ ಮತ್ತು ಶಿಕ್ಷಣ ಇಲಾಖೆ ತೆಗೆದುಕೊಳ್ಳಬಾರದು. ಮಕ್ಕಳಿಗೆ ಆನ್‌ಲೈನ್ ಶಿಕ್ಷಣಕ್ಕೆ ಬೇಕಾದ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ, ಆ ಮೂಲಕವೇ ಶಿಕ್ಷಣ ನೀಡಬೇಕು ಹಾಗೂ ಪ್ರಸಕ್ತ ವರ್ಷ ಎಲ್ಲಾ ವಿದ್ಯಾರ್ಥಿಗಳಿಗೆ ಮುಂದಿನ ತರಗತಿಗೆ ಬಡ್ತಿ ನೀಡಬೇಕು ಎಂದು ಸಲಹೆ ನೀಡುತ್ತಿದ್ದೇನೆ. 5/5
— Siddaramaiah (@siddaramaiah) October 9, 2020
ಸರಣಿ ಟ್ವಿಟ್ ಮಾಡಿದ ಅವರು ನಿತ್ಯ ರಾಜ್ಯದಲ್ಲಿ 10,000 ದ ಅಸುಪಾಸು ಕೊರೊನಾ ಸೋಂಕಿನ ಪ್ರಕರಣಗಳು ದಾಖಲಾಗುತ್ತಿವೆ, ಈ ವರೆಗೆ 7857 ಮಂದಿ ಈ ಮಾರಕ ರೋಗಕ್ಕೆ ಬಲಿಯಾಗಿದ್ದಾರೆ. ಆದರೂ ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರ ಕಾಪಾಡಿಕೊಳ್ಳುವಲ್ಲಿ ಪ್ರಜ್ಞಾವಂತರೇ ಎಡವುತ್ತಿದ್ದಾರೆ ಅಂದಮೇಲೆ ಚಿಕ್ಕ ಮಕ್ಕಳಿಂದ ಇದನ್ನು ನಿರೀಕ್ಷಿಸಲು ಸಾಧ್ಯವೇ ಎಂದು ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ.
ನಿತ್ಯ ರಾಜ್ಯದಲ್ಲಿ 10,000 ದ ಅಸುಪಾಸು ಕೊರೊನಾ ಸೋಂಕಿನ ಪ್ರಕರಣಗಳು ದಾಖಲಾಗುತ್ತಿವೆ, ಈ ವರೆಗೆ 7,857 ಮಂದಿ ಈ ಮಾರಕ ರೋಗಕ್ಕೆ ಬಲಿಯಾಗಿದ್ದಾರೆ. ಆದರೂ ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರ ಕಾಪಾಡಿಕೊಳ್ಳುವಲ್ಲಿ ಪ್ರಜ್ಞಾವಂತರೇ ಎಡವುತ್ತಿದ್ದಾರೆ ಅಂದಮೇಲೆ ಚಿಕ್ಕ ಮಕ್ಕಳಿಂದ ಇದನ್ನು ನಿರೀಕ್ಷಿಸಲು ಸಾಧ್ಯವೇ? 2/5#schoolreopening
— Siddaramaiah (@siddaramaiah) October 9, 2020
ಈ ಹಿಂದೆ ಸರ್ಕಾರ ವಿವಿಧ ತರಗತಿಗಳಿಗೆ ಪರೀಕ್ಷೆ ನಡೆಸುವ ಇರಾದೆ ವ್ಯಕ್ತಪಡಿಸಿದಾಗ ಸರ್ಕಾರದ ನಿಲುವಿಗೆ ನಾನು ಬೆಂಬಲಿಸಿದ್ದೆ. ಆದರೆ ಈಗಿನ ಪರಿಸ್ಥಿತಿಯೇ ಬೇರೆಯಿದೆ. ಕೊರೊನಾ ಮಿತಿಮೀರಿ ಹರಡುತ್ತಿರುವ ಇಂಥಾ ಸಂದರ್ಭದಲ್ಲಿ ಶಾಲೆಗಳನ್ನು ತೆರೆಯುವುದು ದೊಡ್ಡ ಅವಘಡಕ್ಕೆ ಎಡೆಮಾಡಿಕೊಡಲಿದೆ. ಈಗಾಗಲೇ ಅಮೇರಿಕಾ ಮತ್ತು ಯುರೋಪಿನ ಕೆಲವು ದೇಶಗಳು ಶಾಲೆಗಳನ್ನು ತೆರೆದು ಸಮಸ್ಯೆಗಳನ್ನು ಮೈಮೇಲೆ ಹಾಕಿಕೊಂಡಿರುವ ಉದಾಹರಣೆಗಳು ಕಣ್ಣ ಮುಂದೆ ಇವೆ ಎಂದಿದ್ದಾರೆ.
