ವಿಧಾನಸಭಾ ಕ್ಷೇತ್ರ ಉಪಚುನಾವಣೆ: ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ

ದಾವಣಗೆರೆ: ಏಪ್ರಿಲ್ 9ರಂದು ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದೂ, ದಾವಣಗೆರೆ ದಕ್ಷಿಣ ಕ್ಷೇತ್ರವೂ ಒಂದು. ಟಿಕೆಟ್’ಗಾಗಿ ಭಾರೀ ಆಂತರಿಕ ಜಟಾಪಟಿಯ ನಡುವೆ, ಸಮರ್ಥ್ ಶಾಮನೂರು ತಮ್ಮ ನಾಮಪತ್ರವನ್ನು ಮಾರ್ಚ್. 20ರಂದು ಸಲ್ಲಿಸಿದ್ದಾರೆ. ಉಪಚುನಾವಣೆ
ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷೇತರ ಅಭ್ಯರ್ಥಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸೇರಿ ಒಟ್ಟು 2 ಸೆಟ್ ನಾಮಪತ್ರ ಸಲ್ಲಿಸಿದ್ದಾರೆ.

ಗಮನಿಸಬೇಕಾದ ವಿಚಾರ ಏನಂದರೆ, ಕಾಂಗ್ರೆಸ್ ಹೈಕಮಾಂಡ್, ಅಧಿಕೃತವಾಗಿ ಟಿಕೆಟ್ ಘೋಷಣೆ ಮಾಡುವ ಮುನ್ನವೇ ಸಮರ್ಥ್ ನಾಮಪತ್ರ ಸಲ್ಲಿಸುವ ಮೂಲಕ, ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ಶಾಕ್ ನೀಡಿದ್ದಾರೆ. ಇನ್ನೊಂದು ಕಡೆ, ಮತ್ತೋರ್ವ ಟಿಕೆಟ್ ಆಕಾಂಕ್ಷಿಯಾಗಿರುವ ಸಾದಿಕ್ ಪೈಲ್ವಾನ್ ಕೂಡಾ ನಾಮಪತ್ರವನ್ನು ಸಲ್ಲಿಸಿದ್ದಾರೆ.

ಇದನ್ನೂ ಓದಿ: 20ಕ್ಕೂ ಹೆಚ್ಚು ವರ್ಗಾವಣೆಗಳ ನಡುವೆಯೂ ಪ್ರಾಮಾಣಿಕತೆ ಉಳಿಸಿದ ಐಎಎಸ್ ಅಧಿಕಾರಿ

ಮೂರು ಸೆಟ್ ನಾಮಪತ್ರವನ್ನು ಸಮರ್ಥ್ ಸಲ್ಲಿಸಿದ್ದಾರೆ

ತಾಯಿ ಮತ್ತು ಸಂಸದೆಯೂ ಆಗಿರುವ ಡಾ.ಪ್ರಭಾ ಮಲ್ಲಿಕಾರ್ಜುನ ಜೊತೆ ಆಗಮಿಸಿದ ಸಮರ್ಥ್, 2ಸೆಟ್ ನಾಮಪತ್ರವನ್ನು ಸಲ್ಲಿಸಿದ್ದಾರೆ. ಮತ್ತೆ ಸೋಮವಾರ ನಾಮಪತ್ರ ಸಲ್ಲಿಸುವುದಾಗಿ ಸಮರ್ಥ್ ಹೇಳುವ ಮೂಲಕ, ಟಿಕೆಟ್ ಶಾಮನೂರು ಕುಟುಂಬಕ್ಕೇ ಎಂದು ವಿಶ್ವಾಸದಿಂದ ಹೇಳಿದಂತಿದೆ.

ಯುಗಾದಿ ಹಬ್ಬದಲ್ಲಿ ಹೊಸ ಚಿಗುರು ಬರುತ್ತದೆ ಎನ್ನುವ ಮಾತಿದೆ, ಸಮರ್ಥ್ ಮತ್ತೆ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಡಾ.ಪ್ರಭಾ ಮಲ್ಲಿಕಾರ್ಜುನ ಈ ಸಂದರ್ಭದಲ್ಲಿ ಹೇಳಿದ್ದಾರೆ. ಇಂದು, ಬೆಂಗಳೂರಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ಆಗಮಿಸಲಿದ್ದಾರೆ. ಈ ಹೊತ್ತಿನಲ್ಲಿ, ಸಮರ್ಥ್ ನಾಮಪತ್ರ ಸಲ್ಲಿಸಿದ್ದು ಕುತೂಹಲಕ್ಕೆ ಕಾರಣವಾಗಿದೆ.

ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆ

ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ, ಈ ಎರಡೂ ಕ್ಷೇತ್ರಗಳಲ್ಲಿ ಟಿಕೆಟ್’ಗಾಗಿ ಭಾರೀ ಪೈಪೋಟಿಯಿದೆ. ಬಾಗಲಕೋಟೆಯಲ್ಲಿ ಮೇಟಿ ಕುಟುಂಬದ ಸದಸ್ಯರೇ ಟಿಕೆಟ್’ಗಾಗಿ ಫೈಟ್ ಮಾಡುತ್ತಿದ್ದಾರೆ. ಇನ್ನು, ದಾವಣಗೆರೆಯಲ್ಲಿ ಸಚಿವ ಎಸ್‌ಎಸ್ ಮಲ್ಲಿಕಾರ್ಜುನ್, ತಮ್ಮ ಪುತ್ರ ಸಮರ್ಥ್’ಗೆ ಟಿಕೆಟ್ ನೀಡಬೇಕೆಂದು ಹಠಕ್ಕೆ ಬಿದ್ದಿದ್ದಾರೆ. ಮಗನಿಗೆ ಟಿಕೆಟ್ ನೀಡಬೇಕೆಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ದೆಹಲಿ ಮಟ್ಟದಲ್ಲಿ ಒತ್ತಡವನ್ನು ಹಾಕುತ್ತಿದ್ದಾರೆ.

ಬಿಫಾರಂ ನಿಮಗೇ ಸಿಗುವ ವಿಶ್ವಾಸ ಇದೆಯಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಮರ್ಥ್, ನಮ್ಮ ತಾತ (ಶಾಮನೂರು ಶಿವಶಂಕರಪ್ಪ) ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಬೆಳೆಯುವುದಕ್ಕೆ ಅವರ ಕೊಡುಗೆ ತುಂಬಾ ಇದೆ. ಸೋಮವಾರ ಮತ್ತೆ ಬಂದು ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಹೇಳಿದ್ದಾರೆ.

ಬಿಜೆಪಿ ಈಗಾಗಲೇ ಟಿಕೆಟ್ ಘೋಷಣೆ ಮಾಡಿದೆ

ಉಪಚುನಾವಣೆಗೆ ಬಿಜೆಪಿ ಈಗಾಗಲೇ ಟಿಕೆಟ್ ಘೋಷಣೆ ಮಾಡಿದೆ. ಬಾಗಲಕೋಟೆಯಲ್ಲಿ ಚರಂತಿಮಠ ಮತ್ತು ದಾವಣಗೆರೆ ದಕ್ಷಿಣದಲ್ಲಿ ಶ್ರೀನಿವಾಸ ಟಿ ದಾಸಕರಿಯಪ್ಪ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಆದರೆ, ಇದರಲ್ಲಿ ಬದಲಾವಣೆಯಾಗಬಹುದು ಎನ್ನುವ ಹೊಸ ಬಾಂಬ್ ಅನ್ನು ಬಸನಗೌಡ ಪಾಟೀಲ್ ಯತ್ನಾಳ್ ಸಿಡಿಸಿದ್ದಾರೆ.

ಎರಡು ದಿನಗಳ ಹಿಂದೆ ನಡೆದ ಕಾಂಗ್ರೆಸ್ ಸಭೆಯಲ್ಲಿ ದೊಡ್ಡ ಹಂಗಾಮವೇ ನಡೆದಿತ್ತು. ಶಾಮನೂರು ಕುಟುಂಬಕ್ಕೆ ಟಿಕೆಟ್ ನೀಡಬೇಕೆಂದು ಒಂದು ಗುಂಪು, ಅಲ್ಪಸಂಖ್ಯಾತರಿಗೆ ಕೊಡಬೇಕೆಂದು ಇನ್ನೊಂದು ಗುಂಪು, ಅಹಿಂದ ವರ್ಗಕ್ಕೆ ಕೊಡಬೇಕು ಎಂದು ಮತ್ತೊಂದು ಗುಂಪು, ಭಾರೀ ಒತ್ತಡವನ್ನೇ ಹಾಕಿತ್ತು. ಅಧಿಕೃತವಾಗಿ, ಕಾಂಗ್ರೆಸ್ ಟಿಕೆಟ್ ಘೋಷಣೆ ಇಂದು ಅಥವಾ ನಾಳೆ ಘೋಷಣೆ ಆಗಬಹುದು.

ಇದನ್ನೂ ನೋಡಿ: ಜೀವನೋಪಾಯದ ಮೇಲೆ ದಾಳಿ ಖಂಡಿಸಿ ಫ್ರೀಡಂ ಪಾರ್ಕ್‌ನಲ್ಲಿ ಮಹಿಳಾ ದಿನದ ಪ್ರತಿಭಟನೆ Janashakthi Media

Donate Janashakthi Media

Leave a Reply

Your email address will not be published. Required fields are marked *