ಈ ಹಿಂದೆ ಸರ್ಕಾರ ವಿವಿಧ ತರಗತಿಗಳಿಗೆ ಪರೀಕ್ಷೆ ನಡೆಸುವ ಇರಾದೆ ವ್ಯಕ್ತಪಡಿಸಿದಾಗ ಸರ್ಕಾರದ ನಿಲುವಿಗೆ ನಾನು ಬೆಂಬಲಿಸಿದ್ದೆ. ಆದರೆ ಈಗಿನ ಪರಿಸ್ಥಿತಿಯೇ ಬೇರೆಯಿದೆ. ಕೊರೊನಾ ಮಿತಿಮೀರಿ ಹರಡುತ್ತಿರುವ ಇಂಥಾ ಸಂದರ್ಭದಲ್ಲಿ ಶಾಲೆಗಳನ್ನು ತೆರೆಯುವುದು ದೊಡ್ಡ ಅವಘಡಕ್ಕೆ ಎಡೆಮಾಡಿಕೊಡಲಿದೆ. 1/5#schoolreopening pic.twitter.com/HVpt84lVZk
— Siddaramaiah (@siddaramaiah) October 9, 2020
ಶಾಲೆಗಳು ತೆರೆಯದಿರುವ ಕಾರಣಕ್ಕೆ ಬಾಲ್ಯ ವಿವಾಹ ಹಾಗೂ ಬಾಲ ಕಾರ್ಮಿಕ ಪದ್ಧತಿಗಳು ಹೆಚ್ಚುತ್ತಿರುವುದು ಸತ್ಯವಾದರೂ ಕೂಡ ಅದನ್ನು ಜಿಲ್ಲಾಡಳಿತ ಹಾಗೂ ಇತರೆ ಇಲಾಖೆಗಳ ಮೂಲಕ ನಿಯಂತ್ರಿಸಲು ಸಾಕಷ್ಟು ಅವಕಾಶಗಳಿವೆ. ಒಂದು ಸಮಸ್ಯೆಯ ಪರಿಹಾರಕ್ಕಾಗಿ ಇನ್ನೊಂದು ಹೊಸ ಸಮಸ್ಯೆಯನ್ನು ಹುಟ್ಟುಹಾಕುವುದು ಸರಿಯಲ್ಲ. ಮಕ್ಕಳು ಶಾಲೆಗಳಿಂದ ಕೊರೊನಾಗೆ ತುತ್ತಾಗಿ ಮನೆಗೆ ಬಂದರೆ ಮಕ್ಕಳಿಗೂ ಆಪತ್ತು, ಜೊತೆಗೆ ಮನೆಯಲ್ಲಿರುವ ಹಿರಿಯರಿಗೂ ಆಪತ್ತು ಉಂಟಾಗಲಿದೆ. ಇಂತಹ ಅವಘಡಕ್ಕೆ ಎಡೆಮಾಡಿಕೊಡುವುದು ಬೇಡ ಎಂದು ಸಿದ್ದರಾಮಯ್ಯ ಟ್ವಿಟ್ ಮೂಲಕ ಸರ್ಕಾರಕ್ಕೆ ಎಚ್ಚರಿಸಿದ್ದಾರೆ.